ನಮ್ಮಜಿಲ್ಲೆ

ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿ: ಸಂಸದ ಶ್ರೀನಿವಾಸಪ್ರಸಾದ್    

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಇರುವ ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಬಹು ಆಯಾಮಗಳ ಕಾರ್ಯಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾದ ರೇಣುಕಾಸಿಂಗ್ ಸರೂಠ ತಿಳಿಸಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಚಾಮರಾಜನಗರ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಚಾಮರಾಜನಗರ ಜಿಲ್ಲೆಯ ಬುಡಕಟ್ಟು ಜನರ ಜೀವನ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಸ್ಮಾರ್ಟ್ ವಿಲೇಜ್ ಯೋಜನೆಯಡಿ ಒದಗಿಸಬಹುದಾದ ಸೋಲಾರ್ ಪವರ್ ಪ್ಲಾಂಟ್ ಕುರಿತು ಕೇಳಲಾದ ಚುಕ್ಕೆ ರಹಿತ ಪ್ರಶ್ನೆಗೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರು ಉತ್ತರಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಕಾಡಂಚಿನ ಹಾಗೂ ದುರ್ಗಮ ಅರಣ್ಯ ಪ್ರದೇಶಗಳು, ಸಂಪರ್ಕ ಸಾಧನ ಸೌಲಭ್ಯಗಳು ಇಲ್ಲದ ಬುಡಕಟ್ಟು ಪ್ರದೇಶಗಳಲ್ಲಿ ಶಿಕ್ಷಣ, ವಿದ್ಯುತ್, ನೀರು ಪೂರೈಕೆ, ವಿದ್ಯುತ್ ಇಲ್ಲದ ಕಡೆ ಸೋಲಾರ್ ಪವರ್ ಪ್ಲಂಟ್ ಮೂಲಕ ಸ್ಮಾರ್ಟ್‍ವಿಲೇಜ್ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸುವುದು ಮತ್ತು ಇನ್ನಿತರ ಯಾವ ಕ್ರಮಗಳಿಂದ ಬುಡಕಟ್ಟು ಜನರ ಸೌಕರ್ಯಗಳನ್ನು ಸುಧಾರಿಸಬಹುದು ಎಂಬ ಪ್ರಶ್ನೆಗೆ ಬುಡಕಟ್ಟು ವ್ಯವಹಾರಗಳ ಸಚಿವರು ವಿವರವಾಗಿ ಉತ್ತರಿಸಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಮಂಗಲ ಗ್ರಾಮದಲ್ಲಿ 2010-11ನೇ ಸಾಲಿನಲ್ಲಿ ಒಂದು ಏಕಲವ್ಯ ಮಾದರಿ ವಸತಿ ಶಾಲೆಯನ್ನು ಗುಣಮಟ್ಟದ ಮಾಧ್ಯಮಿಕ ಮತ್ತು ಉನ್ನತಮಟ್ಟದ ಶಿಕ್ಷಣವನ್ನು ದುರ್ಗಮ ಅರಣ್ಯ ಪ್ರದೇಶಗಳ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದ ತೆರೆಯಲಾಗಿದೆ. ಉನ್ನತ ಮತ್ತು ವೃತ್ತಿಪರ ಶಿಕ್ಷಣ ಕೋರ್ಸ್‍ಗಳನ್ನು ಪಡೆದು ಸರ್ಕಾರಿ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಉದ್ಯೋಗ ಅವಕಾಶ ಪಡೆಯಲು ಅನುವು ಮಾಡಿಕೊಡುವುದು ಶಾಲೆಯ ಉದ್ದೇಶವಾಗಿದೆ. ಈ ವಸತಿ ಶಾಲೆಗೆ 2019-20ನೇ ಸಾಲಿನಲ್ಲಿ ಒಟ್ಟು 275 ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ಬುಡಕಟ್ಟು ವ್ಯವಹಾರಗಳ ಸಚಿವರು ತಿಳಿಸಿದ್ದಾರೆ.

ಬುಡಕಟ್ಟು ಜನರಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯಸರ್ಕಾರದ ವಿವಿಧ ಯೋಜನೆ, ಕಾರ್ಯಕ್ರಮಗಳ ಮೂಲಕ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಇತರೆ ಸೌಲಭ್ಯಗಳನ್ನು ಬುಡಕಟ್ಟು ಮಂತ್ರಾಲಯದ ಮೂಲಕ ಒದಗಿಸಲಾಗುತ್ತಿದೆ. ಈ ಮೂಲಕ ಬುಡಕಟ್ಟು ಜನರ ತೀವ್ರ ಕೊರತೆಗಳನ್ನು ನೀಗಿಸಲು ಕ್ರಮ ವಹಿಸಲಾಗುತ್ತಿದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸ್ವೀಕರಿಸಲಾದ ಪ್ರಸ್ತಾವನೆಗಳನ್ನು ಪರಿಗಣಿಸಿ ಬೇಡಿಕೆಗೆ ಅನುಗುಣವಾಗಿ ವಿವಿಧ ಯೋಜನೆ, ಕಾರ್ಯಕ್ರಮಗಳ ಅಡಿಯಲ್ಲಿ ಅನುದಾನ ಒದಗಿಸಲಾಗುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳರಾಜ್ಯ ಸಚಿವರಾದ ರೇಣುಕಾಸಿಂಗ್ ಸರೂಠ ಅವರು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ