ಮೈಸೂರು: ಈಗಾಗಲೇ ಮೈಸೂರು ಮೃಗಾಲಯಕ್ಕೆ 73.60 ಲಕ್ಷ ರೂ. ದೇಣಿಗೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಶನಿವಾರ ಎರಡನೇ ಬಾರಿಗೆ 45.30 ಲಕ್ಷ ರೂಪಾಯಿ ಚೆಕ್ ನೀಡಿದ್ದು, ಈ ಮೂಲಕ ಒಟ್ಟು 1 ಕೋಟಿ 18 ಲಕ್ಷ 90 ಸಾವಿರ ರೂಪಾಯಿಯನ್ನು ಮೃಗಾಲಯಕ್ಕೆ ಹಸ್ತಾಂತರ ಮಾಡಿದ್ದಾರೆ.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ಮೃಗಾಲಯದ ಸ್ಥಿತಿ-ಗತಿ ಪರಿಶೀಲನೆ ನಡೆಸಲು ಆಹಾರ ಸಚಿವ ಗೋಪಾಲಯ್ಯ ನವರ ಜೊತೆ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದ್ದು, ಈ ವೇಳೆ ತಮ್ಮ ಕ್ಷೇತ್ರದ ಜನರಿಂದ ಸಂಗ್ರಹಿಸಿದ 45.30 ಲಕ್ಷ ರೂ. ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರ ಮಾಡಿದರು.
ಈ ವೇಳೆ ಮಾತನಾಡಿದ ಅವರು, ಮೈಸೂರು ಮೃಗಾಲಯದ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾನು ಎಲ್ಲ ಸಚಿವರು, ವಿಧಾನಪರಿಷತ್ ಸದಸ್ಯರು ಹಾಗೂ ಶಾಸಕರು ಸೇರಿದಂತೆ ಸಮಾಜದ ಗಣ್ಯರು ಮತ್ತು ನಾಗರಿಕರಿಗೆ ಮನವಿ ಮಾಡಿ ಆರ್ಥಿಕ ಸಹಾಯ ಮಾಡುವಂತೆ ಈಗಾಗಲೇ ಕೋರಿದ್ದೇನೆ. ಅಲ್ಲದೆ, ನನ್ನ ಕ್ಷೇತ್ರದಿಂದ ಈಗ 2ನೇ ಬಾರಿ 45.30 ಲಕ್ಷ ರೂಪಾಯಿಯನ್ನು ಸಂಗ್ರಹಿಸಿ ಮೃಗಾಲಯಕ್ಕೆ ನೀಡುತ್ತಿದ್ದೇನೆ ಎಂದು ತಿಳಿಸಿದರು.
8 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಗೋಪಾಲಯ್ಯ
ಆಹಾರ ಸಚಿವ ಕೆ.ಗೋಪಾಲಯ್ಯ ವೈಯಕ್ತಿಕವಾಗಿ ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣಿಗೆ 8 ಲಕ್ಷ ರೂ. ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ನೀಡಿದರು.
ಮೈಸೂರು ಜಯಚಾಮರಾಜೇಂದ್ರ ಮೃಗಾಲಯ ಪರಿಶೀಲನೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರೊಡನೆ ಭೇಟಿ ನೀಡಿದ ಸಚಿವ ಗೋಪಾಲಯ್ಯ ಅವರು, ಮೃಗಾಲಯವನ್ನು ಪರಿಶೀಲಿಸಿ ಅಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಬಳಿಕ ಅವರು 8 ಲಕ್ಷ ರೂಪಾಯಿ ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ದೇಣಿಗೆಯಾಗಿ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಮೂಲಕ ಹಸ್ತಾಂತರಿಸಿದರು.