NEWSನಮ್ಮರಾಜ್ಯರಾಜಕೀಯ

ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿ: ಎಸ್ಪಿ ರಿಷ್ಯಂತ್ ಕ್ಷಮೆ ಕೇಳದಿದ್ದರೆ ಗೃಹ ಸಚಿವರ ಕಾರ್ಯಕ್ರಮ ಬಹಿಷ್ಕರ- ಪ್ರೆಸ್‌ಟ್ರಸ್ಟ್ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಪತ್ರಕರ್ತ ಹಾಲಸ್ವಾಮಿ ಅವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಿರುಕುಳ ನೀಡಿರುವ ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಕ್ಷಮೆ ಕೇಳದಿದ್ದಲ್ಲಿ ಶಿವಮೊಗ್ಗದಲ್ಲಿ ನಡೆವ ಗೃಹ ಸಚಿವರ ಕಾರ್ಯಕ್ರಮ ಬಹಿಷ್ಕರಿಸುವುದಾಗಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಎಚ್ಚರಿಸಿವೆ.

ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆಗಳು, ದಿನಾಂಕ 27-2-2023 ರಂದು ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ ನಡೆದದ್ದು, ಅಂದಿನ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳಾದ ತಾವು ಬಂದಿದ್ದೀರಿ.

ಅಂದಿನ ಕಾರ್ಯಕ್ರಮಕ್ಕೆ ಇದ್ದ ಶಿಷ್ಟಾಚಾರಗಳಿಗೆ ಅನುಸಾರವಾಗಿ ಮಾಧ್ಯಮಗಳಿಗೆ ವರದಿ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ರಾಜ್ಯ ಹಾಗೂ ಶಿವಮೊಗ್ಗದ ವಿವಿಧ ಮಾಧ್ಯಮ ಪ್ರತಿನಿಧಿಗಳು ಆಗಮಿಸಿದ್ದರು.

ಅಂದಿನ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದಾವಣಗೆರೆ ಎಸ್ಪಿ ಶ್ರೀ ರಿಷ್ಯಂತ್ ಅವರು,  ಪತ್ರಕರ್ತರಾದ ಹಾಲಸ್ವಾಮಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಕ್ಯಾಮೆರಾ ಕಸಿದುಕೊಂಡು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ.

ಅಪಾರ ಜನಸಂದಣಿಯಲ್ಲಿ ನೂಕು ನುಗ್ಗಲಾಗಿದ್ದನ್ನು ಚಿತ್ರೀಕರಣ ಮಾಡುತ್ತಿದ್ದ ಅವರನ್ನು ಹಿಡಿದು, ಅಪರಾಧಿಯಂತೆ ಪೊಲೀಸ್ ವಾಹನದಲ್ಲಿ ಕೂಡಿಹಾಕಿದ್ದು, ಮಾತ್ರವಲ್ಲದೆ ಮೊಬೈಲ್‌ನ ವಿಡಿಯೋ ಡಿಲಿಟ್ ಮಾಡಲಾಗಿದೆ. ಈ ಕೃತ್ಯವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸುತ್ತದೆ.

ಪತ್ರಕರ್ತರಿಗೆ ಮುಕ್ತ ಹಾಗೂ ನ್ಯಾಯ ಸಮ್ಮತ ಕಾರ್ಯನಿರ್ವಹಿಸಲು ಅಡ್ಡಿ ಮಾಡಿರುವ ದಾವಣಗೆರೆ ಎಸ್ಪಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರು ಕೂಡಲೇ ಪತ್ರಕರ್ತ ಸಮೂಹದ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತಿದ್ದೇವೆ.

ಸಿ.ಬಿ.ರಿಷ್ಯಂತ್ ಅವರು ಆದ ಪ್ರಮಾದಕ್ಕೆ ಕ್ಷಮೆ ಕೋರದಿದ್ದಲ್ಲಿ ಮುಂದಿನ ದಿನಗಳಲ್ಲಿ ಗೃಹ ಸಚಿವರು ಭಾಗವಹಿಸುವ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಸಿಎಂ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಎಡಿಸಿ ಡಾ.ಲೋಕೇಶ್ ಅವರು, ಮುಖ್ಯಮಂತ್ರಿಗಳಿಗೆ ಇದನ್ನು ಕಳಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಎಸ್. ಯಡಗೆರೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಹಿರಿಪತ್ರಕರ್ತರಾದ ಶೃಂಗೇಶ್, ವೈ.ಕೆ.ಸೂರ್ಯನಾರಾಯಣ, ಆರಗ ರವಿ, ಹೊನ್ನಾಳಿ ಚಂದ್ರಶೇಖರ್, ಶಿ.ಜು.ಪಾಷಾ, ಪಿ.ಜೇಸುದಾಸ್, ವಿ.ಸಿ.ಪ್ರಸನ್ನ, ದತ್ತಾತ್ರೇಯ ಹೆಗಡೆ, ಮೋಹನಕೃಷ್ಣ, ಕಿರಣ್ ಕಂಕಾರಿ, ಭರತ್, ಲಿಯಾಕತ್, ನಾಗರಾಜ್ ಡಿ. ಸಾವಂತ್, ಶಿವಮೊಗ್ಗ ನಾಗರಾಜ್ ಮತ್ತಿತತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ