ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮನ್ ಚಾಂಡಿ ಇಂದು (ಜುಲೈ 18) ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಉಮನ್ ಚಾಂಡಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಇಂದು ಬೆಳಗಿನ ಜಾವ ಸುಮಾರು 4 ಗಂಟೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಚಾಂಡಿ ಅವರು ಎರಡು ಬಾರಿ ಕೇರಳ ಮುಖ್ಯಮಂತ್ರಿಯಾಗಿದ್ದರು.
ಈ ವರ್ಷದ ಆರಂಭದಲ್ಲಿ ಚಾಂಡಿ ನ್ಯುಮೋನಿಯಾ ಸೋಂಕಿಗೆ ಒಳಗಾದ ಬಳಿಕ ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿತ್ತು.
ಉಮನ್ ಚಾಂಡಿ ಅವರ ನಿಧನವನ್ನು ಅವರು ಪುತ್ರ ಚಾಂಡಿ ಉಮ್ಮನ್ ಫೇಸ್ಬುಕ್ ಪೋಸ್ಟ್ನಲ್ಲಿ ಪ್ರಕಟಿಸಿದ್ದಾರೆ. “ಅಪ್ಪ ನಿಧನರಾಗಿದ್ದಾರೆ” ಎಂದು ತಿಳಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)