NEWSನಮ್ಮಜಿಲ್ಲೆನಮ್ಮರಾಜ್ಯ

ನ.7ರಂದು KSRTC ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸಮಾವೇಶ ಹುಬ್ಬಳ್ಳಿಯಲ್ಲಿ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ರಾಜ್ಯ ಸಾರಿಗೆ ನಿಗಮಗಳ ವೇತನ ಪರಿಷ್ಕರಣೆ ಸೇರಿದಂತೆ ಇತರ ಬೇಡಿಕೆಗಳ ಈಡೆರಿಕೆಗೆ ಕೂಡಲೇ ಸರ್ಕಾರ ಸಾರಿಗೆ ಸಂಘಟನೆಗಳ ಸಭೆ ಕರೆಯಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ  ಒತ್ತಾಯಿಸಿ ಇದೇ ನ.7ರಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಬೃಹತ್‌ ಸಮಾವೇಶವನ್ನು ಹುಬ್ಬಳಿಯಲ್ಲಿ ಆಯೋಜಿಸಿದೆ.

ಅಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಬಸವೇಶ್ವರ ನಗರದ ಗೋಕುಲ ರಸ್ತೆಯಲ್ಲಿರುವ ಡಾ.ಕೆ. ಎಸ್. ಶರ್ಮಾ ಸಭಾ ಭವನ ಸಮಾವೇಶ ನಡೆಯಲಿದ್ದು ಈ ಹಿಂದಿನಂತೆ ಇಲ್ಲಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಚರ್ಚಿಸಲಾಗುವುದು.

ಅಂದರೆ, ಕೆಎಸ್‌ಆರ್‌ಟಿಸಿ ನಾಲ್ಕೂ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ 6 ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು 11-10-2022 (ಮಂಗಳವಾರ) ರಂದು ಬೆಂಗಳೂರಿನಲ್ಲಿ ಮತ್ತು 20-10-2022 (ಗುರುವಾರ ) ರಂದು ಕಲಬುರಗಿಯಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಸಾರಿಗೆ ನೌಕರರ ಜಾಗೃತಿ ಸಮಾವೇಶಗಳಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಎಲ್ಲ ಸಂಘಟನೆಯ ಕಾರ್ಯಕರ್ತರು ಸಾರಿಗೆ ನಿಗಮದ ಎಲ್ಲ ಕಾರ್ಮಿಕರನ್ನು ಪ್ರತಿನಿದಿಸಿದ್ದರು. ಆ ಸಮಾವೇಶದಲ್ಲಿ ಕೆಳಕಂಡ ಘೋಷಣೆಯನ್ನು ಒಮ್ಮತದಿಂದ ಅಂಗೀರಿಸಲಾಗಿದೆ.

ಈ ಜಂಟಿ ಸಮಿತಿಯು ವಾಯವ್ಯ ಮತ್ತು ಈಶಾನ್ಯ ನಿಗಮಗಳಲ್ಲಿ ಗುತ್ತಿಗೆ ಪದ್ಧತಿಯ ಮೂಲಕ ಸಿಬ್ಬಂದಿಗಳನ್ನು ನೇಮಿಸುವುದನ್ನು ನಿಲ್ಲಿಸಬೇಕೆಂದು ಆಡಳಿತ ವರ್ಗವನ್ನು ಒತ್ತಾಯಿಸಿದೆ. ಅದೇ ರೀತಿಯಲ್ಲಿ ನಿಗಮಗಳಿಗೆ ಸೇರಿರುವ 41 ಮಾರ್ಗಗಳನ್ನು ಖಾಸಗಿಯವರಿಗೆ ಕೊಡುವುದನ್ನು ರದ್ದು ಮಾಡಬೇಕೆಂದು ಆಗ್ರಹಿಸುವ ತೀರ್ಮಾನ ತೆಗೆದುಕೊಂಡಿದೆ.

ನಾಲ್ಕು ಸಾರಿಗೆ ನಿಗಮಗಳಲ್ಲಿ (ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ವಾಯುವ ಮತ್ತು ಕಲ್ಯಾಣ ಕರ್ನಾಟಕ) ಸುಮಾರು ಒಂದು ಲಕ್ಷ ಏಳು ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ. ನಿಗಮಗಳಲ್ಲಿ ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಹೆಚ್ಚಳ ಮಾಡುವ ಪರಂಪರೆ ಇದೆ. 1996ಕ್ಕೆ ಮುಂಚೆ ಕಾರ್ಮಿಕ ಸಂಘಟನೆಗಳು ವೇತನ ಹೆಚ್ಚಳ ಇತ್ಯಾದಿ ಸೌಲಭ್ಯಗಳ ಬಗ್ಗೆ ಆಡಳಿತ ವರ್ಗಕ್ಕೆ ಕೊಡುತ್ತಿದ್ದ ಬೇಡಿಕೆಗಳ ಬಗ್ಗೆ ಚರ್ಚೆಗಳಾಗಿ ಕೈಗಾರಿಕಾ ವಿವಾದ ಕಾಯಿದೆ 1947ರ ಪ್ರಕಾರ ದ್ವಿಪಕ್ಷೀಯ ಒಪ್ಪಂದಗಳಾಗುತ್ತಿದ್ದವು.

1996ರ ನಂತರ ಆಡಳಿತ ವರ್ಗ ಏಕ ಪಕ್ಷೀಯವಾಗಿ ವೇತನ ಹೆಚ್ಚಳ ಮಾಡುತ್ತಿತ್ತು. 2012 ಮತ್ತು 2016 ರಲ್ಲಿ ಸಾರಿಗೆ ನೌಕರರ ರಾಜ್ಯವ್ಯಾಪಿ ಮಾಡಿದ ಮುಷ್ಕರಗಳ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಚರ್ಚೆ ನಡೆಸಿ ವೇತನ ಪರಿಷ್ಕರಣೆ ಆಯಿತು.

ಅದೇನೇ ಇರಲಿ ಇಂದು ಬೆಲೆ ಏರಿಕೆ ಮತ್ತಿತರ ಕಾರಣಗಳಿಂದ ಸಾರಿಗೆ ನಿಗಮಗಳ ನೌಕರರು ಜೀವನ ನಡೆಸುವುದೇ ಕಷ್ಟವಾಗಿದೆ. ನಾವು ನಮ್ಮ ಜಂಟಿ ಕ್ರಿಯಾ ಸಮಿತಿ ವತಿಯಿಂದ 10 ಅಂಶಗಳ ಬೇಡಿಕೆಗಳ ಪ್ರಣಾಳಿಕೆಯನ್ನು 08.08.2022 ರಂದು ಸಾರಿಗೆ ನಿಗಮಗಳ ಆಡಳಿತ ವರ್ಗಕ್ಕೆ ಕೊಟ್ಟಿದ್ದೇವೆ. ವೇತನ, ಬಾಟ ಇತ್ಯಾದಿಗಳ ಹೆಚ್ಚಳ, ಉತ್ತಮ ವೈದ್ಯಕೀಯ ಸೌಲಭ್ಯ, ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿಗದಿ ಪಡಿಸುವುದು (ಫಾರಂ-4).

ಮಹಿಳಾ ನೌಕರರಿಗೆ ಸಂಬಂಧಪಟ್ಟ ಕೆಲವು ಬೇಡಿಕೆಗಳು, ಉತ್ತಮವಾದ ಪೆನ್ಶನ್, ಕೈಗಾರಿಕಾ ಒಪ್ಪಂದಗಳಂತೆ ಗ್ರಾಚ್ಯುಯಿಟಿ ಕೊಡುವುದು ಹಾಗೂ ಮುಷ್ಕರದ ಸಂದರ್ಭದಲ್ಲಿ ವಜಾ ಆಗಿರುವ ಎಲ್ಲ ನೌಕರರನ್ನು ಬೇಷರತ್ತಾಗಿ ಕೂಡಲೇ ಕೆಲಸಕ್ಕೆ ತೆಗೆದುಕೊಳ್ಳುವುದು ಮುಂತಾದ ಬೇಡಿಕೆಗಳ ಬಗ್ಗೆ ಕೆ.ಎಸ್.ಆರ್.ಟಿ.ಸಿ ಆಡಳಿತ ವರ್ಗಕ್ಕೆ ವಿವರವಾಗಿ ತಿಳಿಸಿದ್ದೇವೆ. ಆದರೆ ಈವರೆಗೂ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ.

ಹೀಗಾಗಿ ಮುಂದಿನ ದಿನದಲ್ಲಿ ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುವ ಸಲುವಾಗಿ ಮತ್ತೆ ಮೂರನೇ ಸಮಾವೇಶವನ್ನು ಹುಬ್ಬಳ್ಳಿಯಲ್ಲಿ ಇದೆ 7 ರಂದು ಆಯೋಜನೆ ಮಾಡಲಾಗಿದೆ.

ಕಲಬುರಗಿಯಲ್ಲಿ ನಡೆದ ಸಮಾವೇಶದಲ್ಲಿ ತೆಗೆದುಕೊಂಡ ನಿರ್ಣಯಗಳು
ಕಲಬುರಗಿಯಲ್ಲಿ ನಡೆದ ಸಮಾವೇಶದಲ್ಲಿ ತೆಗೆದುಕೊಂಡ ನಿರ್ಣಯಗಳು

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ