VIJAYAPATHA.IN > ವಿಜಯಪಥ > NEWS > Crime > ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಚಾರ್ಜ್‌ಶೀಟ್ ವಿಳಂಬ; ಇನ್ಸ್‌ಪೆಕ್ಟರ್ ಅಮಾನತು
ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಚಾರ್ಜ್‌ಶೀಟ್ ವಿಳಂಬ; ಇನ್ಸ್‌ಪೆಕ್ಟರ್ ಅಮಾನತು
admin.savhnJune 12, 2020
ಹುಬ್ಬಳ್ಳಿ: ಪಾಕಿಸ್ತಾನದ ಪರ ಘೋಷಣೆಕೂಗಿದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಲು ವಿಳಂಬ ಮಾಡಿದ ಇನ್ಸ್‌ಪೆಕ್ಟರ್‌ಅನ್ನು ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಅಮಾನತು ಮಾಡಿ ಅದೇಶ ಹೊರಡಿಸಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಮಾಡಿದ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾ ಅಮಾನತುಗೊಂಡವರು. ಮೂರು ತಿಂಗಳ ಹಿಂದೆ ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನ ಬಾಸೀತ ಸೋಪಿ, ತಾಲೀಬ್ ವಾನಿ ಅಮೀರ್ ಮತ್ತು ಮೊಯೊನುದ್ದೀನ್ ವಾನಿ ಈ ಮೂವರು ವಿದ್ಯಾರ್ಥಿಗಳು ಘೋಷಣೆಕೂಗಿದ್ದರು. ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು.
ಈ ಪ್ರಕರಣ ಚಾರ್ಜ್‌ಶೀಟ್‌ಅನ್ನು 90ದಿನದ ಒಳಗೆ ಸಲ್ಲಿಸಬೇಕಿತ್ತು. ಆದರೆ ಸಲ್ಲಿಸಿಲ್ಲ. ಇದೇ ಕಾರಣಕ್ಕೆ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿತ್ತು. ಈ ಬಗ್ಗೆ ಸೂಕ್ತ ತನಿಖೆ ಮಾಡಿ ಸಮಯಕ್ಕೆ ಸರಿಯಾಗಿ ಚಾರ್ಜ್‌ಶೀಟ್ ಸಲ್ಲಿಸುವಲ್ಲಿ ಪೊಲೀಸ್ ಅಧಿಕಾರಿ ವಿಫಲರಾಗಿದ್ದಾರೆ ಎಂದು ಐಜಿಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)
Related
admin.savhn
Leave a reply