NEWSನಮ್ಮರಾಜ್ಯರಾಜಕೀಯ

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಆಮ್ ಆದ್ಮಿ ಪಕ್ಷ ಜನಪ್ರಿಯ : ಡಾ. ಸತೀಶ್ ಸಂತಸ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧವಾಗಿ ಹುಟ್ಟಿದ್ದು ಆಮ್ ಆದ್ಮಿ ಪಕ್ಷ. ಇಡೀ ದೇಶದಲ್ಲಿ ಭ್ರಷ್ಟಾಚಾರ ಮುಕ್ತ ರಾಜಕಾರಣ ಬರಬೇಕು. ಜಾತಿ, ಹಣದ ಮೇಲೆ ನಡೆಯುವ ರಾಜಕೀಯವನ್ನು ಕೊನೆಗೊಳಿಸಿ, ಸಂಪೂರ್ಣವಾಗಿ ಜನಸಾಮಾನ್ಯರ, ಅಭಿವೃದ್ಧಿ ಕೇಂದ್ರಿತ ರಾಜಕಾರಣ ಮಾಡಲು ಅರವಿಂದ್ ಕೇಜ್ರಿವಾಲ್ ಮತ್ತು ಹಲವು ಮುಖಂಡರು ಆಮ್ ಆದ್ಮಿ ಪಕ್ಷವನ್ನು ಸ್ಥಾಪನೆ ಮಾಡಿದರು ಎಂದು ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಹೇಳಿದರು.

ಆಮ್ ಆದ್ಮಿ ಪಕ್ಷ ಸ್ಥಾಪನೆಯಾಗಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ ದೇಶದಾದ್ಯಂತ ಮನೆ ಮಾತಾಗಿದ್ದು, ಕೋಟ್ಯಂತರ ನಿಷ್ಠಾವಂತ ಕಾರ್ಯಕರ್ತರನ್ನು ಹೊಂದಿದೆ ಎರಂದು ಹರ್ಷ ವ್ಯಕ್ತಪಡಿಸಿದರು.

ಇನ್ನು ದೆಹಲಿಯಲ್ಲಿ ಸತತವಾಗಿ ಮೂರನೇ ಬಾರಿ ಸರ್ಕಾರ ರಚನೆ ಮಾಡಿದ್ದೇವೆ. ಪಂಜಾಬ್‌ನಲ್ಲಿ ಸಹ ಬಹುಮತ ಪಡೆದು ಅಧಿಕಾರ ಪಡೆದಿದ್ದೇವೆ. ದೆಹಲಿಯ ಪಾಲಿಕೆ ಚುನಾವಣೆಯಲ್ಲಿ ಕೂಡ ಅಧಿಕಾರ ಹಿಡಿದಿದ್ದೇವೆ. ಸೂರತ್‌ ಮತ್ತು ಚಂಡೀಗಢದ ಪಾಲಿಕೆಯಲ್ಲಿ ಸ್ಥಾನ ಗಳಿಸಿದ್ದೇವೆ. ಗುಜರಾತ್‌, ಗೋವಾದಲ್ಲಿ ಸಹ ಆಮ್ ಆದ್ಮಿ ಪಕ್ಷ ಛಾಪು ಮೂಡಿಸಿದೆ ಎಂದು ಹೇಳಿದರು.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಆಮ್ ಆದ್ಮಿ ಪಕ್ಷದ ಚಿಂತನೆ ಬೆಳೆಯುತ್ತಿದೆ. ದೇಶದಲ್ಲಿ ಬದಲಾವಣೆ ಬಯಸುವವರಿಗೆ ಪಕ್ಷದ ಚಿಂತನೆಗಳು ಇಷ್ಟವಾಗಿವೆ. ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಮಾಡಿದ ಸುಧಾರಣೆಗಳು ಇಂದು ದೇಶವನ್ನು ಆಳಿದ ಪಕ್ಷಗಳಿಗೆ ಮಾದರಿಯಾಗಿದ್ದು, ಅದನ್ನು ನಕಲು ಮಾಡುತ್ತಿವೆ. ನಕಲು ಮಾಡಿದರೂ, ಅವುಗಳನ್ನು ವ್ಯವಸ್ಥಿತ ರೀತಿಯಲ್ಲಿ ಜಾರಿಗೆ ತರುವಲ್ಲಿ ಅವು ಎಡವಿವೆ ಎಂದರು.

ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ನಕಲು ಮಾಡಿದ್ದರೂ ಯಾವುದೇ ಬದಲಾವಣೆ ತಂದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದ್ದು ಕೂಡ ದೆಹಲಿ ಮಾದರಿಯನ್ನು ನೋಡಿ. ಅರವಿಂದ್ ಕೇಜ್ರಿವಾಲ್ ಅವರು ಉಚಿತ ಯೋಜನೆಗಳ್ನು ಬಜೆಟ್‌ನಲ್ಲಿ ಹಣಕಾಸಿನ ವ್ಯತ್ಯಯ ಆಗದಂತೆ ನೋಡಿಕೊಂಡು ನೀಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಕೂಡ ಇಂದು ಆಮ್ ಆದ್ಮಿ ಪಕ್ಷದ ಬೆಳವಣಿಗೆಯಿಂದ ಆತಂಕಗೊಂಡಿದೆ. ನಮ್ಮ ನಾಯಕರಾದ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮತ್ತು ಸಂಜಯ್ ಸಿಂಗ್ ಅವರಂತಹ ನಾಯಕರು ಬಿಜೆಪಿಯ ನಿದ್ದೆಗೆಡಿಸಿದ್ದಾರೆ. ಅಂತಹ ಮುಖಂಡರನ್ನು ಜೈಲಿಗೆ ಹಾಕಿ, ಆಮ್ ಆದ್ಮಿ ಪಕ್ಷವನ್ನು ಕಟ್ಟಿಹಾಕಲು ಬಿಜೆಪಿ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಅದ್ಧೂರಿ ಕಾರ್ಯಕ್ರಮ:  ಬಿಜೆಪಿ ನೀಡುವ ಆಮಿಷಕ್ಕೆ ಆಮ್ ಆದ್ಮಿ ಪಕ್ಷದ ನಾಯಕರು ಒಪ್ಪದ ಕಾರಣ ಈ ರೀತಿ ಷಡ್ಯಂತ್ರ ಮಾಡುತ್ತಿದೆ. ಇದೆಲ್ಲದರ ನಡುವೆ ಆಮ್ ಆದ್ಮಿ ಪಕ್ಷ 11 ವರ್ಷಗಳನ್ನು ಪೂರೈಸಿದ್ದು, ಅದರ ಅಂಗವಾಗಿ ಬೆಂಗಳೂರಿನಲ್ಲಿ ಪಕ್ಷದ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಅದರ ಜತೆಗೆ ಕನ್ನಡ ರಾಜ್ಯೋತ್ಸವ ಮತ್ತು ಸಂವಿಧಾನ ದಿನಾಚರಣೆಯನ್ನು ಒಟ್ಟಿಗೆ ಆಚರಣೆ ಮಾಡಲಾಗುವುದು. ಜಯನಗರದ ಎಂಇಎಸ್ ಕ್ರೀಡಾಂಗಣದಲ್ಲಿ ನವೆಂಬರ್ 26ರಂದು ಸಂಜೆ 4 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷ ಕರ್ನಾಟಕ ಉಸ್ತುವಾರಿ, ರಾಷ್ಟ್ರೀಯ ನಾಯಕರಾದ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹಾಗೂ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಸಂಘಟನಾ ಕಾರ್ಯದರ್ಶಿ ವಿಶ್ವನಾಥ್ ಪಾಲ್ಗೊಂಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು