NEWSನಮ್ಮರಾಜ್ಯರಾಜಕೀಯ

ತಳಮಟ್ಟದಿಂದ ಎಎಪಿ ಪಕ್ಷಸಂಘಟನೆಗೆ ರಾಜ್ಯ ಪರ್ಯಾಟನೆ: ಕಲ್ಯಾಣ ಕರ್ನಾಟಕ ಪ್ರವಾಸದಲ್ಲಿ ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸುವ ಮೂಲಕ ರಾಜ್ಯದಲ್ಲಿ ಪರ್ಯಾಯ ಶಕ್ತಿಯಾಗಿ ಅಧಿಕಾರ ಸ್ಥಾಪಿಸುವ ಗುರಿಯೊಂದಿಗೆ ಹೆಜ್ಜೆಯಿಟ್ಟಿರುವ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಕಲ್ಯಾಣ ಕರ್ನಾಟಕದ ಮೂರು ಜಿಲ್ಲೆಗಳ ಪ್ರವಾಸವನ್ನು ಕೈಗೊಂಡಿದ್ದಾರೆ.

ಭಾನುವಾರ ನಗರದಲ್ಲಿ ಹಿಂದುಳಿದ ವರ್ಗಗಳ ನಾಯಕರ ಜತೆ ಸಭೆ ನಡೆಸಿದ್ದು, ಜನವರಿ 29 ರಿಂದ ಪ್ರವಾಸದಲ್ಲಿ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಆಯಾ ಜಿಲ್ಲೆಯ ಸ್ಥಳೀಯ ಮಟ್ಟದ ಮುಖಂಡರನ್ನು ಭೇಟಿಯಾಗಿ, ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲಿದ್ದಾರೆ.

ಜ. 29 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬೀದರ್ ಜಿಲ್ಲೆಗೆ ಭೇಟಿ ನೀಡಲಿರುವ ಅವರು, 11 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪಕ್ಷದ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಂಜೆ 4.30ಕ್ಕೆ ಮಂಗಳಗಿ ಗ್ರಾಮದಲ್ಲಿ ಅರಳಿಕಟ್ಟೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 8 ಗಂಟೆಗೆ ಕಲಬುರಗಿಗೆ ತೆರಳಲಿದ್ದು, ಅಲ್ಲಿ ತಂಗಲಿದ್ದಾರೆ.

ಜನವರಿ 30 ರಂದು ಮುಖ್ಯಮಂತ್ರಿ ಚಂದ್ರು ಬೆಳಗ್ಗೆ ಕಲಬುರಗಿಯಲ್ಲಿ 11 ಗಂಟೆಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ 12 ರಿಂದ 2 ಗಂಟೆಯವರೆಗೆ ಎಂಎಲ್‌ಸಿ ಪದವೀಧರರ ಕ್ಷೇತ್ರದ ಸಭೆ ನಡೆಯಲಿದ್ದು, ಅಭ್ಯರ್ಥಿ ಪ್ರತಾಪ್ ರೆಡ್ಡಿ ಮತ್ತು 7 ಜಿಲ್ಲಾಧ್ಯಕ್ಷರ ಜೊತೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮುಖಂಡರ ಜೊತೆ ಸಭೆ ನಡೆಸಲಿದ್ದು, ಸಂಜೆ 4.30ಕ್ಕೆ ಕಲಬುರಗಿಯ ವಿವೇಕಾನಂದ ನಗರದಲ್ಲಿ ಅರಳಿಕಟ್ಟೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಯಾದಗಿರಿಗೆ ತೆರಳಲಿದ್ದಾರೆ.

ಪ್ರವಾಸದ ಕೊನೇ ದಿನ ಜ.31ರಂದು ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿರುವ ಅವರು ಬೆಳಗ್ಗೆ 9 ಗಂಟೆಗೆ ಮಾದನಪುರಕ್ಕೆ ತೆರಳಲಿದ್ದಾರೆ. 11 ಗಂಟೆಗೆ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಶಹಾಪುರದ ಸಿಪಿಎಸ್ ಶಾಲಾ ಮೈದಾನದಲ್ಲಿ ಅರಳಿಕಟ್ಟೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಿತ್ರದುರ್ಗದಲ್ಲಿ ಭಾನುವಾರ ಆಯೋಜಿಸಿದ್ದ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯ ಮಂತ್ರಿ ಚಂದ್ರು ಇತರರು ಭಾಗಿಯಾಗಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!