NEWSನಮ್ಮರಾಜ್ಯರಾಜಕೀಯ

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ: ಎಎಪಿ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪಕ್ಷ ಆಮ್ ಆದ್ಮಿ ಪಕ್ಷ, ಕಳೆದ 10 ವರ್ಷದಿಂದ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ, ವಿಫಲವಾಗಿದೆ. ಅಲ್ಲಿನ ಜನ ಅರವಿಂದ ಕೇಜ್ರಿವಾಲ್ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಶಾಸಕ, ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು.

ಆಮ್ ಆದ್ಮಿ ಪಕ್ಷ ಸ್ಥಾಪನೆಯಾಗಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್ ಮೈದಾನದಲ್ಲಿ ಸಂಸ್ಥಾಪನಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ದೆಹಲಿ ಮುಖ್ಯ ಸಚೇತಕರು ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ, ಬಿಜೆಪಿ ಎಲ್ಲಾ ಬಲವನ್ನು ಬಳಸಿದರೂ ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಆಗಿಲ್ಲ ಎಂದರು.

ಜನರ ಜೀವನವನ್ನು ಸುಧಾರಿಸಲು ಆಮ್ ಆದ್ಮಿ ಪಕ್ಷ ಕೆಲಸ ಮಾಡಿದೆ. ವಿದ್ಯುತ್, ಆರೋಗ್ಯ, ಸಾರಿಗೆ, ಶಿಕ್ಷಣದ ಬಗ್ಗೆ ನೀಡಿದ್ಧ ಭರವಸೆಗಳನ್ನು ಈಡೇರಿಸಲಾಗಿದೆ, ಕರ್ನಾಟಕದಲ್ಲಿ ಕೂಡ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ, ಅದಕ್ಕೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಆಮ್ ಆದ್ಮಿ ಪಕ್ಷ ಹುಟ್ಟಿದ್ದು ಬೆಂಗಳೂರಿನಲ್ಲಿ!: ಇದು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆಲ್ಲ ಹುಟ್ಟು ಹಬ್ಬದ ದಿನವಾಗಿದೆ. 11 ವರ್ಷದಲ್ಲೇ ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಬೆಳೆದಿದೆ. ಇದಕ್ಕೆ ಪಕ್ಷದ ಕಾರ್ಯಕರ್ತರು ಕಾರಣ, ಮೊದಲ ಚುನಾವಣೆಯಲ್ಲಿ ಸರ್ಕಾರಿ ಟೀಚರ್ ಮಗಳಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದೇವೆ. ಜನ ಸಾಮಾನ್ಯರ ನೋವು, ಸಾಮಾನ್ಯರಿಗೆ ಮಾತ್ರ ಅರ್ಥ ಆಗೋದು ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹೇಳಿದರು.

ಕರ್ನಾಟಕದಲ್ಲಿ ಹಣ, ಧರ್ಮ ಇಲ್ಲದೆ ರಾಜಕೀಯ ಮಾಡಕ್ಕಾಗಲ್ಲ ಎನ್ನುತ್ತಾರೆ, ಆದರೆ ನಾವು ಇಲ್ಲಿ ರಾಜಕೀಯ ಮಾಡಲು ಬಂದಿಲ್ಲ, ಬದಲಾವಣೆ ಮಾಡಲು ಬಂದಿದ್ದೇವೆ ಎಂದರು. ಆಮ್ ಆದ್ಮಿ ಪಕ್ಷ ಹುಟ್ಟಿದ್ದು ಬೆಂಗಳೂರಿನಲ್ಲೇ, ಅಂದು ನಾಯಕರು ಬೆಂಗಳೂರಿನ ಜಿಂದಾಲ್‌ ನೇಚರ್ ಕೇರ್ ನಲ್ಲಿ ಪಕ್ಷ ಕಟ್ಟುವ ಬಗ್ಗೆ ಚರ್ಚೆ ನಡೆದಿದ್ದು, ಅರವಿಂದ್ ಕೇಜ್ರಿವಾಲ್, ಜಸ್ಟಿಸ್ ಹೆಗಡೆಯವರು ಚರ್ಚೆ ಮಾಡಿದ್ದರು, ಮೂಲತಃ ಆಮ್ ಆದ್ಮಿ ಪಕ್ಷ ಹುಟ್ಟಿದ್ದು ಬೆಂಗಳೂರಿನಲ್ಲಿ ಎಂದರು.

ಕರ್ನಾಟಕದಲ್ಲಿ ಒಂದು ಸ್ಥಾನವನ್ನು ಗೆಲ್ಲದಿದ್ದರೂ ಜನ ಸಾಮಾನ್ಯರಿಗೆ ತೊಂದರೆಯಾದಾಗ ದನಿ ಎತ್ತಿದ್ದು ಆಮ್ ಆದ್ಮಿ ಪಕ್ಷ, ರಾಜ್ಯದಲ್ಲಿ ಶಾಲೆಗಳು, ಆಸ್ಪತ್ರೆಗಳ ಪರಿಸ್ಥಿತಿ ಹೇಗಿದೆ ಎಂದು ಎಲ್ಲರಿಗೂ ಗೊತ್ತಿದೆ, ಬದಲಾವಣೆ ತರಲು ಕೆಲಸ ಆರಂಭವಾಗಿದೆ ಎಂದರು.

ಕನ್ನಡ ಕೂಡ ರಾಷ್ಟ್ರಭಾಷೆ: ಮುಖ್ಯಮಂತ್ರಿ ಚಂದ್ರು- ಆಮ್ ಆದ್ಮಿ ಪಕ್ಷ ಇಡೀ ದೇಶವನ್ನು ಆವರಿಸಿಕೊಳ್ಳಲಿದೆ, ದೇಶದಲ್ಲಿ ಏಕವ್ಯಕ್ತಿ ಸರ್ಕಾರವನ್ನು ನೋಡಲಾಗಿದೆ. ದಕ್ಷಿಣ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭದ್ರವಾದ ತಳಪಾಯವನ್ನು ಹಾಕಲಾಗಿದೆ. ನಾವು ಮುನ್ನುಗ್ಗಬೇಕಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹೇಳಿದರು.

ಭಾಷೆ ಎಂದರೆ ಅದು ಬದುಕು, ಕನ್ನಡ ಕೂಡ ರಾಷ್ಟ್ರಭಾಷೆಗಳಲ್ಲಿ ಒಂದು, ಆದರೆ ಹಿಂದಿ ಒಂದನ್ನೇ ರಾಷ್ಟ್ರಭಾಷೆ ಎಂದು ಹೇಳಲಾಗುತ್ತದೆ ಅದು ತಪ್ಪು, ಇಡೀ ಪ್ರಪಂಚದಲ್ಲಿ ರಾಜ್ಯದ ಭಾಷೆಗಾಗಿ ಹೋರಾಟ ಮಾಡುತ್ತಿರುವುದು ಕರ್ನಾಟಕದಲ್ಲಿ ಮಾತ್ರ, ನಮ್ಮ ರಾಜ್ಯದ ಸುತ್ತ 5 ಭಾಷಿಕರ ಹಾವಳಿ ಹೆಚ್ಚಾಗಿದೆ.

ಇನ್ನು ಎಲ್ಲ ಭಾಷಿಕರ ಹಾವಳಿಯಿಂದ ಕನ್ನಡಿಗರು ಪರಿತಪಿಸುತ್ತಿದ್ದಾರೆ. ಯಾವ ಭಾಷೆಯನ್ನು ದ್ವೇಷ ಮಾಡುವಂತಿಲ್ಲ, ಆದರೆ ಸಂವಿಧಾನದಲ್ಲಿ ಕನ್ನಡವನ್ನು ಒಪ್ಪಿಕೊಂಡಿದೆ, ರಾಜ್ಯದಲ್ಲಿ ಕನ್ನಡ ಅನ್ನದ, ವ್ಯಾವಹಾರಿಕ ಭಾಷೆಯಾಗಬೇಕಿತ್ತು ಆದರೆ ಅದು ಆಗಿಲ್ಲ, ಶಿಕ್ಷಣ, ಆರೋಗ್ಯ, ಉದ್ಯೋಗದಲ್ಲಿ ಕನ್ನಡ ಇರಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ 26/11 ಮುಂಬೈ ದಾಳಿಯಲ್ಲಿ ಮಡಿದ ಸೈನಿಕರು ಮತ್ತು ನಾಗರಿಕರ ಗೌರವ ಸಲ್ಲಿಸಲು ಮೌನಾಚರಣೆ ಮಾಡಲಾಯಿತು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಆಮ್ ಆದ್ಮಿ ಪಕ್ಷ 11 ವರ್ಷಗಳ ಸಾಧನೆಗಳ ವಿಡಿಯೋ ಪ್ರಸಾರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಎಎಪಿ ಕರ್ನಾಟಕ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ರಾಜ್ಯ ಸಮೂಹನ ಮುಖ್ಯಸ್ಥ ಬ್ರಿಜೇಶ್ ಕಾಳಪ್ಪ. ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಡಾ. ಸತೀಶ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ವೀಣಾ, , ಸುಷ್ಮಾ ವಿ., ಜಗದೀಶ್ ಚಂದ್ರ, ಅಶೋಕ್ ಮೃತ್ಯುಂಜಯ ಹಾಗೂ ಪಕ್ಷದ ಅನೇಕ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು