NEWSದೇಶ-ವಿದೇಶನಮ್ಮರಾಜ್ಯ

ಖಾಸಗಿಯಾಗಿ ಪೋರ್ನ್​ ವಿಡಿಯೋ ನೋಡುವುದು ಅಪರಾಧವೆ? : ಹೈ ಕೋರ್ಟ್‌ ಮಹತ್ವದ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ಕೊಚ್ಚಿ: ಖಾಸಗಿಯಾಗಿ ಪೋರ್ನ್​ ವಿಡಿಯೋ ನೋಡುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ರಸ್ತೆ ಬದಿಯಲ್ಲಿ ತನ್ನ ಮೊಬೈಲ್​​ನಲ್ಲಿ ಪೋರ್ನ್​ ವಿಡಿಯೋ ನೋಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಬಂಧಿತನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್​ ಕೇಸ್​ ರದ್ದು ಮಾಡಿದೆ.

ಅಲ್ಲದೆ ಯಾರಿಗೂ ಶೇರ್​ ಮಾಡದೆ ಮತ್ತು ಇತರರಿಗೆ ತೋರಿಸದೆ ಖಾಸಗಿಯಾಗಿ ಪೋರ್ನ್​ ವಿಡಿಯೋಗಳನ್ನು ನೋಡುವುದು ಭಾರತೀಯ ದಂಡ ಸಂಹಿತೆ (ಐಪಿಸಿ)ಯ ಸೆಕ್ಷನ್​ 292ರ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗದು ಎಂದು ತನ್ನ ತೀರ್ಪಿನಲ್ಲಿ ಹೇಳಿದೆ.

ಪ್ರಕರಣವೇನು? ರಸ್ತೆ ಬದಿಯಲ್ಲಿ ನಿಂತು ತನ್ನ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್​ 292ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಕೇಸ್​ ಅನ್ನು ವಜಾಗೊಳಿಸಿದ ಕೇರಳ ಹೈಕೋರ್ಟ್​ ಏಕಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಪಿ.ವಿ. ಕುನ್ಹಿಕೃಷ್ಣನ್ ಈ ತೀರ್ಪು ನೀಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ನಮಗೆ ಬರುವ ಪ್ರಶ್ನೆಯೆಂದರೆ ಒಬ್ಬ ವ್ಯಕ್ತಿಯು ತನ್ನ ಖಾಸಗಿ ಸಮಯದಲ್ಲಿ ಪೋರ್ನ್ ವಿಡಿಯೋವನ್ನು ಇತರರಿಗೆ ಪ್ರದರ್ಶಿಸದೆ ನೋಡುವುದು ಅಪರಾಧವಾಗುತ್ತದೆಯೇ ಎಂಬುದಾಗಿದೆ. ಆದರೆ, ಅದನ್ನು ಸೂಕ್ಷ್ಮವಾಗಿ ಗಮನಿಸಿದರೆ ವ್ಯಕ್ತಿಯ ಇಂತಹ ನಡೆಯನ್ನು ಅಪರಾಧ ಎಂದು ಘೋಷಿಸಲಾಗದು, ಇದು ನಾಗರಿಕನೊಬ್ಬನ ಖಾಸಗಿ ಆಯ್ಕೆಯಾಗಿದೆ ಮತ್ತು ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ವ್ಯಕ್ತಿಯ ಗೌಪ್ಯತೆಯ ಧಕ್ಕೆಗೆ ಕಾರಣವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಂದಹಾಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 292, ಅಶ್ಲೀಲ ಪುಸ್ತಕಗಳು, ವಿಡಿಯೋಗಳು ಮತ್ತು ವಸ್ತುಗಳ ಮಾರಾಟ, ವಿತರಣೆ ಮತ್ತು ಪ್ರದರ್ಶನಕ್ಕೆ ದಂಡ ವಿಧಿಸುತ್ತದೆ. ತೀರ್ಪನ್ನು ಪ್ರಕಟಿಸುವ ಸಂದರ್ಭದಲ್ಲಿ ಯಾರಾದರೂ ಅಶ್ಲೀಲ ವಸ್ತುಗಳನ್ನು ಪ್ರಸಾರ ಮಾಡಲು, ವಿತರಿಸಲು ಅಥವಾ ಸಾರ್ವಜನಿಕವಾಗಿ ಪ್ರದರ್ಶಿಸಲು ಪ್ರಯತ್ನಿಸಿದಾಗ ಮಾತ್ರ ಸೆಕ್ಷನ್ 292 ಅನ್ವಯಿಸುತ್ತದೆ ಎಂದು ನ್ಯಾಯಾಪೀಠ ಸ್ಪಷ್ಟವಾಗಿ ಸೂಚಿಸಿತು.

ಇದಲ್ಲದೆ ಕೇರಳ ಹೈಕೋರ್ಟ್ ಅಶ್ಲೀಲತೆಯ ಐತಿಹಾಸಿಕ ಅಸ್ತಿತ್ವವನ್ನು ಎತ್ತಿ ತೋರಿಸಿದ್ದು, ಇದು ಶತಮಾನಗಳಿಂದ ಮಾನವ ಸಂಸ್ಕೃತಿಯ ಭಾಗವಾಗಿದೆ ಎಂದು ಹೇಳಿದೆ. ಇದೇ ಸಂದರ್ಭದಲ್ಲಿ ಈ ತೀರ್ಪು ಅಪ್ರಾಪ್ತ ಮಕ್ಕಳಿಗೆ ಸರಿಯಾದ ಮೇಲ್ವಿಚಾರಣೆಯಿಲ್ಲದೆ ಮೊಬೈಲ್ ಫೋನ್‌ಗಳನ್ನು ನೀಡುವುದರಿಂದ ಉಂಟಾಗುವ ಸಂಭಾವ್ಯ ಅಪಾಯಗಳ ಬಗ್ಗೆ ಪೋಷಕರಿಗೂ ಎಚ್ಚರಿಕೆಯನ್ನು ನೀಡಿದೆ.

ಇಂಟರ್ನೆಟ್ ಸಂಪರ್ಕವಿರುವ ಮೊಬೈಲ್ ಫೋನ್‌ಗಳ ಮೂಲಕ ಅಶ್ಲೀಲ ವಿಡಿಯೋಗಳು ಸೇರಿದಂತೆ ಸ್ಪಷ್ಟ ವಿಷಯವನ್ನು ಸುಲಭವಾಗಿ ಪ್ರವೇಶಿಸಬಹುದು ಎಂದು ನ್ಯಾಯಾಲಯವು ಒತ್ತಿಹೇಳಿದ್ದು, ಈ ಬಗ್ಗೆ ಪಾಲಕರು ಎಚ್ಚರಿಕೆ ವಹಿಸುವುದು ಅತ್ಯವಶ್ಯವಾಗಿದೆ ಎಂದು ತಿಳಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು