ದೇಶ-ವಿದೇಶ

ನೆಗಡಿ, ಕೆಮ್ಮು ಇರುವವರ ಚಿಕಿತ್ಸೆಗೆ ಫ್ಲೂ ಕಾರ್ನರ್ ಸ್ಥಾಪಿಸಿ: ಡಿಸಿ ದೀಪಾ ಚೋಳನ್

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕರೋನಾದ ಲಕ್ಷಣಗಳು ಇಲ್ಲದಿದ್ದರು ಸಹ ನೆಗಡಿ, ಕೆಮ್ಮು, ಸೀನಿನಿಂದ ಬಳಲುತ್ತಿರುವವರ ಚಿಕಿತ್ಸೆಗಾಗಿ ಪ್ರತ್ಯೇಕ ಫ್ಲೂ ಕಾರ್ನರ್ ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಇಂದು ನಡೆದ ಆರೋಗ್ಯ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೋಗದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಿ ಭಯ ನಿವಾರಿಸಬೇಕು. ರೋಗ ಲಕ್ಷಣ ಇರುವವರು ಮತ್ತು ಚಿಕಿತ್ಸೆ ನೀಡುವ ನರ್ಸಿಂಗ್ ಮತ್ತು ವೈದ್ಯಕೀಯ ಸಿಬ್ಬಂದಿ ಹೊರತುಪಡಿಸಿ ಸಾಮಾನ್ಯ ಜನರಿಗೆ ಮಾಸ್ಕ್ ಬಳಕೆಯ ಅಗತ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ರೈಲು, ವಿಮಾನ ನಿಲ್ದಾಣಗಳಲ್ಲಿ ದೂರದ ಪ್ರದೇಶಗಳಿಂದ ಬರುವ ಎಲ್ಲ ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡುವ ಕಾರ್ಯ ತ್ವರಿತವಾಗಿ ಆರಂಭಿಸಬೇಕು. ಶಿಕ್ಷಿತರು ಮತ್ತು ಅನಕ್ಷರಸ್ಥರಿಗೆ ಕರೋನಾ ವೈರಸ್ ಕುರಿತು ಸಮಾನವಾಗಿ ತಿಳುವಳಿಕೆ ನೀಡಬೇಕು. ಐಇಸಿ ಚಟುವಟಿಕೆಗಳನ್ನು ಸಂವಹನದ ವರ್ತನೆ ಬದಲಾಯಿಸಿಕೊಳ್ಳುವ (Behavioural changing communication) ತಿಳುವಳಿಕೆ ನೀಡುವ ಕಾರ್ಯಕ್ರಮವಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ, ಸಾರ್ವಜನಿಕ ಆರೋಗ್ಯ ಹಿತದೃಷ್ಠಿಯಿಂದ ಎಲ್ಲ ಜಾತ್ರೆ, ಉರುಸು, ಧಾರ್ಮಿಕ ಆಚರಣೆಗಳು ರದ್ದುಗೊಂಡಿವೆ. ಧಾರ್ಮಿಕ ಮುಖಂಡರು ಸ್ವಯಂಪ್ರೇರಿತರಾಗಿ ಇವುಗಳ ಆಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಹಕರಿಸಲು ಕೋರಬೇಕು. ವಿದೇಶಗಳಿಂದ ಬಂದಿರುವ ನಿವಾಸಿಗಳ ಬಗ್ಗೆ ಮಾಹಿತಿ ಕ್ರೋಢಿಕರಿಸಬೇಕು ಎಂದು ಸಲಹೆ ನೀಡಿದರು.

ಹುಬ್ಬಳ್ಳ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ಕಿಮ್ಸ್ ವೈದ್ಯಕೀಯ ನಿರ್ದೇಶಕ ಡಾ. ಅರುಣಕುಮಾರ, ರೈಲ್ವೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರವಿ, ಎಸ್‍ಡಿಎಮ್ ಆಸ್ಪತ್ರೆಯ ಡಾ. ವಿಜಯ ಕುಲಕರ್ಣಿ, ಡಾ. ಬಲರಾಮ ನಾಯಕ್, ಡಾ.ಕಿರಣ ಹೆಗಡೆ, ಡಾ. ಎಸ್.ಎಮ್. ಹೊನಕೇರಿ, ಡಾ. ಎಸ್.ಎಮ್. ನಿಂಬಣ್ಣವರ, ಡಾ. ತನುಜಾ, ಡಾ. ಶ್ರೀನಿವಾಸ, ಡಾ. ಭಾರತಿ ಕೊರ್ಲಹಳ್ಳಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಂಗಮೇಶ ಕಲಹಾಳ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ