NEWSನಮ್ಮರಾಜ್ಯರಾಜಕೀಯ

ವಿಧಾನಸಭಾ ಚುನಾವಣೆ ಮೇಲೆ ಕಣ್ಣು: ಎಎಪಿಯಿಂದ ನೂತನ ಪದಾಧಿಕಾರಿಗಳ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೇಮಕಾತಿಗಳ ಮೊದಲ ಪಟ್ಟಿ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಯ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರು, ರಾಜ್ಯದ ನೂತನ ಘಟಕ ಹಾಗೂ ಎಲ್ಲ ಜಿಲ್ಲೆಗಳ ಪದಾಧಿಕಾರಿಗಳನ್ನು ಘೋಷಿಸುವಾಗ, ಇದು ಪದಾಧಿಕಾರಿಗಳ ಮೊದಲ ಪಟ್ಟಿಯಾಗಿದೆ ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಪಟ್ಟಿಗಳನ್ನು ನಿರೀಕ್ಷಿಸಬಹುದು ಎಂದು ಹೇಳಿದ್ದಾರೆ.

ಕರ್ನಾಟಕದ ಘಟಕವನ್ನು ವಿಸರ್ಜಿಸಿದ್ದ ಆಮ್‌ ಆದ್ಮಿ ಪಾರ್ಟಿಯು ಹೊಸ ಪದಾಧಿಕಾರಿಗಳನ್ನು ಒಳಗೊಂಡ ನೂತನ ಸಂಘಟನಾ ಘಟಕವನ್ನು ಸೋಮವಾರ ಘೋಷಿಸಿತು.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ, “ಕಳೆದ ವಾರ ಕರ್ನಾಟಕದಲ್ಲಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಜಿಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿತ್ತು. ಗ್ರಾಮ ಸಂಪರ್ಕ ಅಭಿಯಾನದಿಂದಾಗಿ (ಜಿಎಸ್‌ಎ) ಆಮ್‌ ಆದ್ಮಿ ಪಾರ್ಟಿಗೆ ಕನ್ನಡಿಗರಿಂದ ಅಭೂತಪೂರ್ವ ಬೆಂಬಲ ದೊರೆತಿದ್ದು, ರಾಜ್ಯಾದ್ಯಂತ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹಾಗೂ ರಾಜಕೀಯ ಹೋರಾಟಗಾರರು ಸಿಕ್ಕಿದ್ದಾರೆ.

ಪರಿಣಾಮವಾಗಿ, ನಾವು ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡದಾಗಿ ಬೆಳೆದಿದ್ದೇವೆ. ಇವರು ಎಲ್ಲ ಮೂರು ಸಾಂಪ್ರದಾಯಿಕ ಪಕ್ಷಗಳಿಂದ ಮೋಸ ಹೋಗಿರುವವರು ಹಾಗೂ ಬಿಜೆಪಿಯ 40% ಸರ್ಕಾರಿಂದ ಬೇಸುತ್ತಿರುವವರಾಗಿದ್ದಾರೆ ಎಂದು ಹೇಳಿದರು.

ಜಿಎಸ್‌ಎ ಭಾಗವಾಗಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮುಂತಾದ ವಿವಿಧ ರಾಜಕೀಯ ಪಕ್ಷಗಳ ಜನರು ನಮ್ಮೊಂದಿಗೆ ಕೈಜೋಡಿಸುತ್ತಿದ್ದಾರೆ. ಇವರು ಕರ್ನಾಟಕದಲ್ಲಿ ಉತ್ತಮ ಬದಲಾವಣೆ ತರಬೇಕೆಂದು ಬಯಸುವ ಉತ್ತಮ ವ್ಯಕ್ತಿಗಳಾಗಿದ್ದಾರೆ. ಕರ್ನಾಟಕವು ಎಎಪಿ ಮೇಲೆ ವಿಶ್ವಾಸವಿಟ್ಟಿದೆ ಎನ್ನುವುದನ್ನು ಇದು ಸೂಚಿಸುತ್ತಿದೆ. ಅವರ ಬೆಂಬಲದಿಂದಾಗಿ ಆಮ್‌ ಆದ್ಮಿ ಪಾರ್ಟಿಯು ವಿಜಯದತ್ತ ಸಾಗಲಿದೆ ಎಂದರು.

ಇಂದು ನಾವು ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ರಚನೆ ಹಾಗೂ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳ ಪದಾಧಿಕಾರಿಗಳನ್ನು ಘೋಷಣೆ ಮಾಡುತ್ತಿದ್ದೇವೆ. ಈ ಘೋಷಣೆಯ ಭಾಗವಾಗಿ, ನಾವು ಪಟ್ಟಿಯ ಮೂರು ಪ್ರಮುಖ ಹುದ್ದೆಗಳನ್ನು ಹೇಳುತ್ತಿದ್ದೇವೆ. ಘೋಷಣೆಯ ಉಳಿದ ಭಾಗವಾದ ಬ್ಲಾಕ್‌ ಹಾಗೂ ಸರ್ಕಲ್‌ ಸಮಿತಿಗಳನ್ನು ಜಿಲ್ಲಾ ಮಟ್ಟದಲ್ಲಿ ಘೋಷಿಸಲಾಗುತ್ತದೆ ಎಂದು ತಿಳಿಸಿದರು.

ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಹಲವು ಆಕಾಂಕ್ಷಿಗಳು ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಕ್ಕಿದ್ದಾರೆ. ಸಾಧ್ಯವಾದಷ್ಟು ಬೇಗನೇ ರಚನೆಯನ್ನು ಜಾರಿಗೆ ತಂದು, ಫೆಬ್ರವರಿ ಮೊದಲ ವಾರದಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸುತ್ತೇವೆ ಎಂದರು.

ಇನ್ನು ಫೆಬ್ರವರಿ ಮಧ್ಯ ಭಾಗದೊಳಗೆ ಜಿಲ್ಲೆಗಳ ಹಾಗೂ ಸರ್ಕಲ್‌ಗಳ ಸಂಘಟನಾ ರಚನೆಯನ್ನು ಘೋಷಿಸುತ್ತೇವೆ. ಅದೇ ವೇಳೆಗೆ ಎಎಪಿಯು ಕರ್ನಾಟಕದ ಎಲ್ಲ 58,000 ಬೂತ್‌ಗಳನ್ನು ತಲುಪಲಿದೆ. ಬೇರೆ ಪಕ್ಷಗಳ ಸಂಘಟನೆಗಳಲ್ಲಿದ್ದು, ಅವರನ್ನು ನಂಬಿ ಮೋಸ ಹೋಗಿರುವ ಉತ್ತಮ ವ್ಯಕ್ತಿಗಳು ರಾಜ್ಯದಲ್ಲಿ ಬದಲಾವಣೆ ತರಲು ನಮ್ಮೊಂದಿಗೆ ಕೈಜೋಡಿಸಬಹುದು ಎಂದು ದಿಲೀಪ್‌ ಪಾಂಡೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎಎಪಿಯ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರ ಜೊತೆ ರಾಜ್ಯ ಸಂಘಟನಾ ಉಸ್ತುವಾರಿ ದಾಮೋದರನ್‌, ರಾಜ್ಯ ಸಂಘಟನಾ ಸಹ ಉಸ್ತುವಾರಿ ಉಪೇಂದ್ರ ಗಾವಂಕರ್‌, ಮಾಧ್ಯಮ ಮತ್ತು ಸಂವಹನಾ ವಿಭಾಗದ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, ಮಾಧ್ಯಮ ಉಸ್ತುವಾರಿ ಜಗದೀಶ್‌ ವಿ ಸದಂ ಮತ್ತಿತರರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು