NEWSನಮ್ಮರಾಜ್ಯರಾಜಕೀಯ

ಪುನಾರಚನೆಗಾಗಿ ರಾಜ್ಯ, ಜಿಲ್ಲಾ ಘಟಕಗಳ ವಿಸರ್ಜಿಸಿದ ಎಎಪಿ: ಶೀಘ್ರವೇ ಹೊಸ ಸಂಘಟನಾ ತಂಡ ಘೋಷಣೆ: ದಿಲೀಪ್‌ ಪಾಂಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜುಗೊಳ್ಳಲು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದ್ದು, ಸದ್ಯದಲ್ಲೇ ಕ್ರಿಯಾಶೀಲ ತಂಡವನ್ನು ರಚಿಸಲಾಗುತ್ತದೆ ಎಂದು ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ದೆಹಲಿ ಶಾಸಕ ದಿಲೀಪ್‌ ಪಾಂಡೆ ತಿಳಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ದಿಲೀಪ್‌ ಪಾಂಡೆ, “ಆಮ್‌ ಆದ್ಮಿ ಪಾರ್ಟಿಯು ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಮರೋಪಾದಿಯಲ್ಲಿ ಸಿದ್ಧಗೊಳ್ಳಲಿದೆ. ಈವರೆಗಿದ್ದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ತಂಡವನ್ನು ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನು ಗ್ರಾಮ ಸಂಪರ್ಕ ಅಭಿಯಾನ ಎಂಬ ರಾಜ್ಯಾವ್ಯಾಪಿ ಅಭಿಯಾನದ ಮೂಲಕ ಆಮ್‌ ಆದ್ಮಿ ಪಾರ್ಟಿಯು ಕಳೆದ ಐದು ತಿಂಗಳಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸಿಕೊಂಡಿದೆ. ಈ ಅಭಿಯಾನದಲ್ಲಿ ಕರ್ನಾಟಕದ ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರ ಜೊತೆ ಆಮ್‌ ಆದ್ಮಿ ಪಾರ್ಟಿ ಸಂಪರ್ಕ ಸಾಧಿಸಿದೆ ಎಂದು ಹೇಳಿದರು.

ಈಗ ಬದಲಾವಣೆ ತರುವಂತಹ ಹೊಸ ತಂಡವನ್ನು ರೂಪಿಸಲಾಗುತ್ತಿದೆ. ಬದಲಾವಣೆ ತರಬಲ್ಲ ಈ ಸಾಮಾನ್ಯ ಪುರುಷರು ಹಾಗೂ ಮಹಿಳೆಯರೊಂದಿಗೆ ಕೈಜೋಡಿಸುವುದರಿಂದ ಪಕ್ಷವು ಚುನಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸಲಿದೆ ಎಂದು ದೃಢವಾಗಿ ನಂಬಿದ್ದೇವೆ. ಬಿಜೆಪಿಯ ಭ್ರಷ್ಟ ಹಾಗೂ ಅಸಮರ್ಥ ಸರ್ಕಾರವನ್ನು ನಾವು ಮಣಿಸಲಿದ್ದೇವೆ ಎಂಬ ವಿಶ್ವಾಸವಿದೆ ಎಂದರು.

“ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ತಂಡವು ಮುಂಬರುವ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಲಿದೆ. ಇದಕ್ಕೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ ಸಂದೀಪ್‌ ಪಾಠಕ್‌ ಅವರ ಸಮರ್ಥ ಮಾರ್ಗದರ್ಶನ ಇರಲಿದೆ.

ಎಎಪಿ ರಾಷ್ಟ್ರೀಯ ಪಕ್ಷವಾದ ಬಳಿಕ, ರಾಜ್ಯವನ್ನು ಅಭಿವೃದ್ಧಿಯಲ್ಲಿ ನಂಬರ್‌ ಒನ್‌ ಮಾಡಲು ಜನರು ಆಮ್‌ ಆದ್ಮಿ ಪಾರ್ಟಿಯನ್ನು ಭರವಸೆಯಿಂದ ನೋಡುತ್ತಿದ್ದಾರೆ. ಆದ್ದರಿಂದ ನಾವು ಒಳ್ಳೆಯ ಉದ್ದೇಶ ಹೊಂದಿದ ವ್ಯಕ್ತಿಗಳು, ಹೋರಾಟಗಾರರು, ರಾಜಕಾರಣಿಗಳು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿ ಈ ಕನಸನ್ನು ನನಸಾಗಿಸುವುದಾದರೆ ಸ್ವಾಗತಿಸುತ್ತೇವೆ. ದಶಕಗಳಿಂದ ಸಾಂಪ್ರದಾಯಿಕ ಪಕ್ಷಗಳು ಕರ್ನಾಟಕದ ಜನತೆಯ ಅರ್ಹತೆಗೆ ತಕ್ಕಂತಹದ್ದು ಸಿಗದಂತೆ ಮಾಡಿದ್ದಾರೆ ಎಂದು ದಿಲೀಪ್‌ ಪಾಂಡೆ ಹೇಳಿದರು.

ಕಳೆದ ಐದು ತಿಂಗಳಲ್ಲಿ ನಡೆದ ಸಂಘಟನೆ ಬಲಪಡಿಸುವ ಪ್ರಕ್ರಿಯೆಯಿಂದಾಗಿ ಆಮ್‌ ಆದ್ಮಿ ಪಾರ್ಟಿಯು ಎಲ್ಲ ಜಿಲ್ಲೆಗಳು ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಭದ್ರವಾದ ಅಸ್ತಿತ್ವ ಹೊಂದಿದೆ. ಮುಂದಿನ ಎರಡು ವಾರಗಳಲ್ಲಿ ನಾವಿದನ್ನು ಗ್ರಾಮೀಣ ಭಾಗಕ್ಕೆ ತೆಗೆದುಕೊಂಡು ಹೋಗುತ್ತೇವೆ.

ನಿನ್ನೆ ಬೆಂಗಳೂರಿನಲ್ಲಿ ನಡೆದ ವಿಧಾನಸಭಾ ಸ್ಪರ್ಧಾಕಾಂಕ್ಷಿಗಳ ಸಭೆಯಲ್ಲಿ, 224 ಕ್ಷೇತ್ರಗಳಿಗೆ ಸಾವಿರ ಆಕಾಂಕ್ಷಿಗಳು ಚರ್ಚೆ ಹಾಗೂ ತರಬೇತಿಯಲ್ಲಿ ಭಾಗವಹಿಸಿದ್ದರು. ಅಮೂಲಾಗ್ರ ಬದಲಾವಣೆಗೆ ಕರ್ನಾಟಕ ಸಿದ್ಧವಾಗುತ್ತಿದೆ ಎಂಬುದರ ಸಂಕೇತವಿದು” ಎಂದು ದಿಲೀಪ್‌ ಪಾಂಡೆ ಹೇಳಿದರು.

ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ.ಸದಂ ಮತ್ತಿತರರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ