NEWSಕೃಷಿನಮ್ಮಜಿಲ್ಲೆ

ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ

ವಿಜಯಪಥ ಸಮಗ್ರ ಸುದ್ದಿ
  • ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ‌ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಸಭೆ ನಡೆಸಿದರು.

ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ ರೈತರ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ 430 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಾಸು ಪಡೆಯಲು ಸಾಧ್ಯವಿಲ್ಲ. ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅಡ್ವೊಕೇಟ್‌ ಜನರಲ್‌ ಅವರ ಅಭಿಪ್ರಾಯವನ್ನು ಸಹ ಪಡೆದುಕೊಂಡು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವ ಎಂ.ಬಿ ಪಾಟೀಲ್, ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ