NEWSಕೃಷಿರಾಜಕೀಯ

ರೈತರ ಬಗ್ಗೆ ಕಾಳಜಿ ಇಲ್ಲದ ಶತಮೂರ್ಖ ಬಿಜೆಪಿ ಸಂಸದ ತೇಜಸ್ವಿ ಸೂರ್ಯ : ರೈತ ಮುಖಂಡರ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಯಾವುದೇ ಉಪಯೋಗವಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆಗೆ ರೈತ ಮುಖಂಡರು ಕಿಡಿಕಾರಿದ್ದಾರೆ.

ನಿನ್ನೆ ಮಂಗಳೂರಿನಲ್ಲಿ ಮಾತನಾಡಿದ್ದ ಸಂಸದ ಸೂರ್ಯ, 2008ರಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ 2009ರ ಚುನಾವಣೆ ಗಮನದಲ್ಲಿಟ್ಟುಕೊಂಡು ಬಜೆಟ್‌ನಲ್ಲಿ 1 ಲಕ್ಷ ಕೋಟಿ ರೂಪಾಯಿ ರೈತರ ಸಾಲವನ್ನು ಮನ್ನಾ ಮಾಡಿತ್ತು. ಸಾಲ ಮನ್ನಾದಿಂದ ತಾತ್ಕಾಲಿಕವಾಗಿ ರೈತರಿಗೆ ಒಂದಿಷ್ಟು ಉಪಯೋಗವಾಯಿತು. ಆದರೆ, ದೇಶದ ಆರ್ಥಿಕತೆಗೆ ಯಾವುದೇ ಉಪಯೋಗವಾಗಲಿಲ್ಲ ಎಂದು ರೈತರ ಬಗ್ಗೆ ಕೀಳು ಮಟ್ಟದಲ್ಲಿ ಹೇಳಿದ್ದರು. ಅದಕ್ಕೆ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಸ್ಥಾನದ ಹನುಮಾನ್ ಗಾಡ್‌ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ನಡೆಯುತ್ತಿರುವ ರೈತ ಪಂಚಾಯತ್‌ನಲ್ಲಿ ಭಾಗವಹಿಸಿರುವ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಅಲ್ಲಿಂದಲೇ ಸಂಸದರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಲೋಕಸಭಾ ಸದಸ್ಯನಾಗಿ ಇದ್ದರೆ ಸಾಲದು ರೈತರ ಶ್ರಮವನ್ನು ಅರ್ಥ ಮಾಡಿಕೊಳ್ಳಬೇಕು. ರೈತರು ಬೆಳೆದಿರುವ ಅನ್ನ ತಿನ್ನುವ ಬಾಯಲ್ಲಿ ಈ ರೀತಿ ಹೇಳಿಕೆ ನೀಡುವುದಕ್ಕೆ ನಿನಗೆ ನಾಚಿಕೆ ಆಗುವುದಿಲ್ಲ ವೇ ಎಂದು ತೇಜಸ್ವಿ ಸೂರ್ಯ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಇನ್ನು ಫೆ.1ರಂದು ನಡೆದ ಕೇಂದ್ರ ಬಜೆಟ್‌ ಅಧಿವೇಶನದಲ್ಲಿ ಬಂಡವಾಳಶಾಹಿಗಳ, ಕೈಗಾರಿಕೋದ್ಯಮಿಗಳ ಸಾಲ ಮನ್ನಾ ಮಾಡಿದಾಗ ದೇಶಕ್ಕೆ ಯಾವ ಲಾಭ ಆಗಿದೆ. ಕೇಂದ್ರ ಸರ್ಕಾರಕ್ಕೆ, ಬಿಜೆಪಿ ಪಕ್ಷಕ್ಕೆ ಅಥವಾ ಮೋದಿಯವರಿಗೆ ಲಾಭ ಆಗಿದೆಯಾ ಎಂಬುದರ ಬಗ್ಗೆ ಉತ್ತರಿಸಲಿ.

2022ರಲ್ಲಿ ದೇಶದ ರೈತರ ಆದಾಯ ದ್ವಿಗುಣ ಮಾಡುವುದಾಗಿ, ದೆಹಲಿ ರೈತ ಹೋರಾಟದ ವೇಳೆ ಬೆಂಬಲ ಬೆಲೆ ಖಾತ್ರಿ ಮಾಡುವ ಶಾಸನ ತರುವುದಾಗಿ ಪ್ರಧಾನಿ ಮೋದಿ ಕೊಟ್ಟಿದ್ದ ಭರವಸೆ ಇದುವರೆಗೂ ಈಡೇರಿಲ್ಲ. ಸಂಸದ ಸ್ಥಾನದಲ್ಲಿರುವ ತೇಜಸ್ವಿ ಸೂರ್ಯ ಅನ್ನ ತಿನ್ನುವಾಗಲಾದರೂ ರೈತರನ್ನು ನೆನಪಿಸಿಕೊಂಡು, ಇಂತಹ ಅವಿವೇಕಿತನದ ಹೇಳಿಕೆ ನೀಡುವುದನ್ನಯ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, “ತೇಜಸ್ವಿ ಸೂರ್ಯ ಎಂಬ ಅವಿವೇಕಿಗೆ ರೈತ ಸಂಸ್ಕೃತಿ, ಕೃಷಿ ಸಮುದಾಯದ ಗಂಧ-ಗಾಳಿಯೂ ಗೊತ್ತಿಲ್ಲ. ದೇಶದಲ್ಲಿ ಕೃಷಿ ಕ್ಷೇತ್ರದಲ್ಲಿಯೇ ಶೇ.63 ಉದ್ಯೋಗ ದೊರೆಯುತ್ತಿದೆ, ಶೇ.60ರಷ್ಟು ತೆರಿಗೆಯನ್ನು ರೈತರು ಪಾವತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅದಾನಿ, ಅಂಬಾನಿ, ಮಲ್ಯ ಸೇರಿದಂತೆ ಕಾರ್ಪೊರೇಟ್‌ ಕಂಪನಿ ಮಾಲೀಕರ 9.91 ಸಾವಿರ ಕೋಟಿ ರೂ.ಗಳ ಸಾಲ ಮನ್ನಾ ಮಾಡಿದೆ. ಅದರಿಂದ ದೇಶಕ್ಕೆ ಯಾವ ಲಾಭ ಕೊಡಿಸುತ್ತಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇಶದಲ್ಲಿ ಬಡತನ, ನಿರುದ್ಯೋಗ, ಅಪೌಷ್ಟಿಕತೆ, ಆಹಾರ ಸಮಸ್ಯೆ, ರೈತ-ಕಾರ್ಮಿಕರ ಆತ್ಮಹತ್ಯೆಗಳು ಹೆಚ್ಚಿದ್ದು, ಅದನ್ನು ಪರಿಹರಿಸುವ ಬದಲು ಕೇಂದ್ರ ಸರ್ಕಾರ ಕಾರ್ಪೊರೇಟ್ ಕೃಷಿಗೆ ಮಣೆ ಹಾಕುತ್ತಿದೆ. ನಿಜ ಭಾರತವನ್ನು ಅರಿಯಲು, ರೈತರು, ಕೃಷಿ ಕೂಲಿ ಕಾರ್ಮಿಕರ ಸಂಕಷ್ಟ ಏನು ಎಂಬುದು ಅರ್ಥವಾಗಿಲ್ಲದಿದ್ದರೆ ಸಂಸದ ತೇಜಸ್ವಿ ಸೂರ್ಯ ಹಳ್ಳಿಗಳನ್ನು ಸುತ್ತಿ ಅಧ್ಯಯನ ನಡೆಸಲಿ ಎಂದು ಕಿಡಿ ಕಾರಿದ್ದಾರೆ.

ಶತಮೂರ್ಖನ ರೀತಿ ಮಾತು: ಜಗತ್ತು ಆರ್ಥಿಕ ಹಿಂಜರಿತದಿಂದ ಹೊರಬರಬೇಕಾದರೆ ಜನತೆಯಲ್ಲಿ ಕೊಳ್ಳುವ ಶಕ್ತಿ ಹೆಚ್ಚಬೇಕೆಂದು ಅರ್ಥಶಾಸ್ತ್ರಜ್ಞರು ಸಲಹೆ ನೀಡುತ್ತಿದ್ದಾರೆ. ರೈತ ಮಾರುಕಟ್ಟೆಗೆ ತನ್ನ ಬೆಳೆ ಮಾರಲು ಹೋದಾಗ ಬೆಲೆ ಸಿಗದೆ ಪರದಾಡಿದರೆ, ಕೊಳ್ಳಲು ಹೋದಾಗ ದುಬಾರಿ ಬೆಲೆ ಪಾವತಿಸಲು ಹೆಣಗಾಡುತ್ತಿದ್ದಾನೆ.

ಒಟ್ಟಾರೆ ಎರಡು ಹಂತದಲ್ಲಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿ ಸಾಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅರ್ಥ ವ್ಯವಸ್ಥೆಯ ಎಬಿಸಿಡಿಯೂ ಗೊತ್ತಿಲ್ಲದ ಸಂಸದ ತೇಜಸ್ವಿ ಸೂರ್ಯ ಶತಮೂರ್ಖನ ರೀತಿ ಮಾತನಾಡಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಟಿ. ಯಶವಂತ್‌ ಕಿಡಿ ಕಾರಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು