VIJAYAPATHA.IN > ವಿಜಯಪಥ > NEWS > Crime > ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು
ಕಲಬುರಗಿ: ಮಹಿಳೆಯೊಬ್ಬಳ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಬಳಿಕ ಶವವನ್ನು ಅರ್ಧಂಬರ್ಧ ಸುಟ್ಟುಹಾಕಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಕಲಬುರಗಿ ನಗರದ ಜಗತ್ ಬಡಾವಣೆ ನಿವಾಸಿ ಬಸಮ್ಮ (45) ಎಂಬ ಮಹಿಳೆಯ ದೇಹವೆ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿರುವುದು.
ಬಸಮ್ಮ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈಯ್ದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿದ ಬಳಿಕ ಸಾಕ್ಷಿ ನಾಶಪಡಿಸಲು ಮೃತದೇಹ ಸುಟ್ಟು ಹಾಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡೂರು ಶ್ರೀನಿವಾಸಲು ಬಂದು ಪರಿಶೀಲನೆ ನಡೆಸಿದ್ದಾರೆ. ಜತೆಗೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹತ್ಯೆ ಬಳಿಕ ಸುಟ್ಟುಹಾಕಿರುವ ಸಂಬಂಧ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ.
Related
Deva
Leave a reply