NEWSಕೃಷಿನಮ್ಮಜಿಲ್ಲೆಮೈಸೂರು

ಕಾವೇರಿ ಜಲ ವಿವಾದ: ಬನ್ನೂರು ಸಂತೆಮಾಳದಲ್ಲಿ ರೈತರ ಪ್ರತಿಭಟನೆ, ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ತಮಿಳುನಾಡಿಗೆ ಪದೇಪದೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಅರೆಬೆತ್ತಲೆಯಾಗಿ ಪ್ರತಿಭಟನೆಗೆ ಇಳಿದ ರೈತರು ರಸ್ತೆ ತಡೆ ಚಳವಳಿ ನಡೆಸಿ ಸುಪ್ರೀಂ ಕೋರ್ಟ್ ತೀರ್ಪು ಹಾಗೂ ಸರ್ಕಾರದ ನೀತಿ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬಿನಿ – ಕಾವೇರಿ ಹಿತರಕ್ಷಣಾ ಹೋರಾಟ ಸಮಿತಿಯಿಂದ ಇಂದು ಸೆ.23ರಂದು ತಿ.ನರಸೀಪುರ ತಾಲೂಕಿನ  ಬನ್ನೂರು ಸಂತೇಮಾಳದಲ್ಲಿ ಸಮಾವೇಶಗೊಂಡು, ರಾಜ್ಯದಲ್ಲಿ ಬರಗಾಲ ಸೃಷ್ಟಿಯಾಗಿದ್ದರು ಕಾವೇರಿ ಕೊಳ್ಳದ ಜಲಾಶಯಗಳ ನೀರನ್ನು ತಮಿಳುನಾಡಿಗೆ ಪದೇಪದೆ ಬಿಟ್ಟು ಕುಡಿಯುವ ನೀರಿಗೂ ಆದ್ಯತೆ ನೀಡುತ್ತಿಲ್ಲ ಎಂದು ಕಿಡಿಕಾರಿದರು.

ರೈತರ ಬೆಳೆಗಳಿಗೂ ನೀರು ಕೊಡದೆ, ಕೆರೆ ಕಟ್ಟೆಗಳನ್ನು ತುಂಬಿಸಲು ವಿಫಲರಾಗಿದ್ದು ಗ್ರಾಮೀಣ ಭಾಗದ ಜನ – ಜಾನುವಾರುಗಳಿಗೆ ಕುಡಿಯುವ ನೀರಿಗೆ ಪರದಾಡುವಂತೆ ಮಾಡಿ ತಮಿಳುನಾಡಿನ ಹಿತ ಕಾಯುತ್ತಿರುವ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸ್ಥಾನದಿಂದ ಬದಲಾಯಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಮಾತನಾಡಿ, ರಾಜ್ಯದ ರೈತರನ್ನು ಬಲಿಕೊಟ್ಟಿರುವ ರಾಜ್ಯ ಸರ್ಕಾರ ಕೂಡಲೇ ಜಲಾಶಯಗಳಿಂದ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ನಿಲ್ಲಿಸಬೇಕು, ಸಮುದ್ರಕ್ಕೆ ಅನಾವಶ್ಯಕವಾಗಿ ಹರಿಯುತ್ತಿರುವ ಹೆಚ್ಚುವರಿ ನೀರು ಉಳಿಸಿ, ಸಂಕಷ್ಟದಲ್ಲಿ ಬಳಸಿ ಹಂಚಿಕೊಳ್ಳಲು ಮೇಕೆದಾಟು ಜಲಾಶಯ ಯೋಜನೆ ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಮಹದಾಯಿ ನದಿ ನೀರಿನ ವಿವಾದ ಕೂಡಲೇ ಬಗೆಹರಿಸಿ ಯೋಜನೆ ಪೂರ್ಣಗೊಳಿಸಿ. ಅಚ್ಚುಕಟ್ಟು ಭಾಗದ ನೀರಿನ ಸಮಸ್ಯೆ ಬಗೆಹರಿಸಬೇಕು. ಮಹದಾಯಿ ನದಿ ನೀರಿನ ವಿವಾದ ಕುರಿತು ಯಾವುದೇ ಗಂಭೀರ ಚಿಂತನೆ ನಡೆಸುತ್ತಿಲ್ಲ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಇರುವ ಲೋಕಸಭಾ ಸದಸ್ಯರ ಕಚೇರಿಯ ಮುಂದೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಗಿದೆ. ಆದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದರು.

ಪ್ರಸಕ್ತ 2023- 24ನೇ ಸಾಲಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಬರದಿಂದ ಕಬ್ಬಿನ ಉತ್ಪಾದನೆ ಇಳುವರಿ ಕಡಿಮೆಯಾಗಿದೆ ಆದ್ದರಿಂದ ಕಬ್ಬಿನ ದರ ಟನ್‌ಗೆ 4 ಸಾವಿರ ರೂಪಾಯಿ ನಿಗದಿ ಪಡಿಸಬೇಕು. ಕೃಷಿ ಪಂಪ್ ಸೆಟ್ ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿರುವುದನ್ನು ತಪ್ಪಿಸಬೇಕು. ಚುನಾವಣೆ ಭರವಸೆಯಂತೆ ಹಗಲು ಹೊತ್ತಿನಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ತನಕ 12 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುತ್ತಿರುವುದನ್ನು ಕಡ್ಡಾಯವಾಗಿ ಕೈಬಿಡಬೇಕು ಎಂದರು.

ರೈತ ಬಿತ್ತಿದ ಫಸಲಿಗೆ ನೀರಿಲ್ಲದೆ ಒಣಗಿ ಹೋಯ್ತು, ಅಂತರ್ಜಲ ಕುಸಿದಿದ್ದು ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಜನ, ಜಾನುವಾರಗಳ ರಕ್ಷಣಾತ್ಮಕ ಕ್ರಮ ಕೈಗೊಳ್ಳಲು ನಿರ್ಲಕ್ಷ ತೋರುತ್ತಿರುವ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿರುವ ಪ್ರದೇಶಗಳಿಗೆ ಬೆಳೆ ನಷ್ಟ ಪರಿಹಾರವಾಗಿ ಎಕರೆಗೆ ಕನಿಷ್ಠ 25,000 ರೂ. ನೀಡಬೇಕು ಎಂದು ಹೇಳಿದರು.

ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತು ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಯಿತು. ಬನ್ನೂರು ಪಟ್ಟಣ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಮನೋಜ್ ಕುಮಾರ್ ಹಾಗೂ ಸಿಬ್ಬಂದಿ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕ್ರಮ ಕೈಗೊಂಡಿದ್ದರು.

ಪ್ರತಿಭಟನೆಯ ನೇತೃತ್ವವನ್ನು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಆತ್ತಹಳ್ಳಿ ದೇವರಾಜ್ ವಹಿಸಿದ್ದರು.

ವಿಚಾರವಾದಿ ಕರುವಟ್ಟಿ ಪ್ರಭು ಸ್ವಾಮಿ, ಡಿಎಸ್ಎಸ್ ಮಾದೇವಯ್ಯ, ಸೋಸಲೆ ರಾಜಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರುಗಸೂರ ಶಂಕರ್, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಉಪಾಧ್ಯಕ್ಷ ಹೆಗ್ಗುರ್ ರಂಗರಾಜ್, ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಿರುಗುಸುರ್ ಪ್ರಸಾದ್ ನಾಯಕ್, ತಾ.ಸಂ.ಕಾರ್ಯದರ್ಶಿ ಪ್ರದೀಪ್ ಕುರುಬೂರ್, ಬಿ.ಪಿ. ಪರಶಿವಮೂರ್ತಿ, ಅತ್ತಹಳ್ಳಿ ಸಿ. ನಿಂಗಣ್ಣ, ಅರುಣ್ ಕುಮಾರ್, ಬನ್ನೂರ್ ಶ್ರೀನಿವಾಸ್, ರಾಮ, ಚೇತನ, ಶಿವರಾಜ್, ಮಧು, ಸ್ವಾಮಿ, ನಿಜಲಿಂಗ, ದಾಸೇಗೌಡ, ರಾಜೇಶ ಯಾಕನೂರ್, ಉಮೇಶ ಕರುವಟ್ಟಿ, ವಾಚ್ ಕುಮಾರ, ತರಕಾರಿ ನಿಂಗರಾಜು, ಇನ್ನು ಮುಂತಾದ ರೈತ ಮುಖಂಡರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು