NEWSದೇಶ-ವಿದೇಶನಮ್ಮರಾಜ್ಯ

ರಾಷ್ಟ್ರೀಯ ಯುವಜನ ಉತ್ಸವಕ್ಕೆ ಸರ್ಕಾರ ಸಜ್ಜು : ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಜನವರಿ 12ರಿಂದ 16ರವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಅನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಇದೇ 12ರಿಂದ 16ವರಗೆ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ವಿಕಸಿತ್ ಯುವ- ವಿಕಸಿತ್ ಭಾರತ್ ಎಂಬ ವಿಷಯದಡಿ ನಡೆಯಲಿರುವ ಈ ಉತ್ಸವವನ್ನು ಸ್ವಾಮಿ ವಿವೇಕಾನಂದರ ಜನ್ಮದಿನವಾದ ಇದೇ 12ರಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಯಲ್ಲಿ ಉದ್ಘಾಟಿಸಲಿದ್ದಾರೆ. ಉತ್ಸವದಲ್ಲಿ ದೇಶದ ವಿವಿಧೆಡೆಯಿಂದ ಸುಮಾರು 7,500 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಲಾಂಛನ: ಒಡಿಶಾದ ಬನ್ಸಿಲಾಲ್ ಕೇತ್ಕಿ ರೂಪಿಸಿದ ಲಾಂಛನವನ್ನು ಉತ್ಸವಕ್ಕೆ ಆಯ್ಕೆ ಮಾಡಲಾಗಿದ್ದು, ಅವರಿಗೆ ₹ 50 ಸಾವಿರ ಬಹುಮಾನ ದೊರೆಯಲಿದೆ. ಈ ಲಾಂಛನ ಭಾರತದ ರಾಷ್ಟ್ರೀಯ ಪುಷ್ಪವಾದ ತಾವರೆಯಿಂದ ಪ್ರೇರೇಪಿತವಾಗಿದ್ದು, ರಾಷ್ಟ್ರೀಯತೆ, ನಿಸ್ವಾರ್ಥ ಸೇವೆ ಮತ್ತು ವೈವಿಧ್ಯತೆಯ ನಡುವೆಯೂ ಇರುವ ಏಕತೆ ಹಾಗೂ ಸಹಕಾರವನ್ನು ಪ್ರತಿನಿಧಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ, ವಿದೇಶಾಂಗ ವ್ಯವಹಾರ ಹಾಗೂ ಸೇನಾಬಲದಲ್ಲಿ ಭಾರತದ ಉನ್ನತಿಯನ್ನು ಬಿಂಬಿಸುವ ಜೊತೆಗೆ, ಜಿ20 ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನೂ ಅಭಿವ್ಯಕ್ತಿಸುತ್ತದೆ.

‘ಚಂಪಿ ಚಿಕ್ಕ’: ಬೆಂಗಳೂರಿನ ಇನ್ಬಂ ಅವರು ರೂಪಿಸಿದ ‘ಚಂಪಿ ಚಿಕ್ಕ’ ಮ್ಯಾಸ್ಕಟ್ ಆಯ್ಕೆಯಾಗಿದ್ದು, ಅವರಿಗೂ ₹ 50 ಸಾವಿರ ಬಹುಮಾನ ದೊರೆಯಲಿದೆ. ಇದು ಆನೆಯ ವಿನ್ಯಾಸವನ್ನು ಹೊಂದಿದ್ದು, ಕರ್ನಾಟದಲ್ಲಿ ಅತಿ ಹೆಚ್ಚಿರುವ ಆನೆಗಳ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ. ಜೊತೆಗೆ ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ, ವಿಶ್ವ ಶಾಂತಿಯ ಜೊತೆಗೆ ಕ್ರೀಡೆ, ಸ್ಟಾರ್ಟ್‌ಅಪ್‌, ನಾವಿನ್ಯತೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿರುವ ಯುವ ಮತ್ತು ಆಧುನಿಕ ಭಾರತವನ್ನು ಬಿಂಬಿಸುತ್ತದೆ.

ಲಾಂಛನ ಬಿಡುಗಡೆಯ ಬಳಿಕ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಯುವಜನ ಉತ್ಸವ ಸಮಿತಿಯ ಸಭೆ ನಡೆಸಲಾಯಿತು. ರಾಷ್ಟ್ರೀಯ ಯುವಜನೋತ್ಸವ ಯಶಸ್ವಿಗೊಳಿಸುವ ಕುರಿತಂತೆ ಉದ್ಘಾಟನೆ, ಸಿದ್ದತೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಯುವಜನ ಮೇಳದಲ್ಲಿ ಯುವ ಶಾಸಕರು, ಸಂಸದರು ಹಾಗೂ ಇತರ ಜನಪ್ರತಿನಿಧಿಗಳ ಗೋಷ್ಠಿಯನ್ನು ಆಯೋಜಿಸಲು ತೀರ್ಮಾನಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ, ನಟಿ ತಾರಾ ಅನೂರಾಧ, ಯುವಜನ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಇದ್ದರು. ಈ ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ, ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಘ್‌ ಠಾಕೂರ್‌ ಕೂಡ ಭಾಗವಹಿಸಿದ್ದರು.

[wp-rss-aggregator limit=”4″ pagination=”on” page=”2″]

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ