NEWSಸಂಸ್ಕೃತಿ

ಬಸವಣ್ಣನವರ ತತ್ವಾದರ್ಶವನ್ನು ಎಲ್ಲರೂ ಪಾಲಿಸೋಣ

ಹಾಸನ ಜಿಲ್ಲಾ ಪಂಚಾಯಿತಿ ಜಿಲ್ಲಾಧ್ಯಕ್ಷೆ ಶ್ವೇತಾ ದೇವರಾಜ್ ಕರೆ

ವಿಜಯಪಥ ಸಮಗ್ರ ಸುದ್ದಿ

ಹಾಸನ:  ಜಗ ಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿ ವ್ಯವಸ್ಥೆ ಹಾಗೂ ಸಾಮಾಜಿಕ ಪಿಡುಗುಗಳನ್ನು ತೊಡೆದು ಹಾಕಲು ಶ್ರಮಿಸಿದ ಮಹಾ ದಾರ್ಶನಿಕರು ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತತವಾಗಿದ್ದು ಎಲ್ಲರೂ ಪಾಲಿಸೋಣ  ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ತಿಳಿಸಿದ್ದಾರೆ.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಏರ್ಪಡಿಸಿದ್ದ ಜಗ ಜ್ಯೋತಿ ಬಸವಣ್ಣನವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರು ತಮ್ಮ ಚಿಂತನೆ, ವಚನ ಹಾಗೂ ಸಾಹಿತ್ಯಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿ ಅನೇಕ ಮೂಡನಂಬಿಕೆಗಳನ್ನು ಹೋಗಲಾಡಿಸಿದರು ಎಂದು ಹೇಳಿದರು.

12ನೇ ಶತಮಾನದಲ್ಲಿದ್ದ. ಜಾತಿ ವ್ಯವಸ್ಥೆ, ಲಿಂಗ ತಾರತಮ್ಯದ ವಿರುದ್ಧ ಹೋರಾಡಿ ಎಲ್ಲರೂ ಸಮಾನರು ಎಂದು ಪ್ರತಿಪಾದಿಸಿ ಅದನ್ನು ಆಚರಣೆಗೆ ತಂದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಹೇಳಿದರು.

 ಜಿಲ್ಲಾಧಿಕಾರಿ ಆರ್.ಗಿರೀಶ್ ಬಸವಣ್ಣ ಜಾತಿ ಪದ್ದತಿ, ಮೂಢ ನಂಬಿಕೆಗಳ ವಿರುದ್ಧ ಹೋರಾಡುವ ಜೊತೆಗೆ  ಅನುಭವ ಮಂಟಪವನ್ನು ಸ್ಥಾಪಿಸಿ ನೂರಾರು ಶಿವಶರಣರನ್ನು ರೂಪಿಸಿದರು, ಇದರಿಂದ ಹೊಸ ಸಾಮಾಜಿಕ ವ್ಯವಸ್ಥೆ ಪ್ರಾರಂಭವಾಯಿತು ಎಂದರು.

ಶತಶತಮಾನಗಳ ನಂತರವೂ ಬಸವಣ್ಣ ನವರನ್ನು ಸ್ಮರಿಸಲಾಗಿತ್ತಿದೆ. ಅದಕ್ಕೆ ಅವರ ಚಿಂತನೆ, ಜೀವನಾದರ್ಶಗಳಲ್ಲಿದ್ದ ಗಟ್ಟಿತನ ಜನಪರ ಕಾಳಜಿ ಹಾಗೂ ಸರ್ವಕಾಲಕ್ಕೂ ಪ್ರಸ್ತುತ ವಾಗಿರುವುದೇ ಕಾರಣ ಎಂದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಮಾತನಾಡಿ ಮಹಾನ್ ಮಾನವತವಾದಿ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಜಗತ್ತಿಗೆ ಸಾರಿದವರು ಹಾಗೂ ಜಾತಿ ಪದ್ದತಿಯನ್ನು ಹೋಗಲಾಡಿಸಲು ಹೊರಾಡಿದವರು ಹಾಗಾಗಿ ಎಲ್ಲರೂ ಅವರ ದಾರಿಯಲ್ಲಿ ನಡೆಯೋಣ ಎಂದರು.

 ತಾಲೂಕು ಪಂಚಾಯ್ತಿ ಅಧ್ಯಕ್ಷರಾದ ನಿಂಗೇಗೌಡ ಬಸವಣ್ಣನವರ ವಚನಗಳನ್ನು ಹೇಳುತ್ತಾ ಮೂಡನಂಬಿಕೆ, ಜಾತಿ ಪದ್ದತಿ, ವರ್ಣಬೇದ ಮತ್ತು ವರ್ಗಬೇದಗಳ ವಿರುದ್ಧ ಹೋರಾಡಿ ನಾವೆಲ್ಲರೂ ಒಂದೇ, ಎಲ್ಲರು ನಮ್ಮವರೆ ಎಂದು ಜಗತ್ತಿಗೆ ಸಾರಿದವರು ಎಂದರು.

 ವೀರ ಶೈವ ಸಮಾಜದ ಪ್ರಮುಖರಾದ ಜಿಲ್ಲಾ ಪತ್ರಕರ್ತಸಂಘದ ಅಧ್ಯಕ್ಷರಾದ ಉದಯ್ ಕುಮಾರ್, ವೀರಶೈವ ಸಂಘದ ಕಾರ್ಯದರ್ಶಿ ಭುವನಾಕ್ಷ, ಬಸವ ಕೇಂದ್ರದ ಕಾರ್ಯದರ್ಶಿ ಸೋಮಶೇಖರ್ ಅವರು ಮಾತನಾಡಿ ಬಸವಣ್ಣನವರು ಎಲ್ಲಾ ಕಾಲಕ್ಕೂ ದಾರಿ ದೀಪವಾಗಿದ್ದಾರೆ, ಅವರ ಚಿಂತನೆಯನ್ನು ಎಲ್ಲರೂ ಅಳವಡಿಸಿಕೊಂಡರೆ ಸಮಾಜ ಉನ್ನತ ಹಾದಿಯಲ್ಲೂ ಸಾಗಲು ಸಾಧ್ಯ ಎಂದರು.

 ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶವಲಿಂಗಪ್ಪ ಕುಂಬಾರ, ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಂ. ಶಿವಣ್ಣ, ಸಮಾಜದ ಮುಖಂಡರು ಹಾಗೂ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ