NEWSಬೆಂಗಳೂರುಸಂಸ್ಕೃತಿ

ಗಣೇಶ ಹಬ್ಬಕ್ಕೆ ಬಿಬಿಎಂಪಿ ಸಿದ್ಧತೆ: ಏಕಗವಾಕ್ಷಿ ಕೇಂದ್ರ ತೆರೆದು ಅನುಮತಿ – ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ಇದೇ ಸೆ.18ರಿಂದ ಆರಂಭವಾಗುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯು 63 ಉಪ ವಿಭಾಗ ಕಚೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಬಾರಿಯೂ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಾಗೂ ಪಾಲಿಕೆ ವತಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ‌ ಕುರಿತು ವಿವಿಧ ಇಲಾಖೆಗಳ ಜತೆ ಇಂದು ನಡೆದ ಜಂಟಿ ಮಾತನಾಡಿದರು.

ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಕೆಲ ಪ್ರದೇಶಗಳಲ್ಲಿ ಕೆರೆಗಳು ವಸತಿ ಪ್ರದೇಶದಿಂದ ದೂರವಿರುವುದರಿಂದ ಸಾರ್ವಜನಿಕರು ಚಿಕ್ಕ-ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಪ್ರತಿ ವಲಯಗಳ ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಬೇಕು ಎಂದರು.

ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ ಅಳವಡಿಸಬೇಕು. ಎಲ್ಲ ವಿಸರ್ಜನಾ ಕೇಂದ್ರಗಳಲ್ಲೂ ಪಾಳಿಯನುಸಾರ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಆಯಾ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಸಿಸಿಟಿವಿ, ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಬೇಕು ಎಂದು ತಿಳಿಸಿದರು.

ವಿಸರ್ಜನಾ ಕೇಂದ್ರಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು (ಪೂಜಾ ಸಾಮಗ್ರಿಗಳಾದ ಹೂವು, ಬಾಳೆಯ ಕಂದು, ತಳಿರು ತೋರಣ ಮತ್ತಿತರ ತ್ಯಾಜ್ಯ ವಸ್ತುಗಳನ್ನು) ಸಂಗ್ರಹಿಸಿ ನಿಗದಿತ ಕಂಟೈನರ್‌ಗಳ ಮೂಲಕ ಅಗಿದ್ದಾಂಗೆ ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಣೆ ವಾಹನಗಳನ್ನು ಸಜ್ಜುಗೊಳಿಸಲು ತಿಳಿಸಿದರು.

ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್‌ಗಳ ವ್ಯವಸ್ಥೆ, ಕ್ರೇನ್‌ಗಳ ವ್ಯವಸ್ಥೆಗಳನ್ನು ಕೂಡ ಸಿದ್ದಪಡಿಸಿರಬೇಕು. ಜೊತೆಗೆ ಪೋಲಿಸ್ ಬಂದೋಬಸ್ತ್ ಮೂಲಕ ಸೂಕ್ತ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು‌‌. ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿಲಾಗಿದ್ದು, ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಕೆಯನ್ನು ಮಾಡುತ್ತಿರುವವರಿಗೆ ದಂಡ ವಿಧಿಸುವ ಜೊತೆಗೆ ಸೂಕ್ತ ಕ್ರಮವಹಿಸಲು ಸೂಚಿಸಿದರು.

ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ, ಸ್ವಚ್ಛತೆ ಕಾಪಾಡುವ ಹಾಗೂ ಇನ್ನಿತರೆ ಸೂಚನೆಗಳನ್ನು ಕಡ್ಡಾಯವಾಗಿ ಅನುಮತಿಯ ಆದೇಶ ಪತ್ರದಲ್ಲಿ ವಿವರಣೆ ಸಮೇತ ಆದೇಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಫೆಕ್ಸ್/ಬ್ಯಾನರ್ ಅಳವಡಿಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು ಸಾರ್ವಜನಿಕರು ಸಹ ಸಹಕರಿಸಲು ಕೋರಿದೆ.

ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಲು ಮನವಿ: ಪಾಲಿಕೆ ವ್ಯಾಪ್ತಿಯಲ್ಲಿರುವ ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕೆಂದು ಹಾಗೂ ಬಣ್ಣದ/ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಲ್ಲಿಸಿ ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಬೇಕೆಂದು ಸಾರ್ವಜನಿಕರಲ್ಲಿ ಮುಖ್ಯ ಆಯುಕ್ತರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಬಿಬಿಎಂಪಿಯ ಎಲ್ಲಾ ವಿಶೇಷ/ ವಲಯ ಆಯುಕ್ತರು, ಪೊಲೀಸ್ ಅಧಿಕಾರಿಗಳು, ಉಪ ಆಯುಕ್ತರು(ಆಡಳಿತ), ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು