CrimeNEWSನಮ್ಮರಾಜ್ಯ

ವಂಚನೆ ಆರೋಪ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುದಾಪುರ ಅಸ್ವಸ್ಥ – ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿರುವ ಆರೋಪ ಸಂಬಂಧ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುದಾಪುರ ಅವರು ಅಸ್ವಸ್ಥರಾಗಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಿಳಾ ಸಾಂತ್ವನ ಕೇಂದ್ರದಿಂದ ಬಂದ ಅರ್ಧ ಗಂಟೆಯಲ್ಲೇ ಚೈತ್ರಾ ಮೂರ್ಛೆ ಹೋಗಿದ್ದಾರೆ. ಕೂಡಲೇ ಅವರನ್ನು ವಿಕ್ಟೋ ರಿಯಾಆಸ್ಪತ್ರೆಗೆ ರವಾನಿಸಲಾಗಿದ್ದು, ಚೈತ್ರಾ ಬೆಳಗಿನ ಟಿಫಿನ್ ಕೂಡಮಾಡಿರಲಿಲ್ಲ ಹೀಗಾಗಿ ಹೀಗೆ ಆಗಿರಬಹುದು ಎನ್ನಲಾಗುತ್ತಿದೆ.

ಇನ್ನು ಇತ್ತ ನಿನ್ನೆ ವಿಚಾರಣೆ ಬಳಿಕ ಡೈರಿ ವೃತ್ತದಲ್ಲಿರುವ ಮಹಿಳಾ ಸ್ವಾಂತನ ಕೇಂದ್ರಕ್ಕೆ ಚೈತ್ರಾ ಅವರನ್ನು ಬಿಡಲಾಗಿತ್ತು. ಆದರೆ ಇಂದು ಸೆ.15ರಂದು ಮತ್ತೆ ಸಿಸಿಬಿ ಕಚೇರಿಗೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಚೈತ್ರಾ ಅಸ್ವಸ್ಥರಾಗಿದ್ದಾರೆ.

ಏನಿದು ಪ್ರ ಕರಣ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧಿತರಾದ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಐವರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚೈತ್ರಾ ಕುಂದಾಪುರ, ರಮೇಶ್, ದೇವರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಬಂಧಿಸಿ ಇದೇ ಸೆಪ್ಟೆಂಬರ್ 14ರಂದು ಬೆಂಗಳೂರಿನ ಸಿಸಿಬಿ ಕಚೇರಿಗೆ ಅಧಿಕಾರಿಗಳು
ಕರೆತಂದಿದ್ದರು.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಆರೋಪಿಗಳ ವಿರುದ್ಧ 5 ಕೋಟಿ ರೂ.ಗೂ ಹೆಚ್ಚು ಹಣ ವಂಚನೆ ಮಾಡಿರುವ ಆರೋಪಿವಿದ್ದು, ಕೃತ್ಯ ಎಸಗಲು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದರು.

ಇನ್ನು ಬಂಧಿತರಿಂದ ಹಣವನ್ನು ರಿಕವರಿಮಾಡಿಕೊಳ್ಳಬೇಕಿದೆ. ಈ ಸಂಬಂಧ 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಬೇಕು ಎಂದು ಸಿಸಿಬಿ ಪರ ವಕೀಲರು ಮನವಿಮಾಡಿದ್ದರು. ಮನವಿಗೆ ಪುರಸ್ಕರಿಸಿದ ನ್ಯಾಯಾಲಯವು ಸೆ.23ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪ್ರಕರಣದ ಮತ್ತೊಬ್ಬ ಆರೋಪಿತ ಗಗನ್ ಕಡೂರು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿಜಯನಗರದವ ಹಾಲಶ್ರೀ ಮಠದ ಅಭಿನವ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮೊಬೈಲ್ ಸ್ವಿಚ್‌
ಆಫ್‌ ಮಾಡಿಕೊಂಡು ಅಜ್ಞಾತ ಸ್ಥಳದಲ್ಲಿದ್ದಾರೆ. ಅವರ ಪತ್ತೆಗಾಗಿ ಸಿಸಿಬಿ ಶೋಧ ಕಾರ್ಯಚುರುಕುಗೊಳಿಸಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು