NEWSಶಿಕ್ಷಣ-ಸಂಸ್ಕೃತಿ

ಜಾತಿ, ಧರ್ಮದ ತಾರತಮ್ಯ ಬಿಟ್ಟು ದೇಶ, ಭಾಷೆ, ಸಂಸ್ಕೃತಿಯ ಅಭಿಮಾನ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಶಿವರಾಜಪ್ಪ ಸಲಹೆ

ಹನೂರಿನಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಶಾಖೆ ಉದ್ಘಾಟನೆ

ವಿಜಯಪಥ ಸಮಗ್ರ ಸುದ್ದಿ

ಹನೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಜಾತಿ, ಭೇದ, ಧರ್ಮ ಎಂಬ ತಾರತಮ್ಯ ಬಿಟ್ಟು ದೇಶ, ಭಾಷೆ, ಸಂಸ್ಕೃತಿ ಮುಂತಾದವುಗಳ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು‌ ಎಂದು ಸಾಹಿತಿ ಡಾ.ಎಸ್. ಶಿವರಾಜಪ್ಪ ಸಲಹೆ ನೀಡಿದರು.

ತಾಲೂಕು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹನೂರು ಇವರ ಸಹಯೋಗದಲ್ಲಿ ಪಟ್ಟಣದಲ್ಲಿ ಮಂಗಳವಾರ ನಡೆದ ತಾಲೂಕು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಉದ್ಘಾಟನೆ ಹಾಗೂ ಡಾ.ಎಸ್ ಶಿವರಾಜಪ್ಪ ಅವರ ಬದುಕು- ಬರಹ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಪಠ್ಯ ಪುಸ್ತಕಗಳನ್ನು ಓದುವ ಜೊತೆಗೆ ಇತರೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪಠ್ಯ ಪುಸ್ತಕಗಳು ನಿಮ್ಮನ್ನು ವಿದ್ಯಾವಂತರನ್ನಾಗಿಸಿದರೆ, ಇತರ ಪುಸ್ತಕಗಳು ಜ್ಞಾನವಂತರನ್ನಾಗಿಸುತ್ತದೆ. ಇಂದಿನ ಸ್ಪರ್ಧಾಯುಗದಲ್ಲಿವಿದ್ಯಾವಂತರಾಗುವ ಜೊತೆಗೆ ಜ್ಞಾನವಂತರೂ ಆಗಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳಿಗಿದೆ. ಹಾಗಾಗಿ ಪಠ್ಯ ಪುಸ್ತಕದ ಜತೆಗೆ ಜತೆಗೆ ಇತರ ಪುಸ್ತಕಗಳನ್ನು ಓದುವ ಪರಿಪಾಠವನ್ನು ಬೆಳೆಸಿ ಕೊಳ್ಳಿ. ಅದು ನಿಮ್ಮ ಸರ್ವಾಂಗೀಣ ಬೆಳವಣಿಗೆಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಹವ್ಯಾಸ ಬೆಳೆಸಿಕೊಂಡಾಗ ವ್ಯಕ್ತಿತ್ವ ವಿಕಸನದ ಜತೆಗೆ ಕನ್ನಡ ಸಾಹಿತ್ಯ ಶ್ರೀಮಂತಿಕೆ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಮೈಸೂರು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ ಮಾತನಾಡಿ, ಸಾಹಿತಿ ಡಾ.ಎಸ್.ಶಿವರಾಜಪ್ಪ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಇವರ ಮಾರ್ಗದರ್ಶನದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಿಎಚ್.ಡಿ ಮಹಾಪ್ರಬಂಧ ಮಂಡಿಸಿರುವುದು ಹೆಮ್ಮೆಯ ವಿಷಯ ಎಂದರು.

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ ಮಹೇಶ್ ಚಿಕ್ಕಲ್ಲೂರು ಮಾತನಾಡಿ, ಚಾಮರಾಜನಗರ ಜಿಲ್ಲೆಗೆ ಜಾನಪದ ಸಾಹಿತ್ಯದಲ್ಲಿ ತನ್ನದೇ ವಿಶೇಷ ಸ್ಥಾನ ಮಾನ ಇದ್ದು. ಈ ‌ಮಣ್ಣಿನಲ್ಲಿ‌ನೆಡೆದಾಡಿದ ಮಹದೇಶ್ವರ, ಸಿದ್ದಪ್ಪಾಜಿ ಕಟ್ಟಿದ ಮೌಖಿಕ ಕಾವ್ಯಗಳು ಇಂದು ಜಗತ್ತಿನಾದ್ಯಂತ ಪ್ರಸಿದ್ಧಿ ಪಡೆದಿವೆ ಎಂದರು.

ಅಲ್ಲದೆ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಗಳಲ್ಲಿರುವ ಅಧಿಕಾರಿಗಳ ಮಕ್ಕಳು ಇಂದು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅನ್ನುತ್ತೀರ್ಣರಾಗುತ್ತಿರುವುದು ವಿಷಾದನೀಯ ಎಂದರು.

ಈ‌ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಸಿ.ಶೈಲೇಶ್ ಕುಮಾರ್, ಸಾಹಿತಿ ಮತ್ತು ಸಂಸ್ಕೃತಿ ಚಿಂತಕ ಟಿ. ಸತೀಶ್ ‌ ಜವರೇಗೌಡ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲ್ಲೂಕು ಘಟಕದಅಧ್ಯಕ್ಷ  ಕಂದವೇಲು, ಕನ್ನಡ ಸಾಹಿತ್ಯ ಪರಿಷತ್ ಹನೂರು ಘಟಕದ ರ್ಯದರ್ಶಿ ಅಭಿಲಾಷ್, ಉಪನ್ಯಾಸಕರಾದ ಡಿ.ಪಿ ಚಿಕ್ಕಣ್ಣ, ಕೃಪಾ, ರವಿಶಂಕರ್ ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ