NEWSನಮ್ಮಜಿಲ್ಲೆ

ಕ್ವಾರಂಟೈನ್‌ ಗೆ 98 ವಸತಿ ಶಾಲೆ- ನಿಲಯಗಳ ಬಳಕೆ

ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ  ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ  ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್‍ನಲ್ಲಿಡಲಾಗಿದೆ  ಎಂದು  ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.

ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ  ಆಶ್ರಯದಲ್ಲಿರುವವರನ್ನು ಭೇಟಿ ಮಾಡಿ, ಅವರ ಆರೋಗ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಸೌಲಭ್ಯ ಹಾಗೂ ಆರೈಕೆಯ ಬಗ್ಗೆ ವಿಚಾರಿಸಿದ ನಂತರ ಮಾತನಾಡಿದರು.

ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್‍ನಿಂದ ಬಾಧಿತರಾದವರಿಗೆ, ನಿರಾಶ್ರಿತರಿಗೆ, ಅಸಂಘಟಿತ ಕೂಲಿ ಕಾರ್ಮಿಕರು, ಅಲೆಮಾರಿ ಜನಾಂಗ ಹಾಗೂ ಆಶ್ರಯ ಕೋರಿ ಬಂದ ಒಟ್ಟು  5108   ಜನರಿಗೆ ಸಮಾಜ  ಇಲಾಖೆಯ  ವ್ಯಾಪ್ತಿಯ  92 ವಸತಿ ಶಾಲೆಗಳಲ್ಲಿ ಹಾಗೂ ನಿಲಯಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ  ಎಂದು ತಿಳಿಸಿದರು.

ರಾಜ್ಯದಲ್ಲಿ  ಯಾರೂ ಅನ್ನ, ನೀರು ದೊರಕದೇ ಬಳಲಬಾರದು ಎನ್ನುವುದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಯವಾಗಿದ್ದು, ಇದಕ್ಕಾಗಿ ಅನೇಕ  ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಅದಕ್ಕೆ ಪೂರಕವಾಗಿ ಸಮಾಜ ಕಲ್ಯಾಣ ಇಲಾಖೆಯು ಶ್ರಮಿಸುತ್ತಿದೆ. ಇಂತಹ ಸಂಕಷ್ಟದ ಸಮಯದಲ್ಲಿ   ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ಅವರ ನೇತೃತ್ವದಲ್ಲಿ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಕ್ರಮಕೈಗೊಂಡಿರುವುದು ಶ್ಲಾಘನೀಯ ಸಂಗತಿಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಡಿಸಿಎಂ ಅವರ ಆಪ್ತಕಾರ್ಯದರ್ಶಿ  ವಿ. ಶ್ರೀನಿವಾಸ ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ