NEWSಬೆಂಗಳೂರುರಾಜಕೀಯ

ಚುನಾವಣಾ ಅಕ್ರಮ ತಡೆಗೆ ಸುವಿಧಾ ಮತ್ತು ಸಿ-ವಿಜಿಲ್ ತಂತ್ರಂಶ ಬಳಸಿ: ಡಿಸಿ ಡಾ.ರಾಜೇಂದ್ರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚುನಾವಣೆ ವೇಳೆ ನಡೆಯುವ ಅಕ್ರಮಗಳ ಮಾಹಿತಿ ಪಡೆದು ಅದನ್ನು ತಡೆಯುವ ನಿಟ್ಟಿನಲ್ಲಿ ಮತ್ತು ಎಲೆಕ್ಷನ್​ ವೇಳೆ ಕಾರ್ಯಕ್ರಮ ಹಾಗೂ ಇತರ ಅನುಮತಿಗಳಿಗೆ ಅನಗತ್ಯ ಓಡಾಟ ತಪ್ಪಿಸುವ ಸಂಬಂಧ ಚುನಾವಣಾ ಆಯೋಗ ಸುವಿಧಾ ಮತ್ತು ಸಿ-ವಿಜಿಲ್ ತಂತ್ರಂಶವನ್ನು ಅಭಿವೃದ್ಧಿಪಡಿಸಿದ್ದು ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಸದುಪಯೋಗ ಪಡೆದು ಕೊಳ್ಳಬಹುದಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಡಿಸಿ ಡಾ.ರಾಜೇಂದ್ರ, ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ವಿವಿಧ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮೆರವಣಿಗೆ, ಧ್ವನಿವರ್ಧಕ, ರ್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಅನುಮತಿಗಾಗಿ ಚುನಾವಣಾ ಆಯೋಗ ರೂಪಿಸಿರುವ “ಸುವಿಧಾ” ತಂತ್ರಾಂಶ ಬಳಸುವಂತೆ ತಿಳಿಸಿದರು.

ಚುನಾವಣಾ ನೀತಿ ಸಂಹಿತೆ ಕುರಿತ ದೂರುಗಳನ್ನು ಸ್ವೀಕರಿಸಲು 1950 ಸಹಾಯವಾಣಿ ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ನಿಷ್ಪಕ್ಷಪಾತ, ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸುವ ಗುರಿ ಇದೆ. ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡುವುದು ಹಾಗೂ ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸಲು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಜಿಲ್ಲಾಡಳತಕ್ಕೆ ಅಗತ್ಯ ಸಹಕಾರ ನೀಡಬೇಕು.

ಅಭ್ಯರ್ಥಿಗಳು ವಾಹನ, ಧ್ವನಿವರ್ಧಕ, ಸಭೆ, ಸಮಾರಂಭ, ರ್ಯಾಲಿ ಸೇರಿದಂತೆ ವಿವಿಧ ಅನುಮತಿ ಪಡೆಯಲು ಏಕ ಗವಾಕ್ಷಿ ವ್ಯವಸ್ಥೆ “ಸುವಿಧಾ” ತಂತ್ರಾಂಶದಲ್ಲಿ https://suvidha.eci.gov.in/suvidhaac/ public/login ಅರ್ಜಿ ಸಲ್ಲಿಸಬಹುದಾಗಿದೆ. ಅದೇ ರೀತಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಿ-ವಿಜಿಲ್ ತಂತ್ರಾಂಶದಲ್ಲಿ ದೂರು ದಾಖಲಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.

ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಚುನಾವಣಾ ಆಯೋಗ ಇದೀಗ ಜನಸಮಾನ್ಯರು ತಮಗಿರುವ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಗುಪ್ತವಾಗಿ ಹಾಗೂ ಸುಲಭವಾಗಿ ಹಂಚಿಕೊಳ್ಳಲು ಅನುಕೂಲವಾಗುವಂತೆ ಸಿ-ವಿಜಿಲ್ ತಂತ್ರಾಂಶ ಜಾರಿಗೆ ತಂದಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವಂತಹ ಬ್ಯಾನರ್, ಪೋಸ್ಟರ್‌​ಗಳನ್ನು ತೆರವುಗೊಳಿಸದೇ ಇರುವುದು, ಹಣ ಹಂಚಿಕೆ, ಮದ್ಯ ಹಂಚಿಕೆ, ಸೀರೆ ಅಥವಾ ಉಚಿತ ಉಡುಗೊರೆಗಳನ್ನು ನೀಡುವುದು, ಅನುಮತಿ ಪಡೆಯದೇ ಸಭೆ ಸಮಾರಂಭಗಳನ್ನು ಆಯೋಜಿಸಿರುವ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಸಿ-ವಿಜಿಲ್ ಆ್ಯಪ್‌ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಛಾಯಾಚಿತ್ರ, ವಿಡಿಯೋ ಅಥವಾ ಧ್ವನಿಮುದ್ರಿತ ಕ್ಲಿಪಿಂಗ್ಸ್ ​ಗಳನ್ನು ಕಳುಹಿಸಬಹುದು. ಆ ಮೂಲಕ ದೂರನ್ನು ದಾಖಲಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ರಾಜಕೀಯ ಪಕ್ಷದ ಮುಖಂಡರುಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ