VIJAYAPATHA.IN > ವಿಜಯಪಥ > NEWS > Crime > ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ
ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ
DevaMay 15, 2024
ಬನ್ನೂರು: ಹೋಬಳಿಯ ಬಸವನಹಳ್ಳಿ ಗ್ರಾಮದ ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕರಾದ ಚಿಕ್ಕಮಾಯಿಗೌಡ ಅವರ ಪತ್ನಿ ಸಿದ್ದಮ್ಮ (78) ಅವರು ಇಂದು ಮುಂಜಾನೆ ನಿಧನರಾದರು.
ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬಸವನಹಳ್ಳಿಯ ತಮ್ಮ ನಿವಾಸದಲ್ಲಿ ಬುಧವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
78 ವರ್ಷ ವಯಸ್ಸಿನ ಸಿದ್ದಮ್ಮ ಅವರಿಗೆ ತಡರಾತ್ರಿ ಲೋಬಿಪಿಯಾಗಿದೆ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವಷ್ಟರಲ್ಲೇ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಪತಿ ಚಿಕ್ಕಮಾಯಿಗೌಡ, ನಾಲ್ವರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು (ಮೇ 15) ಮಧ್ಯಾಹ್ನ ಬಸವನಹಳ್ಳಿ ಗ್ರಾಮದ ಅವರ ತೋಟದಲ್ಲಿ ನೆರವೇರಿತು.
Related
Deva
Leave a reply