NEWSನಮ್ಮರಾಜ್ಯಸಿನಿಪಥ

ಡಾ.ರಾಜ್ ಕುಮಾರ್ ಕರ್ನಾಟಕದ ಮುತ್ತುರಾಜ

ಡಾ.ರಾಜ್‌ರ 92 ನೇ ಜನ್ಮ ದಿನಾಚರಣೆಯಲ್ಲಿ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಬಣ್ಣನೆ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಡಾ.ರಾಜ್‍ಕುಮಾರ್ ಅವರ ಸರಳತೆ, ಕಲಾಪ್ರತಿಭೆ ಮತ್ತು ಜೀವನ ಶೈಲಿಯಿಂದ ಚಿತ್ರರಂಗದಲ್ಲಿ ಉತ್ತುಂಗಕ್ಕೆ ಬೆಳೆದರು ಎಂದು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ವಾರ್ತಾಭವನದಲ್ಲಿ ಸರಳವಾಗಿ ನಡೆದ ಡಾ.ರಾಜ್‍ಕುಮಾರ್ ಅವರ 92 ನೇ ಜನ್ಮ ದಿನಾಚರಣೆಯಲ್ಲಿ ಡಾ.ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

1959 ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಡಾ.ರಾಜ್‍ಕುಮಾರ್ ಕನ್ನಡ ಚಲನಚಿತ್ರ ರಂಗದಲ್ಲಿ ಎಂದಿಗೂ ಅಜರಾಮರ,  ಚಲನಚಿತ್ರ ರಂಗದಲ್ಲಿ ಉತ್ತುಂಗಕ್ಕೆ ಏರಿದರೂ ಸಹ ಸರಳ ವ್ಯಕ್ತಿತ್ವವನ್ನು ಅವರು ಅಳವಡಿಸಿಕೊಂಡಿದ್ದರು. ಸಮಾಜಕ್ಕೆ ಆದರ್ಶಗಳನ್ನು ಕಟ್ಟಿಕೊಟ್ಟಂತಹ, ಸಾಮಾಜಿಕ ಸಂದೇಶಗಳನ್ನು ನೀಡುವ ಚಿತ್ರಗಳನ್ನು ನೀಡಿದ ಹೆಗ್ಗಳಿಕೆ ಡಾ.ರಾಜ್‍ಕುಮಾರ್ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಎಲ್ಲರಿಗೂ ಆದರ್ಶ ಪ್ರಾಯರಾಗಿ 200 ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಇವರು ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, ಕರ್ನಾಟಕ ರತ್ನ ಹೀಗೆ ಹತ್ತು ಹಲವು ಪ್ರಶಸ್ತಿಗಳು ಇವರನ್ನು ಹುಡುಕಿ ಬಂದವು ಎಂದು ತಿಳಿಸಿದರು.

ನಾಡು-ನುಡಿ ವಿಷಯದಲ್ಲಿ ಸದಾ ಮುಂದಿರುತ್ತಿದ್ದ ಡಾ.ರಾಜ್‍ಕುಮಾರ್ ಅವರು ಗೋಕಾಕ್ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿ, ಸರ್ಕಾರಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಅಂಗೀಕರಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದರು ಎಂದು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ತಿಳಿಸಿದರು.

ಡಾ.ರಾಜ್‍ಕುಮಾರ್  ಬೇಡರ ಕಣ್ಣಪ್ಪ, ಭಕ್ತ ಕನಕದಾಸ, ರಣಧೀರ ಕಂಠೀರವ, ಸತ್ಯ ಹರಿಶ್ಚಂದ್ರ, ಇಮ್ಮಡಿ ಪುಲಿಕೇಶಿ, ಶ್ರೀಕೃಷ್ಣ ದೇವರಾಯ, ಭಕ್ತ ಕುಂಬಾರ, ಮಯೂರ, ಬಬ್ರುವಾಹನ, ಭಕ್ತ ಪ್ರಹ್ಲಾದ ಹೀಗೆ ಹಲವು ಐತಿಹಾಸಿಕ, ಪೌರಾಣಿಕ ಮತ್ತು ಸಾಮಾಜಿಕ ಚಿತ್ರಗಳಲ್ಲಿ ನಟಿಸಿ ಕಣ್ಣಡಿಗರ ಮನಸ್ಸಿನಲ್ಲಿ ಸದಾ ಇದ್ದಾರೆ ಎಂದು ಹೇಳಿದರು.

ಡಾ.ರಾಜ್‍ಕುಮಾರ್ ಅವರು ಗಾಯಕರಾಗಿ, ಯಾರೇ ಕೂಗಾಡಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಹೇ.. ದಿನಕರ, ಹೃದಯ ಸಮುದ್ರ, ನಾದಮಯ ಹೀಗೆ ಹಲವು ಹಾಡುಗಳನ್ನು ಹಾಡಿ ರಾಷ್ಟ್ರೀಯ ಸಿನೆಮಾ ಪ್ರಶಸ್ತಿ ಪಡೆದಿದ್ದಾರೆ.

ಭಾರತೀಯ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಅಧಿಕಾರಿಗಳಿಗೆ ಕನ್ನಡ ಕಲಿಯಲು ಡಾ.ರಾಜ್ ಕುಮಾರ್ ಸಿನಿಮಾ ನೋಡಿ ಎಂದು ಸಲಹೆ ಮಾಡುತ್ತಾರೆ. ಅಷ್ಟರ ಮಟ್ಟಿಗೆ ಕನ್ನಡ ಭಾಷೆಯ ಉಚ್ಚರಣೆಯನ್ನು  ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಕಾಣಬಹುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಕುಮಾರ್ ಮಾತನಾಡಿ, ಡಾ.ರಾಜ್‍ಕುಮಾರ್ ಅವರನ್ನು ಪಡೆದಂತಹ ಕನ್ನಡಿಗರು ಧನ್ಯರು. ಡಾ.ರಾಜ್‍ಕುಮಾರ್ ಅವರ ತಂದೆಯವರು ಗುಬ್ಬಿ ವೀರಣ್ಣ ನಾಟಕ ಕಂಪನಿಯಲ್ಲಿ ಪಾತ್ರ ನಿರ್ವಹಿಸುತ್ತಿದ್ದರು. ನಂತರ ಸುಬ್ಬಯ್ಯ ನಾಯ್ಡು ನಾಟಕ ಕಂಪನಿಗೆ ಸೇರಿ ಉಗ್ರ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದರು        ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ