ಕರ್ನಾಟಕ ರಾಜ್ಯ ಬಜೆಟ್ 2023-24: ಕನ್ನಡ ಚಿತ್ರರಂಗಕ್ಕೆ ಪ್ರೋತ್ಸಾಹ ನೀಡಲು ರಾಜ್ಯದ Tier – 2 ನಗರಗಳಲ್ಲಿ 100 ರಿಂದ 200 ಆಸನಗಳ ಸಾಮರ್ಥ್ಯವುಳ್ಳ ಮಿನಿ ಥಿಯೇಟರ್ಗಳನ್ನ ಸ್ಥಾಪಿಸಲು ಪ್ರೋತ್ಸಾಹ.
ಮನೆ ಮನೆಗೆ ಆರೋಗ್ಯ ಯೋಜನೆಯಡಿ ಪ್ರತಿ ಹಳ್ಳಿಯಲ್ಲಿ ವರ್ಷದಲ್ಲಿ ಎರಡು ಬಾರಿ ಆರೋಗ್ಯ ಶಿಬಿರ. ಸ್ಥಳೀಯ ಆರೋಗ್ಯ ಕೇಂದ್ರಗಳ ಮೂಲಕ ಆಯೋಜನೆ.
ತೀವ್ರವಾದ ಕಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ ಚಿಕಿತ್ಸೆ ಕೊಡಲು ಯೋಜನೆ. ಜತೆಗೆ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿ ತಲುಪಿಸಲು ಯೋಜನೆಯಡಿ ಕ್ರಮ.
ಗ್ರಾಮ ಸಹಾಯಕರಿಗೆ ಜನಸೇವಕ ಎಂದು ಮರುನಾಮಕಾರಣ. ಜತೆಗೆ 13 ಸಾವಿರ ರೂ.ಗಳಿದ್ದ ಗೌರವಧನವನ್ನ 14 ಸಾವಿರಕ್ಕೆ ಏರಿಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ 9 ಕಾನೂನು ಸುವ್ಯವಸ್ಥೆ, ಆರು ಮಹಿಳಾ, ಐದು ಸಂಚಾರಿ ಠಾಣೆಗಳನ್ನ ಹೊಸದಾಗಿ ಸ್ಥಾಪಿಸಲಾಗುವುದು.
ತವರಿಗೆ ವಿಶೇಷ ಕೊಡುಗೆ ಕೊಟ್ಟ ಸಿಎಂ: ಹಾವೇರಿ ಜಿಲ್ಲೆ ಸವಣೂರಿನಲ್ಲಿ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ.
ಮಾನವ-ಆನೆ ಸಂಘರ್ಷವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ 12 ಕಿ.ಮೀ. ರೈಲ್ವೆ ಬ್ಯಾರಿಕೇಡ್, 36 ಕಿ.ಮೀ. ಆನೆ ನಿರೋಧಕ ಕಂದಕ, 186 ಕಿ.ಮೀ. ಸೌರಶಕ್ತಿ ಬೇಲಿ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. 2022-23ನೇ ಸಾಲಿನಲ್ಲಿ ಈ ಕಾಮಗಾರಿಗಳಿಗೆ ಒದಗಿಸಲಾಗಿದೆ. 150 ಕೋಟಿ ರೂ.ಗಳ ಅನುದಾನ.
ಸಂಸ್ಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣಾ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 3,458 ಕೋಟಿ ರೂ. ಅನುದಾನ.
ಆಸಿಡ್ ದಾಳಿಗೆ ಒಳಗಾದವರಿಗೆ ಬಡ್ಡಿ ರಹಿತ ಸಾಲ ಘೋಷಣೆ: ರಾಜೀವ್ ಗಾಂಧಿ ವಸತಿ ನಿಗಮ ದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಬಡ್ಡಿ ರಹಿತ ಸಾಲ
ಇದಲ್ಲದೇ ಉತ್ಕೃಷ್ಟ ಚಿಕಿತ್ಸೆ ಮತ್ತು ಕಾನೂನು ನೆರವು ನೀಡಲು ಮಹಿಳಾ ಅಭಿವೃದ್ಧಿ ನಿಗಮದಲ್ಲಿ ವಿಶೇಷ ನಿಧಿ ಸ್ಥಾಪನೆ.
ಮಹಿಳೆಯರಿಗೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ: ಶೂನ್ಯ ಬಡ್ಡಿದರದಲ್ಲಿ ಸ್ವಸಹಾಯ ಗುಂಪುಗಳಿಗೆ ಸಾಲ. ಮಹಿಳಾ ಕೃಷಿ ಕಾರ್ಮಿಕಕರಿಗೆ ತಿಂಗಳಿಗೆ 500 ಸಹಾಯ ಧನ ಡಿಬಿಟಿ ಮೂಲಕ ನೀಡಲು ನಿರ್ಧಾರ. ಗೃಹಿಣಿಯರು ಮನೆಯಲ್ಲೇ ಲಾಭದಾಯಕ ಒಂದು ಲಕ್ಷ ಮಹಿಳೆಯರಿಗೆ ಕೌಶಲ್ಯಾಭಿವೃದ್ದಿ. ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆ.
![](https://vijayapatha.in/wp-content/uploads/2024/02/QR-Code-VP-1-1-300x62.png)