ಬೆಂಗಳೂರು: ಹೆಸರುಘಟ್ಟದ ಚಿಕ್ಕಬಾಣವಾರ ಗ್ರಾಮದ ನಿವಾಸಿ, ಉಡುಪಿ ಮೂಲದ 65 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಎದುರಾಗಿದ್ದರಿಂದ ಬುಧವಾರ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಚಿಕ್ಕ ಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಜಯರಾಮ್ ತಿಳಿಸಿದ್ದಾರೆ.
ಗಣಪತಿ ನಗರ ಸೀಲ್ ಡೌನ್
ಚಿಕ್ಕಬಾಣಾವರ ಗ್ರಾಮದ ಗಣಪತಿ ನಗರದಲ್ಲಿ ವೃದ್ಧೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.
ವೃದ್ಧೆಯು ಕ್ಯಾನ್ಸರ್ ನಿಂದ ಬಳಲುತ್ತಿದ್ದರೂ ಈ ಕಾರಣದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಕೂಡಲೇ ನಗರವನ್ನು ಸೀಲ್ ಡಾನ್ ಮಾಡಲಾಯಿತು ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.