NEWSನಮ್ಮರಾಜ್ಯರಾಜಕೀಯ

ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ಎಂಟಿಬಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಕೋವಿಡ್-19 ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್-19 ಮೂರನೇ ಅಲೆ ಎದುರಾಗದಂತೆ ತಡೆಯಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಯ ಕೋವಿಡ್-19 ಹಾಗೂ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವ ಎನ್.ನಾಗರಾಜು ತಿಳಿಸಿದರು.

ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಕೋವಿಡ್-19 ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ವೈರಾಣು ರೋಗ ಹರಡದಂತೆ ಮುಂಜಾಗ್ರತಾ ಕ್ರಮ, ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಭೆ”ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್-19 ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಿದ್ದು, ಅಧಿಕಾರಿಗಳು ತಪ್ಪದೇ ಪಾಲಿಸಬೇಕು ಹಾಗೂ ಸಾರ್ವಜನಿಕರಿಂದ ಕೋವಿಡ್ ನಿಯಮಗಳು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಜನಸಂದಣಿ ಸ್ಥಳಗಳಾದ ಸಂತೆಗಳು, ಮದುವೆ, ಮಾರುಕಟ್ಟೆಗಳು, ಜಾತ್ರೆಗಳು, ಬ್ರಹ್ಮ ರಥೋತ್ಸವ, ಕರಗ ಮಹೋತ್ಸವ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ತಾಲೂಕಿನಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಸಭೆ ಕರೆದು ಆಯಾ ತಾಲೂಕುಗಳಲ್ಲಿರುವ ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಹಾಗೂ ಇತರೆ ಧರ್ಮದ ಪ್ರಾರ್ಥನಾ ಮಂದಿರದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಬೇಕು ಹಾಗೂ ದೇವಾಲಯಗಳಲ್ಲಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದರು.

ಕೋವಿಡ್ ಸೋಂಕಿನ ಬಗ್ಗೆ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದಂತೆ ಅರಿವು ಮೂಡಿಸುವುದು ಅತ್ಯವಶ್ಯಕ ಎಂದರಲ್ಲದೆ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಇದುವರೆಗೂ 4.95 ಲಕ್ಷ ಲಸಿಕೆ ನೀಡಲಾಗಿದ್ದು, ಜಿಲ್ಲೆಗೆ ಹೆಚ್ಚಿನ ಕೋವಿಡ್ ಲಸಿಕೆಯನ್ನು ಪೂರೈಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಇತ್ತೀಚೆಗೆ ನೆಲಮಂಗಲ ತಾಲೂಕಿನಲ್ಲಿ ಕೋವಿಡ್ ಸೋಂಕು ದೃಢಪಡುತ್ತಿರುವ ಪ್ರಮಾಣ ಶೇ. 3.1 ಅನ್ನು ತಲುಪಿದ್ದು, ತಾಲ್ಲೂಕು ವೈದ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾದ ಸಂದರ್ಭದಲ್ಲಿ ಕಂಟೈನ್‌ಮೆಂಟ್ ವಲಯ, ಸೆಮಿ ಕಂಟೈನ್‌ಮೆಂಟ್ ವಲಯಗಳಾಗಿ ವಿಂಗಡಿಸಬೇಕು ಎಂದು ಸಲಹೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಯ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮಾತನಾಡಿ, ಕೋವಿಡ್ ಮೂರನೇ ಅಲೆ ಬರದಂತೆ ತಡೆಯಲು ಜಿಲ್ಲೆಯಲ್ಲಿ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕೈಗಾರಿಕಾ ಕೇಂದ್ರಗಳು ಸೇರಿದಂತೆ ಜನಸಂದಣಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲಾಗುವುದು ಎಂದರಲ್ಲದೆ, ಪ್ರಸ್ತುತ ಜಿಲ್ಲೆಯಲ್ಲಿ 392 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ 1.81 ರಷ್ಟು ಪಾಸಿಟಿವಿಟಿ ದರವಿದೆ ಎಂದರು.

ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು, ಸೋಂಕು ಉಲ್ಬಣಗೊಂಡರೆ ಕಂಟೈನ್‌ಮೆಂಟ್ ಹಾಗೂ ಸೆಮಿ ಕಂಟೈನ್‌ಮೆಂಟ್ ವಲಯಗಳಾಗಿ ಗುರುತಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 13 ಗ್ರಾಮಗಳಿಗೆ ಟ್ಯಾಂಕರ್ ಮೂಲಕ, 30 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಹೆಚ್ಚುವರಿ ಅನುದಾನದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೋನ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿ ಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾ ರಾಣಿ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ಟಿ. ರಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಪ್ಪೇಸ್ವಾಮಿ, ತಹಸೀಲ್ದಾರ್ ಗಳು, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಗೂ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬಿನ್ನಮಂಗಲ ಗ್ರಾಮದಲ್ಲಿ ಇತ್ತೀಚೆಗೆ, ಮಳೆಯಿಂದಾಗಿ ಮನೆ ಗೋಡೆ ಕುಸಿದು, ಮೃತಪಟ್ಟ ಇಬ್ಬರ ಕುಟುಂಬದ ಸದಸ್ಯರಿಗೆ ತಲಾ ರೂ. 5 ಲಕ್ಷ ಪರಿಹಾರದ ಚೆಕ್ಕನ್ನು ಕರ್ನಾಟಕ ರಾಜ್ಯ ಸರ್ಕಾರದ ನೂತನ ಸಚಿವ ಎನ್.ನಾಗರಾಜು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿತರಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು