ಬಾಗಲಕೋಟೆ: ಜಿಲ್ಲೆಯ ಮುಧೋಳ ಸಮೀಪದಲ್ಲಿ ಇರುವ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆಯ ಡಿಸ್ಟಿಲರಿ ಘಟಕದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಕಾರ್ಮಿಕನೊಬ್ಬ ಅಸುನೀಗಿದ್ದು, ನಾಲ್ವರಿಗೆ ಗಾಯಗೊಂಡಿದ್ದಾರೆ.
ಕಾರ್ಖಾನೆಯ ಡಿಸ್ಟಿಲರಿ ಘಟಕದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಕಾರ್ಮಿಕ ಗುರುನಾಥ್ ಹುಚ್ಚಣ್ಣವರ (27) ಎಂಬುವರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಮುಧೋಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮುಧೋಳ ಪೊಲೀಸರು ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಜರುಗಿಸಿದ್ದಾರೆ.
ಇನ್ನು ಇದೇ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆಯ ಡಿಸ್ಟಿಲರಿ ಘಟಕದಲ್ಲೇ ಕಳೆದ 2018ರ ಡಿಸೆಂಬರ್ ತಿಂಗಳಿನಲ್ಲಿ ಇದೇ ರೀತಿ ಸ್ಫೋಟ ಸಂಭವಿಸಿ 6 ಮಂದಿ ಮೃತಪಟ್ಟು ಐದು ಮಂದಿ ಕಾರ್ಮಿ ಕರು ಗಾಯಗೊಂಡಿದ್ದರು. ಮತ್ತೆ ಅದೇ ರೀತಿ ಡಿಸ್ಟಿಲರಿ ಘಟಕದಕ್ಕೇ ಸ್ಫೋಟವಾಗಿರುವುದು ನೌಕರರಲ್ಲಿ ಆತಂಕ ಹೆಚ್ಚಿಸಿದೆ.
![](https://vijayapatha.in/wp-content/uploads/2024/02/QR-Code-VP-1-1-300x62.png)