NEWSದೇಶ-ವಿದೇಶನಮ್ಮರಾಜ್ಯ

ಒಂದೂವರೆ ಶತಮಾನದ ಬಳಿಕ ಧಾರವಾಡಕ್ಕೆ ಭೇಟಿ ನೀಡಿದ ಕನ್ನಡ ನಿಘಂಟು ತಜ್ಞ ಕಿಟೆಲ್ ಕುಟುಂಬ

Kannada lexicographer Kitel family visited Dharwad after a century and a half

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕನ್ನಡ ನಿಘಂಟು ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದ ರೆವರೆಂಡ್ ಫರ್ಡಿನೆಂಡ್ ಕಿಟೆಲ್ ಅವರ ಕುಟುಂಬ ಒಂದೂವರೆ ಶತಮಾನದ ಅಂದರೆ ಬರೋಬರಿ 150 ವರ್ಷಗಳ ಬಳಿಕ ಕರ್ನಾಟಕಕ್ಕೆ ಭೇಟಿ ನೀಡಿದೆ.

ಅದರಲ್ಲೂ ವಿದ್ಯಾಕಾಶಿ ಧಾರವಾಡಕ್ಕೆ ಕಿಟೆಲ್ ಕುಟುಂಬಸ್ಥರು ಭೇಟಿ ನೀಡಿದ್ದು ಈ ವೇಳೆ ಸಂತಸ ಹಂಚಿಕೊಂಡಿದ್ದಾರೆ. ಸುದೀರ್ಘ ಅವಧಿಯ ಬಳಿಕ ಜರ್ಮನಿಯಿಂದ ಕರ್ನಾಟಕಕ್ಕೆ ಕಿಟೆಲ್‌ ಅವರ ಕುಟುಂಬ ಭೇಟಿ ನೀಡಿದ್ದು ವಿಶೇಷವಾಗಿತ್ತು.

ಕಿಟೆಲ್ ಅವರ ಮರಿಮೊಮ್ಮಗಳಾದ ಅಲ್ಮುತ್ ಬರ್ಬೋರ್ ಎಲಿನೋರ್ ಮಯರ್, ಮೊಮ್ಮಗ ಈವ್ಸ್ ಪ್ಯಾಟ್ರಿಕ್ ಹಾಗೂ ಅವರ ಸ್ನೇಹಿತ ಜಾನ್ ಫೆಡ್ರಿಕ್ ಧಾರವಾಡಕ್ಕೆ ಭೇಟಿ ನೀಡಿದವರು.

ಈ ವೇಳೆ ಧಾರವಾಡದಲ್ಲಿರುವ ಕಿಟೆಲ್ ಹೆಸರಿನ ಕಾಲೇಜು ಹಾಗೂ ಕಿಟೆಲ್‌ ಅವರು ನೆಲೆಸಿದ್ದ ಜಾಗಗಳನ್ನು ಅವರು ವೀಕ್ಷಣೆ ಮಾಡಿದರು. ಇನ್ನು ಕಿಟೆಲ್‌ ಅವರ 200ನೇ ಜನ್ಮ ದಿನಾಚರಣೆಯನ್ನು ಧಾರವಾಡದಲ್ಲೇ ಆಯೋಜಿಸಲು ಕುಟುಂಬ ನಿರ್ಧರಿಸಿರುವುದಾಗಿ ತಿಳಿಸಿದರು.

ಅಲ್ಲದೇ ಕಿಟೆಲ್‌ ಅವರು ಬಳಸುತ್ತಿದ್ದ ಕೆಲವೊಂದಿಷ್ಟು ವಸ್ತುಗಳನ್ನು ಮ್ಯೂಸಿಯಂಗೆ ಕೊಡಲು ಈ ಕುಟುಂಬ ನಿರ್ಧರಿಸಿರುವುದಾಗಿ ಹೇಳಿದೆ. ಜರ್ಮನಿಯಿಂದ ಕರ್ನಾಟಕಕ್ಕೆ ಬಂದ ಕುಟುಂಬ ಬಹಳ ಸಂತಸ ವ್ಯಕ್ತಪಡಿಸಿದ್ದು, ಇದು ನಮ್ಮ ತವರೂರಿನಂತೆ ಭಾಷವಾಗುತ್ತಿದೆ ಎಂದು ಖುಷಿಪಟ್ಟಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ