ಹನೂರು: ಗಣರಾಜ್ಯೋತ್ಸವ ದಿನದಂದೇ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸೋಮಶೇಖರ್ (42) ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
![](https://vijayapatha.in/wp-content/uploads/2023/01/26-Jan-Accident-1-300x173.jpg)
ಬೈಕ್ ಹಾಗೂ ಕೋಳಿ ಸಾಗಾಣಿಕೆ ಮಾಡುವ ವಾಹನ ನಡುವೆ ಈ ಅವಘಡ ನಡೆದಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಳಗ್ಗೆ ಪಂಚಾಯ್ತಿಯಲ್ಲಿ ಧ್ವಜಾರೋಹಣ ನೆರವೇರಿಸಿ ಬರುವಾಗ ಅಪಘಾತ ಉಂಟಾಗಿದೆ.
ಈ ವೇಳೆ ಗಂಭೀರವಾಗಿ ಗಾಯಗೊಂಡ ಅವರನ್ನು ರಾಮಾಪುರ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಮಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://vijayapatha.in/wp-content/uploads/2024/02/QR-Code-VP-1-1-300x62.png)