NEWS

ಏ.28ರ ಸಂಜೆ ವೇಳೆಗೆ ಹೊಸ ಮೂರು ಪ್ರಕರಣ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಬೆಳಗ್ಗೆ 8 ಪ್ರಕರಣ ಪತ್ತೆಯಾಗಿತ್ತು ಮತ್ತೆ ಸಂಜೆವೇಳೆಗೆ ಮೂವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು, ಈ ಮೂಲಕ ಹೊಸದಾಗಿ 11 ಪ್ರಕರಣಗಳು ಇಂದು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆಯಾಗಿದೆ.

ಬೆಳಗ್ಗೆ ಎಂಟು ಪ್ರಕರಣಗಳು ಪತ್ತೆಯಾಗಿದ್ದವು ಇದೀಗ ಬಾಗಲಕೋಟೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಇಂದು ಒಂದೇ ದಿನ 11 ಪ್ರಕರಣಗಳು ಪತ್ತೆಯಾಗಿವೆ.

ಬೆಳಗ್ಗೆ ಕಲಬುರಗಿಯಲ್ಲಿ 6, ಬೆಂಗಳೂರು ಮತ್ತು ಗದಗದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿತ್ತು. ಇದೀಗ ಬಾಗಲಕೋಟೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ.

ರೋಗಿ ಸಂಖ್ಯೆ 521 – 20 ಯುವತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ರೋಗಿ ಸಂಖ್ಯೆ 523, 22 ವರ್ಷದ ಯುವಕ. ಇವರಿಬ್ಬರಿಗೂ ರೋಗಿ ಸಂಖ್ಯೆ 381ರ ಸಂಪರ್ಕದಿಂದ ತಲುಗಿದೆ.

ರೋಗಿ ಸಂಖ್ಯೆ 522 – 11 ವರ್ಷದ ಬಾಲಕ. ಇತನಿಗೆ ರೋಗಿ ಸಂಖ್ಯೆ 456ರಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಇಲ್ಲಿಯವರೆಗೂ 20 ಮಂದಿ ಬಲಿಯಾಗಿದ್ದಾರೆ. ಇನ್ನು 207 ಮಂದಿ ಗುಣಮುಖರಾಗಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು