VIJAYAPATHA.IN > ವಿಜಯಪಥ > NEWS > Crime > ಕೌಟುಂಬಿಕ ಕಲಹ: ಅಣ್ಣನ ಪತ್ನಿ, ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಮ್ಮ ಪರಾರಿ
ಹಾವೇರಿ: ಕೌಟುಂಬಿಕ ಕಲಹದಿಂದ ತನ್ನ ಅಣ್ಣನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ ಮೈದುನ ಪರಾರಿಯಾಗಿರುವ ಘಟನೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.
ಯಳ್ಳೂರು ಗ್ರಾಮದ ಗೀತಾ ಮರೀಗೌಡ್ರು (32), ಅಕುಲ್ (10), ಅಂಕಿತಾ (7) ಕೊಲೆಯಾದವರು. ಈ ಮೂವರನ್ನು ಹತ್ಯೆ ಮಾಡಿ ಕುಮಾರಗೌಡ್ ಮರೀಗೌಡ್ರು (35) ತಲೆಮರೆಸಿಕೊಂಡಿದ್ದಾನೆ.
ಆರೋಪಿಯ ಅಣ್ಣ ಹೊನ್ನೇಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆರೋಪಿಯು ಅಣ್ಣನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಯಳ್ಳೂರು ಗ್ರಾಮದ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಆದರೆ ಕೊಲೆಗೆ ನಿಖರವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)
Related
admin.savhn