ಶಿವಮೊಗ್ಗ: ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ಬುಧವಾರ ಜ್ವರ ಕಾಣಿಕೊಂಡ ಬಳಿಕ ಆರೋಗ್ಯದಲ್ಲಿ ಏರುಪೇರು ಆಗಿದೆ. ಜ್ವರ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ವರದಿಗಳ ಪ್ರಕಾರ ತೀವ್ರ ಜ್ವರ ಮತ್ತು ಸುಸ್ತಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಹಿನ್ನೆಲೆಯಲ್ಲಿ ಅವರ ಪುತ್ರಿ ಡಾ.ರಾಜನಂದಿನಿ ಶಿವಮೊಗ್ಗಕ್ಕೆ ಕರೆದುಕೊಂಡು ಬಂದಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. 93 ವರ್ಷದ ಕಾಗೋಡು ತಿಮ್ಮಪ್ಪ ಅವರು ಈ ಹಿಂದೆ ವಿಧಾನಸಭಾ ಅಧ್ಯಕರು, ಕಂದಾಯ, ಆರೋಗ್ಯ, ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)