ಚಾಮರಾಜನಗರ: ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು ಈ ಮಧ್ಯೆ ನಿನ್ನೆ (ಏ.11) ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಆ ಪಟ್ಟಿಯಲ್ಲಿ ವಸತಿ ಸಚಿವ ವಿ.ಸೋಮಣ್ಣಗೆ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರದಿಂದ ಟಿಕೆಟ್ ನೀಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ, ಚಾಮರಾಜನಗರ ಕ್ಷೇತ್ರದಿಂದ ಯಾರೇ ಸ್ಪರ್ಧಿಸಿದರೂ ಕೂಡ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ. ಸೋಮಣ್ಣ ಅಲ್ಲ ಯಾರೆ ಬಂದರೂ ಸ್ಪರ್ಧಿಸಲು ನಾನು ಸಿದ್ದನಿದ್ದೇನೆ. ವರುಣಾ ಚಾಮರಾಜನಗರ ಎರಡೂ ಕಡೆ ಸೋಮಣ್ಣ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದರು.
![](http://vijayapatha.news/wp-content/uploads/2023/04/12-April-puttaranga-shetty-300x164.jpg)
ಇನ್ನು ಸೋಮಣ್ಣ ಅವರನ್ನು ರಾಜಕೀಯವಾಗಿ ಮುಗಿಸಲು ಎರಡೂ ಕ್ಷೇತ್ರಗಳಿಗೆ ಕಳಿಸಿರಬಹುದು ಎಂದು ಶಾಸಕ ಪುಟ್ಟರಂಗಶೆಟ್ಟಿ ಲೇವಡಿ ಮಾಡಿದರು.
ಸೋಮಣ್ಣ ಅವರಿಗೆ ಅವರು ಗೆಲ್ಲುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಬಿಡಬೇಕಿತ್ತು. ಆದರೆ, ಅದನ್ನು ಮಾಡದೆ ಅವರನ್ನು ಹರಕೆಯ ಕುರಿ ಮಾಡಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.
![](https://vijayapatha.in/wp-content/uploads/2024/02/QR-Code-VP-1-1-300x62.png)