NEWSನಮ್ಮಜಿಲ್ಲೆನಮ್ಮರಾಜ್ಯ

ತಿ.ನರಸೀಪುರ: ಇಬ್ಬರನ್ನು ಬಲಿ ಪಡೆದ ಚಿರತೆ ಸೆರೆಗೆ ಕಾರ್ಯಾಚರಣೆ ತೀವ್ರ – ಕಬ್ಬು ಕಟಾವಿಗೆ ಡಿಸಿ ಡಾ. ರಾಜೇಂದ್ರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಇಬ್ಬರನ್ನು ಬಲಿ ಪಡೆದ ಚಿರತೆ ಸೆರೆಗೆ ಕಾರ್ಯಾಚರಣೆ ತೀವ್ರಗೊಂಡಿದ್ದು, ಚಿರತೆ ಹಾವಳಿ ಹೆಚ್ಚಾಗಿರುವ ತಿ.ನರಸೀಪುರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ಕಟಾವು ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ತಿ.ನರಸೀಪುರದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದು, ಆದರೆ, ಇಲ್ಲಿನ ನೂರಾರು ಎಕರೆ ಜಮೀನುಗಳಲ್ಲಿ ಬೆಳೆದಿರುವ ಕಬ್ಬಿನ ಗದ್ದೆಗಳಲ್ಲಿ ಚಿರತೆಗಳು ಅವಿತಿರುವ ಶಂಕೆ ವ್ಯಕ್ತವಾಗಿದೆ. ಕಬ್ಬು ಕಟಾವು ಮಾಡಿದರೆ ಚಿರತೆ ಸೆರೆ ಸಾಧ್ಯ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಹಿನ್ನೆಲೆ ಈ ಆದೇಶ ಹೊರಬಿದ್ದಿದೆ.

ತಾಲೂಕು ವ್ಯಾಪ್ತಿಯಲ್ಲಿ 195 ಗ್ರಾಮಗಳಿದ್ದು ಈ ಪೈಕಿ 23 ಪಂಚಾಯಿತಿಗಳ 40 ಗ್ರಾಮಗಳ ಕಬ್ಬಿನ ಬೆಳೆಯನ್ನು ಸಕಾಲದಲ್ಲಿ ಕಟಾವು ಮಾಡಿದ್ದಲ್ಲಿ ಚಿರತೆ ಸೆರೆಹಿಡಿಯವ ಕಾರ್ಯಕ್ಕೆ ಅನುಕೂಲವಾಗುತ್ತದೆ ಎಂದು ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ. ಹೀಗಾಗಿ ಆದಷ್ಟು ಬೇಗ ಪಕ್ವಗೊಂಡಿರುವ ಕಬ್ಬನ್ನು ಆದ್ಯತೆ ಮೇರೆಗೆ ಕಟಾವು ಮಾಡಲು ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ಇನ್ನು ಸಾರ್ವಜನಿಕರ ಹಾಗೂ ಜೀವಸಂಕುಲಗಳ ಪ್ರಾಣಹಾನಿ ತಡೆಯಲು ಹಾಗೂ ಸಾರ್ವಜನಿಕರಲ್ಲಿ ಚಿರತೆ ದಾಳಿ ಬಗ್ಗೆ ಭಯಹೋಗಲಾಡಿಸಲು ಚಿರತೆ ಸೆರೆ ಹಿಡಿಯಬೇಕಾಗಿರುವುದರಿಂದ ನರಸೀಪುರ ತಾಲೂಕು ವ್ಯಾಪ್ತಿಯಲ್ಲಿನ 23 ಗ್ರಾಮ ಪಂಚಾಯಿತಿಗಳಿಗೆ ಒಳಪಡುವ ತುರುಗನೂರು, ಯಾಚನಹಳ್ಳಿ, ಮಾರಗೌಡನಹಳ್ಳಿ, ದಾಸೇಗೌಡನಕೊಪ್ಪಲಿ, ಸಿ.ವಿ.ಕಪ್ಪು, ಕೇತುಪುರ, ಉಕ್ಕಲಗೆರೆ, ಎಂ.ಎಲ್.ಹುಂಡಿ, ಸೋಮನಾಥಪುರ, ಕಗ್ಗಲೀಪುರ, ದೊಡ್ಡಬಾಗಿಲು, ಹೊರಳಹಳ್ಳಿ, ಕರುಗಹಳ್ಳಿ, ಚಿದರವಳ್ಳಿ.

ಎಸ್.ದೊಡ್ಡಪುರ, ಬೋಳೇಗೌಡನಹುಂಡಿ, ಕಂಪನಪುರ, ರಾಮೇಗೌಡನಪುರ, ಚಿಕ್ಕಕಲ್ಕುಣಿ, ನರಗ್ಯಾತನಹಳ್ಳಿ, ಹಲವಾರ, ಚಿಟಿಗಯ್ಯನಕೊಪ್ಪಲು, ನಾಗಲಗೆರೆ, ಮುಸುವಿನಕೊಪ್ಪು, ಸೋಸಲೆ, ಬೆನಕನಹಳ್ಳಿ, ವೀರಪ್ಪೊಡೆಯರ್ ಹುಂಡಿ, ಕಾಳಬಸವನ ಹುಂಡಿ, ಗಾಡಿಜೋಗಿಹುಂಡಿ, ಮಾದಿಗಹಳ್ಳಿ, ಸುಜಲೂರು, ತುಂಬಲ, ಯರಗನಹಳ್ಳಿ, ಬಿ.ಸೀಹಳ್ಳಿ, ಮಾದಾಪುರ, ಹಿರಿಯೂರು, ಮೂಗೂರು, ಕೂಡೂರು ಸೇರಿದಂತೆ ಒಟ್ಟು 40 ಗ್ರಾಮಗಳಲ್ಲಿ ರೈತರು ಬೆಳೆದಿರುವ ಪಕ್ವಗೊಂಡಿರುವ ಕಬ್ಬನ್ನು ಮೊದಲ ಆದ್ಯತೆ ಮೇಲೆ ಜರೂರಾಗಿ ಕಟಾವು ಮಾಡಿಸಿ ಕಾರ್ಖಾನೆಗೆ ಸಾಗಾಣಿಕೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಆದೇಶಿಸಿದ್ದಾರೆ.

ಕಳೆದ ಅಕ್ಟೋಬರ್, 31 ರಂದು ಸೋಸಲೆ ಹೋಬಳಿ ಎಂ.ಎಲ್.ಹುಂಡಿ ಗ್ರಾಮದ ನಿವಾಸಿ ಪದವಿ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್ ಎಂಬ ಯುವಕ ಹಾಗೂ ಡಿಸೆಂಬರ್ 1 ರಂದು ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ ಎಂಬ ಯುವತಿಯು ಚಿರತೆ ದಾಳಿಯಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ