ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಹಿರಿಯ ನಟಿ ಡಾ.ಲೀಲಾವತಿ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಡಾ. ಲೀಲಾವತಿ ಅವರ ಅಂತ್ಯಕ್ರಿಯೆಯನ್ನು ಇಂದು (ಶನಿವಾರ) ಸಂಜೆ ನೆರವೇರಿಸಲಾಯಿತು.
ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಅಗಲಿದ ಹಿರಿಯ ನಟಿಗೆ ಅಂತಿಮ ನಮನ ಸಲ್ಲಿಸಿದರು. ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಮೂರು ಸುತ್ತಿನ ಕುಶಾಲ ತೋಪು ಸಿಡಿಸುವ ಮೂಲಕ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.
![](https://vijayapatha.in/wp-content/uploads/2023/12/9-Dec-Leelavati-No-more-1-300x147.jpg)
ಕರ್ನಾಟಕ ಸರ್ಕಾರದ ಪರವಾಗಿ ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವು ನಾಯಕರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಅನುರಾಧ.ಕೆ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಅರುಂಧತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
![](https://vijayapatha.in/wp-content/uploads/2024/02/QR-Code-VP-1-1-300x62.png)