ವಿಜಯಪುರ: ಹೊಲದಲ್ಲಿ ಆಟವಾಡುತ್ತಿದ್ದ ವೇಳೆ ಎರಡು ವರ್ಷದ ಬಾಲಕ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿರೋ ಘಟನೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
ಸಾತ್ವಿಕ್ ಮುಜಗೊಂಡ (2) ಕೊಳವೆ ಬಾವಿಗೆ ಬಿದ್ದ ಬಾಲಕ. ಇತ್ತ ವಿಷಯ ತಿಳಿಯುತ್ತದ್ದಂತೆ ಕೂಡಲೇ ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ದೌಡಾಯಿಸಿ ಜೆಸಿಬಿ ಯಂತ್ರದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಆದರೆ, ಬಾಲಕನ ಸ್ಥಿತಿಯ ಬಗ್ಗೆ ಇನ್ನು ಯಾವುದೇ ಖಚಿತ ಮಾಹಿತಿ ಸಿಕ್ಕಿಲ್ಲ. ಇತ್ತ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದ್ದು, ಗ್ರಾಮದ ಸುತ್ತಮುತ್ತಲ ಜನರು ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)