NEWSನಮ್ಮರಾಜ್ಯರಾಜಕೀಯ

ಪಂಜಾಬ್‌ಮಾದರಿಯಲ್ಲಿ ಕರ್ನಾಟಕದ ಟೋಲ್‌ರದ್ದುಪಡಿಸಲು ಎಎಪಿ ಆಗ್ರಹ

ಮಾಜಿ ಐಎಎಸ್ ಅಧಿಕಾರಿ, ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ 1300 ಕೋಟಿ ಹಗರಣ ಬಯಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಂಜಾಬ್‌ರಾಜ್ಯದ ಆಮ್‌ಆದ್ಮಿ ಪಾರ್ಟಿ ಸರ್ಕಾರವು ಈವರೆಗೆ ಎಂಟು ಟೋಲ್‌ಪ್ಲಾಜಾಗಳನ್ನು ಮುಚ್ಚಿದ್ದು, ಕರ್ನಾಟಕದಲ್ಲೂ ಇದೇ ಮಾದರಿಯನ್ನು ಅನುಸರಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಂದು ಆಮ್‌ಆದ್ಮಿ ಪಾರ್ಟಿ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ಕಾಳಪ್ಪ ಆಗ್ರಹಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬ್ರಿಜೇಶ್‌ಕಾಳಪ್ಪ, “ದೆಹಲಿ ಸಿಎಂ ಅರವಿಂದ್‌ಕೇಜ್ರಿವಾಲ್‌ಹಾಗೂ ಪಂಜಾಬ್‌ಸಿಎಂ ಭಗವಂತ್‌ಮಾನ್‌ಅವರು ಪ್ರತಿ ಟೋಲ್‌ಪ್ಲಾಜಾಗೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ. ಪಿಪಿಪಿ ಮಾದರಿಯ ಅಗ್ರಿಮೆಂಟ್‌ನಲ್ಲಿ ಏನಿತ್ತು, ಎಷ್ಟು ಹಣ ಸಂಗ್ರಹವಾಗಬೇಕಿತ್ತು, ಎಷ್ಟು ಹಣ ಸಂಗ್ರಹವಾಗಿದೆ, ಯಾವ ಟೋಲ್‌ಸ್ಥಗಿತಗೊಳಿಸಬೇಕಿತ್ತು – ಮುಂತಾದ ಮಾಹಿತಿಗಳನ್ನು ತಿಳಿದುಕೊಂಡು ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.

ಇನ್ನು ಪಂಜಾಬ್‌ನಲ್ಲಿ ಆಮ್‌ಆದ್ಮಿ ಪಾರ್ಟಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈವರೆಗೆ ಎಂಟು ಟೋಲ್‌ಪ್ಲಾಜಾಗಳನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಕಮಿಷನ್‌ಆಸೆಗಾಗಿ ಅವಧಿ ಮುಗಿದರೂ ಟೋಲ್‌ಮುಂದುವರಿಸಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿದರು.

20 ವರ್ಷದ ಅವಧಿ ಮುಗಿದಿದ್ದರೂ ಇರುವ ತುಮಕೂರು ಟೋಲ್‌ಪ್ಲಾಜಾ ಸೇರಿದಂತೆ ಅನೇಕ ಅವಧಿ ಮುಗಿದ ಟೋಲ್‌ಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಪೆಟ್ರೋಲ್‌ಬೆಲೆ ಏರಿಕೆಯಿಂದ ಈಗಾಗಲೇ ಹೈರಾಣಾಗಿರುವ ಜನರಿಗೆ ಟೋಲ್‌ಗಳಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ಹೆದ್ದಾರಿಯು ದಶಪಥವಲ್ಲ, ಆರು ಪಥವೆಂದು ನಾವು ಹೇಳಿದ್ದೆವು. ನಂತರ ಸರ್ಕಾರ ಕೂಡ ಇದನ್ನು ಒಪ್ಪಿಕೊಂಡಿದೆ. ಆ ಹೆದ್ದಾರಿಯನ್ನು 2 ಪಥದಿಂದ 4 ಪಥ ಮಾಡುವಾಗ ಟೋಲ್‌ವಿಧಿಸಿರಲಿಲ್ಲ. ಅದೇ ರೀತಿ ಈಗ 4 ಪಥದಿಂದ 6 ಪಥ ಮಾಡುವುದಾಗಲೂ ಟೋಲ್‌ವಿಧಿಸದೇ ಜನಸಾಮಾನ್ಯರಿಗೆ ನೆರವಾಗಬೇಕಿತ್ತು.

ಉಚಿತವಾಗಿ ರಸ್ತೆ ನೀಡಿ ಸರ್ಕಾರ ಜಂಭದಿಂದ ಪ್ರಚಾರ ಪಡೆದಿದ್ದರೆ, ಅದಕ್ಕೊಂದು ಅರ್ಥವಿರುತ್ತಿತ್ತು. ದೆಹಲಿಯ ಆಮ್‌ಆದ್ಮಿ ಪಾರ್ಟಿಯು ಸರ್ಕಾರಿ ಶಾಲೆಗಳಲ್ಲಿ ಈಜುಕೊಳ ತೆರೆದರೆ, ಬಿಜೆಪಿ ಸರ್ಕಾರಗಳು ತೆರೆದ ರಸ್ತೆಗಳಲ್ಲಿ ಈಜುಕೊಳಗಳು ತನ್ನಿಂತಾನೇ ಸೃಷ್ಟಿಯಾಗಿವೆ ಎಂದು ಹೇಳಿದರು.

2019-20ರಲ್ಲಿ ಹಿರಿಯ ಐಎಎಸ್‌ಅಧಿಕಾರಿ ಅನಿಲ್‌ಕುಮಾರ್‌ರವರು ಬಿಬಿಎಂಪಿ ಕಮಿಷನರ್‌ಆಗಿದ್ದರು. ಈಗವರು ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಅವರು ಬಿಬಿಎಂಪಿ ಕಮಿಷನರ್‌ಆಗಿದ್ದ ಸಂದರ್ಭದಲ್ಲಿ ಮೂರು ಪ್ರಮುಖ ಅಕ್ರಮಗಳು ನಡೆದಿವೆ.

ಸ್ಮಾರ್ಟ್‌ಪಾರ್ಕಿಂಗ್‌ಗೆ 31.6 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಅಷ್ಟು ಹಣ ಖರ್ಚಾಗದಿದ್ದರೂ ಹೆಚ್ಚುವರಿಯಾಗಿ 2 ಕೋಟಿ ರೂ. ಬಿಡುಗಡೆಯಾಗಿದೆ. ಅನಿಲ್‌ಕುಮಾರ್‌ರವರು ಗುತ್ತಿಗೆ ಸಂಸ್ಥೆಯಾದ ಬಿಲ್ಡಿಂಗ್ಸ್ ಕಂಟ್ರೋಲ್‌ಸೊಲ್ಯೂಷನ್‌ಇಂಡಿಯಾ ಪ್ರೈವೇಟ್‌ಲಿಮಿಟೆಡ್‌ಕಂಪನಿಗೆ ಇದನ್ನು ಬಿಡುಗಡೆ ಮಾಡಿಸಿದ್ದಾರೆ ಎಂದು ಆರೋಪಿಸಿದರು.

ಅನಿಲ್‌ಕುಮಾರ್‌ಕಮಿಷನರ್‌ಆಗಿದ್ದ ಸಂದರ್ಭದಲ್ಲಿ ಮಳೆ ನೀರಿನ ಹೂಳು ತೆಗೆಯುವ ಕಾಮಗಾರಿಯಲ್ಲಿ ಅವ್ಯವಹಾರವಾಗಿದೆ. ಎಂಟು ವಲಯಗಳ ಗುತ್ತಿಗೆಯನ್ನು ಮೆಸರ್ಸ್‌ಯೋಗ ಅಂಡ್‌ಕಂಪನಿ ಎಂಬ ಒಂದೇ ಸಂಸ್ಥೆಗೆ 36 ಕೋಟಿ ರೂ. ಮೊತ್ತಕ್ಕೆ ನೀಡಲಾಗಿದೆ. ಈ ಕಾಮಗಾರಿ ಸರಿಯಾಗಿ ನಡೆಯದಿರುವುದರಿಂದ ಬೆಂಗಳೂರಿನಲ್ಲಿ ಪ್ರವಾಹ ನೋಡಬೇಕಾಯಿತು. ಅಗತ್ಯಕ್ಕಿಂತ ಹೆಚ್ಚು ಹಣ ಬಿಡುಗಡೆ ಮಾಡಿ ಜನರ ತೆರಿಗೆ ಹಣವನ್ನು ಲೂಟಿ ಮಾಡಲಾಗಿದೆ ಎಂದು ಹೇಳಿದರು.

“ಅನಿಲ್‌ಕುಮಾರ್‌ಕಮಿಷನರ್‌ಆಗಿದ್ದ ಸಂದರ್ಭದಲ್ಲಿ ಕೊಳವೆ ಬಾವಿಗಳ ಕಾಮಗಾರಿಗೆ ಬಿಬಿಎಂಪಿಯು 969 ಕೋಟಿ ರೂ. ಬಿಡುಗಡೆ ಮಾಡಿದೆ. ಇಷ್ಟು ದೊಡ್ಡ ಪ್ರಮಾಣದ ಹಣವು ಹೇಗೆ ಬಳಕೆಯಾಗಬೇಕು ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಒಂದೇ ಕಡೆ 49 ಕೋಟಿ ರೂ. ಖರ್ಚು ಮಾಡಿರುವುದೂ ಇದೆ.

ಇದಲ್ಲದೇ, ಕೋವಿಡ್‌ಚಿಕಿತ್ಸೆಗಾಗಿ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಯಲಯದಲ್ಲಿ ಚಿಕಿತ್ಸಾ ಕೇಂದ್ರ ತೆರೆಯಲಾಗಿತ್ತು. ಅಲ್ಲಿಗೆ ಹಾಸಿಗೆ ಮುಂತಾದವುಗಳಿಗೆ ಕೋಟ್ಯಂತರ ಹಣ ಖರ್ಚು ಮಾಡಿರುವುದರಲ್ಲಿಯೂ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಅನಿಲ್‌ಕುಮಾರ್‌ಕಮಿಷನರ್‌ಆಗಿದ್ದಾಗ ಸುಮಾರು 1300 ಕೋಟಿ ರೂ. ಮೊತ್ತದ ಅಕ್ರಮಗಳು ನಡೆದಿವೆ. ಇವೆಲ್ಲವುಗಳ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ ಎಂದರು.

ಆಮ್‌ಆದ್ಮಿ ಪಾರ್ಟಿ ರಾಜ್ಯ ಕಾರ್ಯಾಧ್ಯಕ್ಷರಾದ ಬಿ.ಟಿ.ನಾಗಣ್ಣ ಮಾತನಾಡಿ, ಒಂದು ಲೀಟರ್‌ಪೆಟ್ರೋಲ್‌ಗೆ 9 ರೂಪಾಯಿ ಸೆಸ್‌ವಿಧಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗಾಗಿಗೇ ಈ ಸೆಸ್‌ಸಂಗ್ರಹಿಸಲಾಗುತ್ತಿದೆ. ಹೀಗಿರುವಾಗ ಪ್ರತ್ಯೇಕವಾಗಿ ಟೋಲ್‌ಸಂಗ್ರಹಿಸುವ ಅವಶ್ಯಕತೆ ಏನಿದೆ? ಬೆಂಗಳೂರಿನಿಂದ ಮೈಸೂರಿಗೆ ಹೋಗಿ ಹಿಂದಿರುಗಲು ವಾಹನಸವಾರರು ಸೆಸ್‌ಹಾಗೂ ಟೋಲ್‌ಗಾಗಿ ಒಟ್ಟು 450 ರೂಪಾಯಿ ಖರ್ಚು ಮಾಡಬೇಕಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆಮ್‌ಆದ್ಮಿ ಪಾರ್ಟಿ ರಾಜ್ಯ ಕಾರ್ಯಾಧ್ಯಕ್ಷರಾದ ವಿಶ್ವನಾಥ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ವಿ.ಸದಂ ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ