VIJAYAPATHA.IN > ವಿಜಯಪಥ > NEWS > ಕೃಷಿ > ಎಚ್.ಡಿ.ಕೋಟೆ: ತಂತಿ ಬೇಲಿಗೆ ಸಿಲುಕಿ ನಿತ್ರಾಣಗೊಂಡಿದ್ದ ಚಿರತೆ ರಕ್ಷಣೆ
-
ಆಹಾರ ಅರಸಿ ನಾಡಿಗೆ ಬಂದ ಚಿರತೆ
-
ತೋಟದ ತಂತಿ ಬೇಲಿಗೆ ಸಿಲುಕಿ ನಿತ್ರಾಣಗೊಂಡಿತ್ತು
-
ಎಚ್.ಡಿ. ಕೋಟೆ ತಾಲೂಕಿನ ಹೈರಿಗೆ ಗ್ರಾಮದ ತೋಟದಲ್ಲಿ ಘಟನೆ
ಮೈಸೂರು: ಆಹಾರ ಅರಸಿ ನಾಡಿಗೆ ಬಂದ ಚಿರತೆ ರಕ್ಷಣೆಗಾಗಿ ಹಾಕಿದ್ದ ತಂತಿ ಬೇಲಿಗೆ ಸಿಲುಕಿ ನಿತ್ರಾಣಗೊಂಡಿದ್ದ ಘಟನೆ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ.
ಆರ್ಮುಗಂ ಎಂಬುವರ ತೋಟದ ತಂತಿ ಬೇಲಿಗೆ ಚಿರತೆ ಸಿಲುಕಿ ನಿತ್ರಾಣಗೊಂಡಿತ್ತು, ಅದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ಮದ್ದು ನೀಡಿ ರಕ್ಷಣೆ ಮಾಡಿದ್ದಾರೆ.
ಸದ್ಯ ತಂತಿ ಬೇಲಿಯಲ್ಲಿ ಸಿಲುಕಿ ಒದ್ದಾಡಿದ್ದರಿಂದ ನಿತ್ರಾಣಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅದು ಚೇತರಿಸಿಕೊಂಡ ಬಳಿಕ ಅರಣ್ಯಕ್ಕೆ ಬಿಡುವ ವ್ಯವಸ್ಥೆ ಮಾಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
Related
Deva