ಮೈಸೂರು: ಮೈಸೂರು ನಗರಪಾಲಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದ 36ನೇ ವಾರ್ಡ್‌ನ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ನ ರಜನಿ ಅಣ್ಣಯ್ಯ ಗೆಲುವು ಸಾಧಿಸುವ ಮೂಲಕ ವಿಜಯದ ನಗೆಬೀರಿದ್ದಾರೆ.
ಒಟ್ಟು 4,113 ಮತಗಳನ್ನು ಪಡೆದ ರಜನಿ ಅವರು 1,997 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿ ಎಸ್.ಲೀಲಾವತಿ ಅವರು 2,116 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
ಈ ವಾರ್ಡ್‌ನಲ್ಲಿ ಪ್ರಾಬಲ್ಯವಿಲ್ಲದ ಬಿಜೆಪಿ ಅಭ್ಯರ್ಥಿ ಶೋಭಾ ಅವರು 601 ಮತಗಳನ್ನಷ್ಟೇ ಪಡೆದಿದ್ದಾರೆ.
ಮೇಯರ್ ಆಗಿದ್ದ ರುಕ್ಮಿಣಿ ಮಾದೇಗೌಡರ ಸದಸ್ಯತ್ವ ರದ್ದಾದ ಕಾರಣ ಈ ವಾರ್ಡ್‌ಗೆ ಉಪ ಚುನಾವಣೆ ನಡೆದಿತ್ತು.
ಈ ಹಿಂದೆ ಗೆದ್ದಿದ ಜೆಡಿಎಸ್ ಈ ಉಪ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿದೆ. ಈ ಮೂಲಕ ಶಾಸಕ ಸಾ.ರಾ.ಮಹೇಶ್ ಸೇರಿದಂತೆ ಜೆಡಿಎಸ್‌ನ ನಾಯಕರಿಗೆ ಭಾರೀ ಮುಖಭಂಗವಾದಂತಾಗಿದೆ.
ಇನ್ನು ಜೆಡಿಎಸ್‌ನ ಬಂಡಾಯ ಶಾಸಕ ಜಿ.ಟಿ.ದೇವೇಗೌಡ ಅವರ ಕೃಪಾಕಟಾಕ್ಷದಿಂದ ಕಾಂಗ್ರೆಸ್ ಅಭ್ಯರ್ಥಿ ರಜನಿ ಗೆಲುವು ಸಾಧಿಸಿದ್ದಾರೆ.
ಈ ಮೂಲಕ ಜೆಡಿಎಸ್‌ನಿಂದ ದೂರಾದ ಬಳಿಕ ತನ್ನ ಶಕ್ತಿ ಏನೆಂಬುದನ್ನು ಶಾಸಕ ಜಿ.ಟಿ.ದೇವೇಗೌಡ ತೋರಿಸಿಕೊಟ್ಟಿದ್ದಾರೆ. ಕಾಂಗ್ರೆಸ್ ಜೆಡಿಎಸ್ ಪೈಪೋಟಿಯ ನಡುವೆ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
![](https://vijayapatha.in/wp-content/uploads/2024/02/QR-Code-VP-1-1-300x62.png)