NEWSನಮ್ಮಜಿಲ್ಲೆಸಂಸ್ಕೃತಿ

ಮೈಸೂರು ದಸರಾ ಮಹೋತ್ಸವ ಹಿನ್ನೆಲೆ: ಶರನ್ನವರಾತ್ರಿಗೆ ವೈಭವಯುತ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಸ್ವರ್ಣ ನೃಸಿಂಹ ದತ್ತ ಸಾಯಿ ಪೀಠಿಕ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ 9 ದಿನಗಳ ಶರನ್ನವರಾತ್ರಿ ಪೂಜಾ ಮಹೋತ್ಸವ ಮೈಸೂರು ನಗರದ ಜಯನಗರದ ಶ್ರೀರಾಮ ಮಂದಿರದಲ್ಲಿ‌ ಅತ್ಯಂತ ಶ್ರದ್ಧಾ-ಭಕ್ತಿಯಿಂದ ವೈಭವಯುತವಾಗಿ ಚಾಲನೆಗೊಂಡಿತು.

ಶ್ರೀ ವೇಂಕಟಾಚಲ ಅವಧೂತ ಗುರು ಮಹಾರಾಜರ ಆಶೀರ್ವಾದ ಮತ್ತು ಶ್ರೀ ಅರ್ಜುನ ಅವಧೂತರ ಉಪಸ್ಥಿತಿಯಲ್ಲಿ ಹೋಮ-ಹವನಗಳ ಮೂಲಕ ಆರಂಭಗೊಂಡ ಕಾರ್ಯಕ್ರಮದಲ್ಲಿ ಅಪಾರ ಭಕ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡು ಪುನಿತರಾದರು.

ಬೆಳಗ್ಗೆ ಶ್ರೀ ದುರ್ಗಾ ಸಪ್ತಶತಿ ಪಾರಾಯಣ ಮತ್ತು ಹೋಮ ನಡೆಯಿತು. ಈ ವೇಳೆ ಶ್ರೀ ಅರ್ಜುನ ಅವಧೂತರು ಲೋಕ ಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.ಮೊದಲ ದಿನ ಬೆಳಗ್ಗೆ ಗಣಪತಿ ಹೋಮ ಮತ್ತು ನವಗ್ರಹ ಹೋಮ ನಡೆಯಿತು. ಎರಡನೇ ದಿನವಾದ ಸೋಮವಾರ ರುದ್ರ ಹೋಮ ಮತ್ತು ಮೂರನೇ ದಿನವಾದ ಮಂಗಳವಾರ ಸುಬ್ರಹ್ಮಣ್ಯ ಹೋಮ ನಡೆಯಿತು. ಋತ್ವಿಕರು ಹೋಮ ಮತ್ತು ಹವನವನ್ನು ನೆರವೇರಿಸಿಕೊಟ್ಟರು.

ಇದರೊಂದಿಗೆ ರಾಮ ಮಂದಿರದಲ್ಲಿ ಅಪರೂಪದ ಬೊಂಬೆ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು , ಭಕ್ತರು ಮತ್ತು ಸಾರ್ವಜನಿಕರು ಕಣ್ತುಂಬಿಕೊಂಡು ಭಾವ‌ ಪರವಶವಾದರಲ್ಲದೆ ಟ್ರಸ್ಟ್ ನ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನೆರೆದ ಭಕ್ತರಿಗೆ ಅವಧೂತರು ಆಶೀರ್ವಚನ ನೀಡಿ ಆಶೀರ್ವದಿಸಿದರು.

ಟ್ರಸ್ಟ್ ವತಿಯಿಂದ ಭಕ್ತರಿಗೆ ಮಹಾ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ದಿನ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಪೂಜೆಗಳು ಮತ್ತು ಸಂಜೆ ಗುರುಗಳ ನಿವಾಸದಲ್ಲಿ ಸಂಗೀತ ಕಾರ್ಯಕ್ರಮಗಳು ನಡೆದವು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು