NEWSನಮ್ಮಜಿಲ್ಲೆ

ಇಂದಿನಿಂದ ಮನೆ-ಮನೆ ಕೋವಿಡ್ ಸಮೀಕ್ಷೆ

ಬೆಂಗಳೂರು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರ: ಇಂದಿನಿಂದ (ಏ.12) 30 ರವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಕೋವಿಡ್ ಸರ್ವೇಕ್ಷಣಾ ತಂಡಗಳಿಂದ ಮನೆ ಮನೆ ಸಮೀಕ್ಷಾ ಕಾರ್ಯ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಾಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ತರಬೇತಿ  ಕುರಿತು ಮಾಹಿತಿ ನೀಡಿದರು.

ಕೋವಿಡ್-19 ರ ಸೋಂಕನ್ನು ಸಮುದಾಯ ಮಟ್ಟದಲ್ಲಿ ಹರಡುವುದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ದೇಶನದಂತೆ ಲಾಕ್‌ಡೌನ್ ಪರಿಸ್ಥಿತಿಯನ್ನು ಜಿಲ್ಲೆಯಾದ್ಯಂತ ಅನುಸರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸಮುದಾಯದಲ್ಲಿ ನಿರಂತರವಾಗಿ ಆರೋಗ್ಯ ಸ್ಥಿತಿಗತಿಗಳ ಬಗ್ಗೆ ನಿಗಾಯಿಡಬೇಕು ಎಂದ ಅವರು ಈ ಹಿನ್ನಲೆಯಲ್ಲಿ ಮನೆ ಮನೆ ಸಮೀಕ್ಷೆಯನ್ನು ಕೈಗೊಂಡು ಕೋವಿಡ್-19 ಸೋಂಕು ಲಕ್ಷಣಗಳು ಇದ್ದರೆ ಕೂಡಲೇ ಪತ್ತೆಹಚ್ಚಿ ಚಿಕಿತ್ಸೆ ಒದಗಿಸುವ ಮೂಲಕ ಇತರರಿಗೆ ಹರಡುವುದನ್ನು ತಪ್ಪಿಸುವುದು ಹಾಗೂ ಈ ಸಂದರ್ಭದಲ್ಲಿ ದೈನಂದಿನ ವಯಕ್ತಿಕ ಶುಚಿತ್ವ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು  ತಿಳಿಸಿದರು.

ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕಾ  ಕ್ರಮವಾಗಿ ಮೂರು ತಂಡಗಳನ್ನು ರಚಿಸಲಾಗಿದ್ದು, ಗ್ರಾಮಮಟ್ಟದ ಸಮಿತಿ, ಪ್ರಾಥಮಿಕ ಆರೋಗ್ಯ ಮತ್ತು ತಾಲ್ಲೂಕು ಮಟ್ಟದ ತಂಡ ಹಾಗೂತಾಲ್ಲೂಕು ಮಟ್ಟದಲ್ಲಿ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ ಎಂದರು.

ಗ್ರಾಮ ಮಟ್ಟದ ಸಮಿತಿಯು ಮೂರು ಸದ್ಯರುಗಳನ್ನು ಒಳಗೊಂಡಿದ್ದು, ಅವರು ಮನೆ ಮನೆ ಭೇಟಿ ನೀಡಿ ಪ್ರತಿ ಮನೆಯ ಕುಟುಂಬದ ಇಲ್ಲಾ ಸದಸ್ಯರ ಜ್ವರ ಸಮೀಕೆ ನಡೆಸುವುದು, ಪ್ರತಿ ದಿನ ಕನಿಪ್ಠ 60 ಮನೆ ಭೇಟಿ ನೀಡುವುದು,  ಕೋವಿಡ್ 19ರ ಸುರಕ್ಷತೆ ಬಗ್ಗೆ ಅರಿವು ಮೂಡಿಸುವುದು ಮತ್ತು ಜ್ವರ, ಕೆಮ್ಮು, ನೆಗಡಿ ಲಕ್ಷಣ ಇದ್ದರೆ ಅವರನ್ನು ಸ್ಥಳೀಯ ತಪಾಸಣಾ ಕೇಂದ್ರಕ್ಕೆ ಕಳುಹಿಸುವುದು, ಈ ತಂಡದ ಜವಾಬ್ದಾರಿ ಆಗಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಹಂತದ ತಂಡದಲ್ಲಿ ನಾಲ್ಕು ಸದಸ್ಯರು ಇದ್ದು, ಅವರು ಜ್ವರ ಪ್ರಕರಣಗಳ ತಪಾಸಣೆ ನಂತರ ಪರೀಕ್ಷೆಯನ್ನು (ಥ್ರೋಟ್ ಸ್ವ್ಯಾಬ್ ) ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿ ಕೊಡುವುದು, ಪರೀಕ್ಷಾ ಫಲಿತಾಂಶ ಬರುವ ವರೆಗೂ ಪ್ರಕರಣವನ್ನು ಕ್ವಾರಂಟೈನ್ ಮಾಡುವುದು, ಮತ್ತು ಪ್ರಕರಣವು ಕೋವಿಡ್ 19 ಪಾಸಿಟಿವ್ ಎಂದು ಕಂಡು ಬಂದಲ್ಲಿ ಕೂಡಲೇ ಸೋಂಕಿತ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರದಿಂದ ಗುರುತಿಸಲಾಗಿರುವ ಆಸ್ಪತ್ರೆಗೆ ದಾಖಲಿಸುವುದು, ಈ ತಂಡದ ಜವಾಬ್ದಾರಿ ಆಗಿದೆ ಎಂದು ಹೇಳಿದರು.

ತಾಲೂಕು ಮಟ್ಟದ ಕ್ಷಿಪ್ರ ಕಾರ್ಯಪಡೆಯು ಆರು ಸದಸ್ಯರನ್ನು ಒಳಗೊಂಡಿದ್ದು, ಇವರು ಕೋವಿಡ್ 19 ಪಾಸಿಟೀವ್ ಪ್ರಕರಣಗಳ ತಪಾಸಣೆ ಹಾಗೂ ಪ್ರಕರಣವನ್ನು ಕೋವಿಡ್ 19 ಆಸ್ಪತ್ರೆಗೆ ವರ್ಗಾಯಿಸುವುದು, ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕದ ಪಟ್ಟಿಯನ್ನು ತಯಾರಿಸುವುದು,  ಅದರಲ್ಲಿ 60 ವರ್ಷ ಮೇಲ್ಪಟ್ಟವರನ್ನು ಪ್ರತ್ಯೇಕಿಸುವುದು, ಸರ್ವೇಕ್ಷಣಾ ಕಾರ್ಯವನ್ನು ಬಲಪಡಿಸುವುದು ಹಾಗೂ  ಸೋಂಕು ಇರುವ ಪ್ರದೇಶಗಳನ್ನು ಲಾಕ್‌ಡೌನ್ ಮತ್ತು ಸೀಲ್ ಡೌನ್ ಮಾಡಿಸುವುದು. ಈ ಎಲ್ಲ ಜವಾಬ್ದಾರಿಗಳನ್ನು ತಂಡವು ನಿರ್ವಹಿಸಲಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಶಿವರಾಮೇಗೌಡ, ವಿಶೇಷ ಜಿಲ್ಲಾಧಿಕಾರಿ ಜಗದೀಶ್,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿಗಳಾದ ಡಾ.ಶ್ರೀನಿವಾಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕಿ ಪಲ್ಲವಿ ಹೊನ್ನಾಪುರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ