ಕೋಲಾರ: ಸಾರಿಗೆ ನೌಕರರ ಮೊದಲ ಹಂತದ ಸೈಕಲ್ ಜಾಥಾಗೆ ತೆರೆ – ಬೇಡಿಕೆ ಈಡೇರುವವರೆಗೂ ಹೋರಾಟ ನಿರಂತರ
ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ ಸರ್ಕಾರ ಕೊಟ್ಟ ಭರವಸೆಯಂತೆ ಸರ್ಕಾರಿ ನೌಕರರಂತೆ ಸಮಾನ ವೇತನವನ್ನು ವೇತನದ ಆಯೋಗದ ಮಾದರಿಯಲ್ಲಿ ನೀಡಬೇಕು ಹಾಗೂ ಇತರೆ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಾರಿಗೆ ನೌಕರರು ಕಳೆದ ಅಕ್ಟೋಬರ್ 10ರಂದು ಬಳ್ಳಾರಿಯಿಂದ ಆರಂಭಿಸಿದ ಸೈಕಲ್ ಜಾಥಾಗೆ ಶುಕ್ರವಾರ ತೆರೆ ಬಿದ್ದಿದೆ.
ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದ ಸುದ್ದಿ ನೀವು ಒಮ್ಮೆ ನೋಡಿ: http://ಕಲಬುರಗಿ: .27ರಂದು ಮೊಳಗಿತು ಸಾರಿಗೆ ನೌಕರರ ಹೋರಾಟದ ಕಹಳೆ – ಅಧಿಕಾರಿಗಳಲ್ಲಿ ತಲ್ಲಣ
ಇದಕ್ಕೂ ಮುನ್ನಾ ಕೆಎಸ್ಸಾರ್ಟಿಸಿ ನೌಕರರ ಒಕ್ಕೂಟದ ಸಾವಿರಾರು ನೌಕರರು ನಗರದ ಬಸ್ ನಿಲ್ದಾಣ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಸೈಕಲ್ ಜಾಥಾ ಹಾಗೂ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ವೆಂಕಟ್‌ರಾಜ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಆ ಬಳಿಕ ನಗರದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಕೆಎಸ್‌ಆರ್‌ಟಿಸಿ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್, 2021 ಏಪ್ರಿಲ್‌ನ ಸಾರಿಗೆ ನೌಕರರ ಮುಷ್ಕರ ಸಂದರ್ಭದಲ್ಲಿ ವಜಾ ಮಾಡಿರುವ ನೌಕರರನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು. ವರ್ಗಾವಣೆ, ಇಂಕ್ರಿಮೆಂಟ್ ಕಡಿತ ಮುಂತಾದ ಶಿಕ್ಷೆಗಳಿಗೆ ಗುರಿಪಡಿಸಿರುವುದನ್ನು ಹಿಂಪಡೆಯಬೇಕು. 2021ರ ಏಪ್ರಿಲ್ 6ರ ಹಿಂದಿನಂತೆ ಯಾಥಾ ಸ್ಥಿತಿ ಕಾಪಾಡಬೇಕೆಂದು ಆಗ್ರಹಿಸಿದರು.
ಸಾರಿಗೆ ನಿಗಮದ ನೌಕರರಿಗೆ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ನೀಡಬೇಕು, ನಾಲ್ಕು ವರ್ಷಗಳಿಗೊಮ್ಮೆ ಆಗುತ್ತಿರುವ ಅವೈಜ್ಞಾನಿಕ ವೇತನ ಪರಿಷ್ಕರಣೆ ಪದ್ಧತಿ ಕೈ ಬಿಟ್ಟು ಸರ್ಕಾರದ ಇಲಾಖೆ ಮತ್ತು ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವಂತೆ ವೇತನದ ಆಯೋಗದ ಮಾದರಿಯಲ್ಲಿ ನಮಗೂ ವೇತನ ನೀಡಬೇಕು ಒತ್ತಾಯಿಸಿದರು.
ಕೂಟದ ಪ್ರಧಾನ ಕಾರ್ಯದರ್ಶಿ ತಿಪ್ಪೆಸ್ವಾಮಿ ಮಾತನಾಡಿ, ಮುಖ್ಯಮಂತ್ರಿ ಅವರು ಈ ಹಿಂದೆ ಸಾರಿಗೆ ಸಂಸ್ಥೆ ಸಂಘಟನೆಗೆ ನೀಡಿರುವ ಲಿಖಿತ ಭರವಸೆ ಈಡೇರಿಸ ಬೇಕು, ಕಳೆದ 47 ದಿನಗಳಿಂದ ರಾಜ್ಯದ 18 ಜಿಲ್ಲೆಗಳಲ್ಲಿ ಸೈಕಲ್ ಜಾಥಾ ಮಾಡಿದ್ದು, ಪ್ರತಿ ಜಿಲ್ಲೆಯಲ್ಲೂ ಅಲ್ಲಿನ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಹಾ ಸಮಾವೇಶ ಹಮ್ಮಿಕೊಂಡು ಸರ್ಕಾರದ ಗಮನಸೆಳೆಯಲಾಗುತ್ತಿದೆ ಎ೦ದರು.
ಕಳೆದ 2020ರ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ನೀಡಿದ ಲಿಖಿತ ಭರವಸೆ ಎರಡು ವರ್ಷ ಕಳೆಯುತ್ತಾ ಬಂದರೂ ಈಡೇರಿಸಿಲ್ಲ. ವಿಕಾಸಸೌಧದಲ್ಲಿ ಮಂಡಿಸಿದ 9 ಬೇಡಿಕೆಗಳಲ್ಲಿ 5 ಮಾತ್ರ ಈಡೇರಿಸಿದ್ದು, ಉಳಿದ 4 ಬೇಡಿಕೆಗಳಿಗೆ ಆಗ್ರಹಿಸಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದು ನಿರಂತವಾಗಿ ಮುಂದುವರಿಯಲಿದೆ ಎಂದು ತಿಳಿಸಿದರು.
ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳಾದ ಬಿ.ವಿ.ಶ್ರೀನಿವಾಸಯ್ಯ, ಎನ್.ಕೆ. ಮಂಜುನಾಥ್, ಸಿ.ಶಂಕರಪ್ಪ, ಸೋಮಶೇಖರ್, ಚಿನ್ನಪ್ಪ, ಜಿ.ಎಸ್ .ನಾಗರಾಜ್, ಕೂಟದ ರಾಜ್ಯ ಮಹಿಳಾಧ್ಯಕ್ಷೆ ಚಂಪಕಾವತಿ, ಕೃಷ್ಣ ಗುಡುಗುಡಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ನೌಕರರು ಇದ್ದರು.
Related
You Might Also Like
ನಾನು ಕಾದು ಕುಳಿತಿದ್ದರೂ ಬಸ್ ನಿಲ್ಲಿಸಿಲ್ಲ – ಚಾಲಕ, ಕಂಡಕ್ಟರ್ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತಾಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದಲ್ಲಿ ನಿಲ್ಲಿಸದೆ ಹೋಗಿದೆ. ಹೀಗಾಗಿ ನನಗೆ ಸರಿಯಾದ ಸಮಯಕ್ಕೆ ತಲುಪಬೇಕಾದ ಸ್ಥಳಕ್ಕೆ ತಲುಪಲು ಸಾಧ್ಯವಾಗಿಲ್ಲ. ಆದ್ದರಿಂದ ಒಂದು ತಿಂಗಳ...
ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬೇಡಿಕೆಗೆ ಮಣಿದಿರುವ ಸಹಕಾರ ಇಲಾಖೆಯು ಏಳನೇ ವೇತನ ಆಯೋಗದ ವರದಿ ಪ್ರಕಾರ...
KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್
ನ್ಯೂಡೆಲ್ಲಿ: ಬಸ್ ಕಾರ್ಯಾಚರಣೆಗಳ ಮೇಲಿನ KSRTCಯ ಏಕಸ್ವಾಮ್ಯವನ್ನು ಕಿತ್ತು ಹಾಕಿ, ಕರ್ನಾಟಕ ಸರ್ಕಾರ 2003ರಲ್ಲಿ ಜಾರಿಗೆ ತಂದಿದ್ದ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಸಂಬಂಧ...
ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ
ಬೆಂಗಳೂರು: 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ “ಸ್ಮಶಾನಕ್ಕೆಂದು ಮೀಸಲಿಟ್ಟಿರುವ ಸರ್ಕಾರಿ ಸ್ವತ್ತನ್ನು ಪ್ರಭಾವೀ ವ್ಯಕ್ತಿಯೊಬ್ಬರ ಖಾಸಗಿ ಬಡಾವಣೆಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಸರ್ಕಾರಿ ಅಧಿಕಾರಿ...
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್
ಮೈಸೂರು: ಪ್ರತಿಭಾನ್ವಿತ ಆಟಗಾರರಿಗೆ ಗುರುತಿಸಿ ಕೇಂದ್ರ ಸರ್ಕಾರ ಅರ್ಜುನ್ ಪ್ರಶಸ್ತಿಯನ್ನು ನೀಡುತ್ತದೆ ಅದೇ ರೀತಿ ರಾಜ್ಯ ಸರ್ಕಾರ ಕೂಡ ಏಕಲವ್ಯ ಪ್ರಶಸ್ತಿಯನ್ನು ನಿಲ್ಲಿಸಿರುವುದನ್ನು ಮುಂದುವರಿಸಲಿ ಎಂದು ಅರ್ಜುನ್...
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್ ಬರೆ ಗ್ಯಾರಂಟಿ
ಬೆಂಗಳೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದ ದಾರಿಯನ್ನು ಬಿಡದಿಯಿಂದ ಮುಂದೆ ಬುಧವಾರದಿಂದ ದಿಢೀರ್ ಮುಚ್ಚಿದ್ದು ಇದರಿಂದ ಸರ್ವಿಸ್ ರಸ್ತೆಗೆ ಹೋಗಬಹುದೆಂದು ಬರುವ ವಾಹನಗಳ ಸವಾರರು...
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು
ಬಿಡದಿ: ಬೆಂಗಳೂರಿನಿಂದ ರಾಮನಗರಕ್ಕೆ ಹೊತ್ತಿದ್ದ ಸ್ಕಾರ್ಪಿಯೋ ಕಾರೊಂದು ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಘಟನೆ ಬಿಡದಿ ಸಂಮೀಪ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು...
KSRTC ಕನಕಪುರ ಬಸ್ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್ ಆರೋಪ
ಕನಕಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕನಕಪುರ ಬಸ್ ನಿಲ್ದಾಣದಲ್ಲಿ ಪ್ರಸ್ತುತ ಸಂಚಾರ ನಿಯಂತ್ರಕರಾಗಿರುವ ಗೋಪಾಲಯ್ಯ ನಿರ್ವಾಹಕರಿಂದ 10-10 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಇದು ವಿಡಿಯೋದಲ್ಲಿ...
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ
ಬೆಂ.ಗ್ರಾ: ನೊಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ...