NEWSನಮ್ಮಜಿಲ್ಲೆಸಂಸ್ಕೃತಿ

ಬೀಡನಹಳ್ಳಿ: ಅದ್ದೂರಿಯಾಗಿ ನೆರವೇರಿದ ನಾಡ ದೇವಿ ತಾಯಿ ಚಾಮುಂಡೇಶ್ವರಿ ಹಬ್ಬ

ವಿಜಯಪಥ ಸಮಗ್ರ ಸುದ್ದಿ

ಬೀಡನಹಳ್ಳಿ: ಪ್ರತಿ ವರ್ಷದಂತೆ ಈ ವರ್ಷವು (ಅ.20) ಶುಕ್ರವಾರವಾದ ಇಂದು ತಾಯಿ ಚಾಮುಂಡೇಶ್ವರಿ ಹಬ್ಬ ಬೀಡನಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿತು. ಕಳೆದ ವರ್ಷ ಸೆ.30ರಂದು ಹಬ್ಬ ಆಚರಣೆ ಮಾಡಲಾಗಿತ್ತು. ಆದರೆ, ಈ ಬಾರಿ ಒಂದು ವರ್ಷ 20ದಿನಗಳ ಬಳಿಕ ಹಬ್ಬ ಆಚರಣೆ ಮಾಡಲಾಗಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದಲ್ಲಿ ತಲಾತಲಾಂತರದಿಂದಲೂ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವು ಹಬ್ಬ ಆಚರಣೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.

ಪೂಜೆಯೊಂದಿಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಬೇಕೆಂದು ಹರಕೆ ಹೊತ್ತವರಿಗೆ ಬಾಯಿಬೀಗ ಚುಚ್ಚಲು ಸಜ್ಜಾಗುತ್ತಿದ್ದಂತೆ, ಕಳೆದ ಬಾರಿ ವರಣನ ಸಿಂಚನವಾಗಿತ್ತು. ಆದರೆ ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿದ್ದು ಸುಡು ಬಿಸಿಲಲ್ಲೇ ಜರುಗಿತು.

ಹಬ್ಬದ ಅಂಗವಾಗಿ ಗ್ರಾಮದ ಹೆಂಗಳೆಯರು ತಂಬಿಟ್ಟಿನ ಆರತಿಯೊಂದಿಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ನೆರವೇರಿಸಿದರು. ಈ ವೇಳೆ ಬಂಧು ಬಳಗ, ಸ್ನೇಹಿತರು ಸೇರಿದಂತೆ ಆಪ್ತರನ್ನು ಹಬ್ಬಕ್ಕೆ ಆಹ್ವಾನಿಸಿ ಹಬ್ಬದಡಿಗೆ ಮಾಡಿ ಬಡಿಸಿದರು.

ಶುಕ್ರವಾರ ಮಧ್ಯಾಹ್ನನದ ನಂತರ ಗ್ರಾಮದ ಹೆಂಗಳೆಯರು ತಂಬಿಟ್ಟಿನಾರತಿ ಜತೆಗೆ ಹಣ್ಣು ಕಾಯಿ ಧೂಪ, ಸಮೇತ ಮಾರಮ್ಮ, ಮುತ್ತತ್ತಿರಾಯನ ಪೂಜೆ ಹೊತ್ತು ಬೀಡನಹಳ್ಳಿ ಗ್ರಾಮದ ರಾಜ ಬೀದಿಗಳ ಮೂಲಕ ಮೆರವಣಿಗೆ ಮಾಡಿ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಆಗಮಿಸಿ ಪೂಜೆ ನೆರವೇರಿಸಲಾಯಿತು.

ಇದಕ್ಕೂ ಮುನ್ನಾ ಬನ್ನೂರು ಹೆಗ್ಗೆರೆಯಿಂದ ಮತ್ತೆ ಹೂ ಹೊಂಬಾಳೆಯಾಗಿ ಬರುವ ಬೀಡನಹಳ್ಳಿ ಮಾರಮ್ಮ ಮತ್ತು ಮುತ್ತತ್ತಿರಾಯನ ಪೂಜೆಗಳನ್ನು ಹೊತ್ತ ದೇವರ ಗುಡ್ಡಪ್ಪಂದಿರು ಪೂಜೆಯೊಂದಿಗೆ ಚಾಮುಂಡಿ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ತೀರ್ಥ ಪ್ರೊಕ್ಷಣೆ ಮಾಡಿದ ಬಳಿಕ ದೇವಿಗೆ ಪೂಜೆ ತಂದಿದ್ದ ಹಣ್ಣು, ಕಾಯಿಯನ್ನು ಒಡೆಯುವ ಮೂಲಕ ನೆರವೇರಿಸಲಾಯಿತು.

ಪ್ರತಿ ವರ್ಷ ಗ್ರಾಮದ ಯುವಕರು ನಾಡಿನ ದೇವತೆ ಹಬ್ಬದಂದು ಮನರಂಜನೆ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದು, ಅದರಂತೆ ಇಂದು ರತ್ನ ಮಾಂಗಲ್ಯ ಎಂಬ ಸಮಾಜಿಕ ನಾಟಕವನ್ನು ಆಯೋಜನೆ ಮಾಡಲಾಗಿದ್ದು ಸಂಭ್ರದಲ್ಲಿ ಮಿಂದೆಳಲು ಸಜ್ಜಾಗಿದ್ದಾರೆ.

ಈ ಎಲ್ಲದರ ನಡುವೆ ಗುರುವಾರದಿಂದಲೇ ಗ್ರಾಮದ ರಾಜ ಬೀದಿಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದ್ದು, ದೇವಸ್ಥಾನ ಮತ್ತು ರಾಜ ಬೀದಿಗಳಲ್ಲಿ ವಿದ್ಯುತ್‌ ದೀಪಗಳು ಜಗಮಗಿಸಿದವು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ