NEWSಉದ್ಯೋಗನಮ್ಮರಾಜ್ಯ

ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳು ಖಾಲಿ: ಸಂಬಳ ₹50 ಸಾವಿರದಿಂದ ₹1.4 ಲಕ್ಷ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ( BMRCL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದೇ ಫ್ರಬ್ರವರಿ 16ರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು ಮಾರ್ಚ್‌ 14ರವರೆಗೂ ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು ನಮ್ಮ ಮೆಟ್ರೋ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2023ರ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅಧಿಸೂಚನೆ ಹೊರಡಿಸಿದ್ದು, ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ವಿವರವನ್ನು ನೀಡಲಾಗಿದೆ.

MRCL ನೇಮಕಾತಿ ಅಧಿಸೂಚನೆಯ ಪ್ರಕಾರ, ಎಇ, ಇನ್‌ಸ್ಪೆಕ್ಟರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ಚೀಫ್ ಇಂಜಿನಿಯರ್ ಹುದ್ದೆಗಳು ಹೀಗೆ ಒಟ್ಟು 10 ಖಾಲಿ ಹುದ್ದೆಗಳಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,40,000 ರೂ ವೆರೆಗೂ ವೇತನ ದೊರೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈ‌ನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 14, ಕೊನೆಯ ದಿನವಾಗಿದೆ. ಬೆಂಗಳೂರು ಮೆಟ್ರೋ ನಿಗಮದ ಅಧಿಕೃತ ವೆಬ್​ಸೈಟ್‌  ​https://kannada.bmrc.co.in ಗೂ ಭೇಟಿ ನೀಡುವ ಮೂಲಕವೂ ಅರ್ಜಿ ಸಲ್ಲಿಸಬಹುದು.

ಒಟ್ಟು 10 ಹುದ್ದೆಗಳ ಮಾಹಿತಿ ಇಂತಿದೆ
ಅಗ್ನಿಶಾಮಕ ನಿರೀಕ್ಷಕ 4 ಹುದ್ದೆಗಳು
ಡೈ. ಮುಖ್ಯ ಇಂಜಿನಿಯರ್ (ಸುರಕ್ಷತೆ) 1 ಹುದ್ದೆಗಳು
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಸುರಕ್ಷತೆ ಮತ್ತು ಆರೋಗ್ಯ) 2 ಹುದ್ದೆಗಳು
ಸಹಾಯಕ ಇಂಜಿನಿಯರ್ (ಸುರಕ್ಷತೆ ಮತ್ತು ಆರೋಗ್ಯ) 3 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ B.E, B.Tech, ಡಿಪ್ಲೊಮಾ ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷದೊಳಗೆ ಇರಬೇಕು.

ಆಯ್ಕೆ ಪ್ರಕ್ರಿಯೆ: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಮಾಸಿಕ 50,000 ದಿಂದ 140000 ವರೆಗೂ ವೇತನ ದೊರೆಯಲಿದೆ.

ಫೈಯರ್ ಇನ್ಸ್​ಪೆಕ್ಟರ್‌ಗೆ ಅರ್ಜಿ ಸಲ್ಲಿಸಲು – ಇಲ್ಲಿ ಕ್ಲಿಕ್ ಮಾಡಿ

ಡೆಪ್ಯುಟಿ ಚೀಫ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್‌ಗೆ ಅರ್ಜಿ ಸಲ್ಲಿಸಲು- ಇಲ್ಲಿ ಕ್ಲಿಕ್ ಮಾಡಿ

ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು:
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ
ಬೆಂಗಳೂರು – 560027 ಈ ವಿಳಾಸಕ್ಕೆ ಪೋಸ್ಟ್‌ ಮುಖಾಂತರವೂ ಅರ್ಜಿ ಸಲ್ಲಿಸಬಹುದು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ