NEWSನಮ್ಮರಾಜ್ಯರಾಜಕೀಯಶಿಕ್ಷಣ-

ರಾಜ್ಯ ಬಜೆಟ್‌: ಪ್ರತೀ ಗ್ರಾ.ಪಂಗೆ – 22ರಿಂದ 60 ಲಕ್ಷ ರೂಪಾಯಿ ಅನುದಾನ

ವಿಜಯಪಥ ಸಮಗ್ರ ಸುದ್ದಿ

ಕರ್ನಾಟಕ ರಾಜ್ಯ ಬಜೆಟ್‌ 2023-24: ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ (Balancing reservoir) ನಿರ್ಮಿಸಲು ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ. ಸದರಿ ಯೋಜನೆಯು ಅಂತರ್‌ರಾಜ್ಯ ಯೋಜನೆಯಾಗಿದ್ದು, ಈಗಾಗಲೇ ಆಂಧ್ರಪ್ರದೇಶ ಸರ್ಕಾರದೊಂದಿಗೆ ಸಭೆ ನಡೆಸಲಾಗಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ – 5,000 ಕೋಟಿ ನೀಡಲಾಗಿದೆ. ಗ್ರಾಮೀಣ ರಸ್ತೆ, ಜಮೀನಿಗೆ ಸಂಪರ್ಕ – 300 ಕೋಟಿ. ಗ್ರಾಮಗಳಲ್ಲಿ ಚರಂಡಿ ವ್ಯವಸ್ಥೆ – 4,190 ಕೋಟಿ. 1 ಸಾವಿರ ಗ್ರಾಮೀಣ ಗ್ರಂಥಾಲಯಗಳ ಅಭಿವೃದ್ದಿ. ಪ್ರತೀ ಗ್ರಾ.ಪಂ.ಗೆ – 22ರಿಂದ 60 ಲಕ್ಷ ಅನುದಾನ. ಗ್ರಾ.ಪಂ.ಗಳಿಗೆ ಒಟ್ಟು 780 ಕೋಟಿ ಮೀಸಲು. ಜಲಜೀವನ್ ಮಿಷನ್ ಯೋಜನೆ – 6,234 ಕೋಟಿ. ಬಿಸಿಯೂಟ ಕೊಠಡಿ – ಪ್ರತೀ ಜಿಲ್ಲೆಗೆ 18 ಲಕ್ಷ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಬಜೆಟ್​ ಮಂಡಿಸಿದ್ದಾರೆ.

ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ರಾಜ್ಯವು ದಾವೆ ಹೂಡಿದ್ದು, ಇದನ್ನು ಶೀಘ್ರದಲ್ಲಿಯೇ ಇತ್ಯರ್ಥಪಡಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು.

ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ತುಮಕೂರು ಜಿಲ್ಲೆವರೆಗಿನ ಪೂರೈಸಲು ಗುರುತ್ವ ಕಾಲುವೆ ಮತ್ತು ಫೀಡರ್ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಿ. 2023-240 ನೀರು ಉದ್ದೇಶಿಸಲಾಗಿದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರನ್ನು ಪೂರೈಸುವ ಕಾಮಗಾರಿಗಳನ್ನು ಪ್ರಾರಂಭಿಸಿ ಪೂರ್ಣಗೊಳಿಸಲಾಗುವುದು.

ಕೇಂದ್ರ ಸರ್ಕಾರವು 2023-24ನೇ ಸಾಲಿನ ಆಯವ್ಯಯದಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಸರ್ಕಾರದ ತೀವ್ರ ಪ್ರಯತ್ನದ ಫಲವಾಗಿ `ರಾಷ್ಟ್ರೀಯ ಯೋಜನೆ’ ಮಾನ್ಯತೆ ದೊರೆಯುವ ಹಿನ್ನಲೆಯಲ್ಲಿ, ಕೇಂದ್ರ ಸರ್ಕಾರವು 5,300 ಕೋಟಿ ರೂ. ಸಹಾಯಧನ ಘೋಷಣೆ ಮಾಡಿದೆ. ಇದಕ್ಕಾಗಿ ರಾಜ್ಯದ ಜನತೆಯ ಪರವಾಗಿ ಸನ್ಮಾನ್ಯ ಪ್ರಧಾನ ಮಂತ್ರಿಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸದರಿ ಯೋಜನೆಯ ತೀವ್ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರವು ಬದ್ಧವಾಗಿದೆ.

ಕಳಸಾ ಮತ್ತು ಬಂಡೂರಾ ನಾಲಾ ತಿರುವು ಯೋಜನೆಗಳಿಗೆ ಮಹದಾಯಿ ನ್ಯಾಯಾಧಿಕರಣದಿಂದ ಹಂಚಿಕೆಯಾದ 3.90 TMC ನೀರಿನ ಬಳಕೆಗಾಗಿ ವಿವರವಾದ ಯೋಜನಾ ವರದಿಗಳಿಗೆ (DPR) ಪ್ರಸಕ್ತ ಸರ್ಕಾರದ ಸತತ ಪ್ರಯತ್ನಗಳಿಂದಾಗಿ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಪಡೆಯಲಾಗಿದೆ.

ಈ ಹಿನ್ನೆಲೆಯಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಯೋಜನೆಯ ಕಾಮಗಾರಿಗಳನ್ನು ಪ್ರಾರಂಭಿಸಲು 1,000 ಕೋಟಿ ರೂ. ಗಳನ್ನು ನೀಡಲು ಉದ್ದೇಶಿಸಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ತ್ವರಿತ ಕ್ರಮಗಳನ್ನು ಕೈಗೊಳ್ಳಲಾಗುವುದು.

ಸಸಾಲಟ್ಟಿ-ಶಿವಲಿಂಗೇಶ್ವರ, ಮಂಟೂರು ಮಹಾಲಕ್ಷ್ಮೀ ಮತ್ತು ಶ್ರೀ ವೆಂಕಟೇಶ್ವರ ಏತ ನೀರಾವರಿ ಯೋಜನೆಗಳು ಮತ್ತು ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ ಪ್ರಗತಿಯಲ್ಲಿರುವ ಜಗಳೂರು, ಕಿತ್ತೂರು, ಬಾಳಂಬೀಡ, ಹರಪನಹಳ್ಳಿ, ಯಾದಗಿರಿ, ರಾಯಚೂರಿನ ವಿವಿಧ ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಈ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.

ನೀರಾವರಿಗೆ ಆದ್ಯತೆ ದೃಷ್ಟಿಯಿಂದ ನಮ್ಮ ಸರ್ಕಾರವು 2022-23ನೇ ಸಾಲಿನಲ್ಲಿ ಒಟ್ಟು 11,236 ಕೋಟಿ ರೂ. ಮೊತ್ತದ 38 ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಪ್ರಸಕ್ತ ಸಾಲಿನಲ್ಲಿಅನುಷ್ಠಾನಗೊಳಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಜಲಸಂಪನ್ಮೂಲ ಇಲಾಖೆಯ ವತಿಯಿಂದ ಸುಮಾರು 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯವನ್ನು ಸೃಜಿಸಲಾಗುವುದು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...