NEWSಕ್ರೀಡೆದೇಶ-ವಿದೇಶ

ಭಾರತ-ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಪಂದ್ಯದ ನಾಲ್ಕು ಟಿಕೆಟ್‌ ಹಿಂದಿರುಗಿಸಿದ ಪಶ್ಚಿಮ ಬಂಗಾಳದ ಗವರ್ನರ್..!?

ವಿಜಯಪಥ ಸಮಗ್ರ ಸುದ್ದಿ

ಕೋಲ್ಕತಾ: ಕಾಳಸಂತೆಯಲ್ಲಿ ಟಿಕೆಟ್​ಗಳು ಬಾರಿ ಮೊತ್ತಕ್ಕೆ ಮಾರಾಟವಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ವಿಶ್ವಕಪ್​ನ ಅತ್ಯಂತ ಬಲಿಷ್ಠ ತಂಡಗಳಾದ ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ವಿರುದ್ಧದ ಪಂದ್ಯಕ್ಕೆ ಆಗಮಿಸಲು ನೀಡಿದ್ದ ಪಂದ್ಯದ ನಾಲ್ಕು ಟಿಕೆಟ್​ಗಳನ್ನು ಪಶ್ಚಿಮ ಬಂಗಾಳದ ಗವರ್ನರ್ ಸಿ. ವಿ. ಆನಂದ ಬೋಸ್ ಹಿಂದಿರುಗಿಸಿದ್ದಾರೆ.

ಹೌದು! ವಿಶ್ವಕಪ್​ನ ಅತ್ಯಂತ ಬಲಿಷ್ಠ ತಂಡಗಳಾದ ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ವಿರುದ್ಧದ ಪಂದ್ಯವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಇತ್ತ ಕಾತರವಾಗಿದ್ದಾರೆ. ಈ ಪಂದ್ಯ ಇನ್ನೇನು ಕೆಲವೇ ಕ್ಷಣದಲ್ಲಿ ಆರಂಭಗೊಳ್ಳಲಿದೆ. ಆದರೆ ಗವರ್ನರ್ ಸಿ. ವಿ. ಆನಂದ ಬೋಸ್ ಅವರು ತಮಗೆ ನೀಡಿದ ಪಂದ್ಯದ ಟಿಕೆಟ್​ಗಳನ್ನು ಹಿಂದಿರುಗಿಸಿ ಒಂದೊಳ್ಳೆ ಆಲೋಚನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜಭವನದಲ್ಲಿ ಜನತಾ ಕ್ರೀಡಾಂಗಣ: ಕಾಳಸಂತೆಯಲ್ಲಿ ಟಿಕೆಟ್​ಗಳು ಬಾರಿ ಮೊತ್ತಕ್ಕೆ ಮಾರಾಟವಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಗವರ್ನರ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ರಾಜಭವನದಲ್ಲಿ ಜನತಾ ಕ್ರೀಡಾಂಗಣವನ್ನು ತೆರೆದು ಇಲ್ಲಿ ದೊಡ್ಡ ಪರದೆಯೊಂದನ್ನು ಹಾಕಿ ಜನರೊಂದಿಗೆ ಪಂದ್ಯವನ್ನು ವೀಕ್ಷಿಸಲು ನಿರ್ಧರಿಸಿದ್ದಾರೆ. ಈ ವಿಚಾರವನ್ನು ರಾಜಭವನದ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

500 ಮಂದಿಗೆ ಅವಕಾಶ: ಪಶ್ಚಿಮ ಬಂಗಾಳ ಕ್ರಿಕೆಟ್ ಮಂಡಳಿಯು ಗವರ್ನರ್ ಸಿ.ವಿ.ಆನಂದ ಬೋಸ್ ಅವರಿಗೆ ನಾಲ್ಕು ಉಚಿತ ಟಿಕೆಟ್‌ಗಳನ್ನು ಒದಗಿಸಿ ಪಂದ್ಯಕ್ಕೆ ಬರುವಂತೆ ವಿಶೇಷ ಆಹ್ವಾನ ನೀಡಿತ್ತು. ಆದರೆ ಗವರ್ನರ್ ಈ ಟಿಕೆಟ್​ಗಳನ್ನು ಹಿಂದಿರುಗಿಸಿ ರಾಜಭವನದಲ್ಲೇ ಪಂದ್ಯ ನೋಡಲು ನಿರ್ಧರಿಸಿದ್ದಾರೆ. 500 ಜನರಿಗೆ ಪಂದ್ಯ ನೋಡುವ ಅವಕಾಶ ಇರಲಿದೆ. ಭದ್ರತಾ ದೃಷ್ಟಿಯಿಂದಾಗಿ 1 ಗಂಟೆಯ ಒಳಗೆ ಬಂದವರಿಗೆ ಮಾತ್ರ ಪ್ರವೇಶ ಇರಲಿದೆ. ಆ ಬಳಿಕ ಬಂದವರಿಗೆ ಅವಕಾಶ ಇರುವುದಿಲ್ಲ ಎಂದು ರಾಜಭವನದ ಅಧಿಕಾರಿ ತಿಳಿಸಿದ್ದಾರೆ.

ಈ ಪಂದ್ಯ ಟಿಕೆಟ್​ಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿದ ಆರೋದಲ್ಲಿ ನವೆಂಬರ್ 1ರಿಂದ ಈವರೆಗೆ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂದ್ಯಕ್ಕೆ ಮಳೆ ಭೀತಿ: ಈ ಪಂದ್ಯವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಿ ಕಾದು ಕುಳಿತ ಅಭಿಮಾನಿಗಳಿಗೆ ಹವಾಮಾನ ವರದಿ ನಿರಾಸೆಯನ್ನುಂಟುಮಾಡುವ ಸುದ್ದಿಯನ್ನು ನೀಡಿದೆ. ಈ ಪಂದ್ಯಕ್ಕೆ ಮಳೆಯ ಭೀತಿ ಇದೆ ಎಂದು ಮುನ್ಸೂಚನೆ ನೀಡಿದೆ.

ಕೋಲ್ಕೋತಾದಲ್ಲಿ ಭಾನುವಾರ ರಾತ್ರಿಯ ವೇಳೆ ಶೇ. 31ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಒಂದು ಇನಿಂಗ್ಸ್​ ನಡೆದರೂ ಇನ್ನೊಂದು ಇನಿಂಗ್ಸ್​ ನಡೆಯುವುದು ಅನುಮಾನ ಎನ್ನಲಾಗಿದೆ. ಅಲ್ಲದೆ ಇಲ್ಲಿ ಮಳೆ ಬಂದರೆ ಆ ಬಳಿಕ ಮಂಜಿನ ಕಾಟ ತಪ್ಪಿದ್ದಲ್ಲ. ಹೀಗಾಗಿ ಮಳೆ ಬಂದರೆ ಪಂದ್ಯ ರದ್ದಾಗುವುದು ಖಚಿತ.

ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೂ ಉಭಯ ತಂಡಗಳಿಗೆ ಯಾವುದೇ ನಷ್ಟ ಸಂಭವಿಸದು. ಕಾರಣ ಈಗಾಗಲೇ ಇತ್ತಂಡಗಳು ಸೆಮಿಫೈನಲ್ ಪ್ರವೇಶ ಗಿಟ್ಟಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡ ಶನಿವಾರ ಪಾಕಿಸ್ತಾನ ವಿರುದ್ಧ ಕಿವೀಸ್​ ಸೋಲು ಕಂಡ ಕಾರಣದಿಂದ ಸೆಮಿ ಟಿಕೆಟ್​ ಪಡೆಯಿತು.

ಪಿಚ್​ ರಿಪೋರ್ಟ್​: ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ.

ಸಂಭಾವ್ಯ ತಂಡ: ಭಾರತ: ರೋಹಿತ್ ಶರ್ಮಾ​, ಶುಭಮನ್​ ಗಿಲ್​, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್​, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್​ದೀಪ್​ ಯಾದವ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್.

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಸ್ಸಿ ವಾನ್ ಡರ್​ ಡುಸೆನ್, ಐಡೆನ್ ಮಾರ್ಕ್ರಮ್, ಟೆಂಬ ಬವುಮಾ, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್​ಗಿಡಿ, ಜೆರಾಲ್ಡ್ ಕೋಟ್ಜಿ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ