NEWSಕೃಷಿನಮ್ಮರಾಜ್ಯ

ಶಾಸಕರು, ಸಂಸದರು, ಮಂತ್ರಿಗಳಿಗೆ ಚಾಟಿ ಏಟು ಕೊಟ್ಟ ಕಬ್ಬು ಬೆಳೆಗಾರ ರೈತರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ 8 ನೇ ದಿನವು ಮುಂದುವರಿದ ರೈತರ ಅಹೋರಾತ್ರಿ ಧರಣಿಯಲ್ಲಿ ಇಂದು ಬಾರ್ ಕೋಲು ಚಳವಳಿ ನಡೆಸುವ ಮೂಲಕ ಶಾಸಕರು, ಸಂಸದರನ್ನು ಅಟ್ಟಾಡಿಸಿಕೊಂಡು ಚಡಿಯೇಟು ಕೊಡುವ ಮೂಲಕ ಪ್ರತಿಭಟಿಸಿದರು.

ನೀವು ಬಂಡವಾಳ ಶಾಹಿಗಳು ಮಾರವಾಡಿಗಳ ಪರ ಇದ್ದು ರೈತಪರ ಕೆಲಸ ಮಾಡದೆ ಇರುವುದು ಎಮ್ಮೆ ಕಾಯಲು ಲಾಯಕ್ಕು ಎಂದು ಚಾಟಿ ಏಟಿನಿಂದ ಒಡೆಯುವ ಮೂಲಕ ಅಣಕು ಪ್ರದರ್ಶನ ಮಾಡಿ ಮುಂದಿನ ಚುನಾವಣೆಯಲ್ಲಿ ನಮ್ಮ ಬಳಿ ಬಂದರೆ ಇದೇ ರೀತಿ ಚಾಟಿ ಏಟುಕೊಟ್ಟು ಮನೆಗೆ ಕಳುಹಿಸುತ್ತೇವೆ ಎಂದು ಎಚ್ಚರಿಸಿದರು.

ಎಚ್ಚರಿಕೆ ಎಚ್ಚರಿಕೆ ಶಾಸಕರೇ, ಸಂಸದರೇ ಮತ್ತು ಮಂತ್ರಿಗಳೇ ಎಚ್ಚರಿಕೆ ನಮ್ಮ ಕೈಯಲ್ಲಿ ಬಾರ್ಕೋಲ್ ಇದೆ, ನಮ್ಮ ಹಳ್ಳಿಗೆ ಬಂದಾಗ ಬಾರ್ಕೋಲ್ ನಲ್ಲಿ ಬಾರಿಸನೇಕಾಗುತ್ತೆ ಎಂದು ಘೋಷಣೆ ಕೂಗುತ್ತಾ, ಜಿಲ್ಲಾಧಿಕಾರಿ ಕಚೇರಿ ಮುಂದೆ ಶಾಸಕರು, ಸಂಸದರು, ಮಂತ್ರಿ, ವೇಸದಾರಿಗಳಿಗೆ ಬಾರ್ಕೋಲ್ನಿಂದ ಬಾರಿಸಲು ಯತ್ನಿಸಿದಾಗ, ರೈತರಿಗೆ ಹೆದರಿ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ಅಣಕ ಮಾಡಲಾಯಿತು.

ಸರ್ಕಾರ ಮಾರ್ವಾಡಿಗಳ ಬಂಡವಾಳಶಾಹಿಗಳ ರಿಮೋಟ್ ಕಂಟ್ರೋಲ್ ರೀತಿ ಕಾರ್ಯನಿರ್ವಹಿಸುತ್ತಿರುವುದರಿಂದ ರೈತರು ಬಲಿಪಶುಗಳಾಗುತ್ತಿದ್ದಾರೆ. ಟನ್ ಕಬ್ಬಿಗೆ 7500 ರೂ.ಗೂ ಹೆಚ್ಚು ಆದಾಯ ಇದೆ. ಒಂದು ಟನ್ ಕಬ್ಬಿನಿಂದ ನೂರು ಲೀಟರ್ ಯಥನಾಲ್ ಬರುತ್ತದೆ ಕೇಂದ್ರ ಸರ್ಕಾರ ನಿಗದಿ ಮಾಡಿರುವ ದರ ಲೀಟರಿಗೆ 65 ರೂ. ಹಾಗೂ ಕಬ್ಬಿನ ಸಿಪ್ಪೆಯಿಂದ 144 ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತದೆ ನಂತರ ಮಡ್ಡಿಯಿಂದ ಗೊಬ್ಬರ ಉತ್ಪಾದಿಸಲಾಗುತ್ತದೆ ಎಲ್ಲ ಸೇರಿ 7,500 ರೂ. ಆದಾಯ ಬರುತ್ತದೆ, ವರ್ಷಕಾಲ ಕಷ್ಟಪಟ್ಟು ಬೆಳೆದ ರೈತನಿಗೆ 3,000 ಮಾತ್ರ, ಯಾಕೆ ಈ ರೀತಿ ಅನ್ಯಾಯ ಎಂಬುದು ನಮ್ಮ ಪ್ರಶ್ನೆ ಎಂದು ಬಾರ್ ಕೋಲ್ ಚಳವಳಿಯ ನೇತೃತ್ವ ವಹಿಸಿ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.

60 -70 ವರ್ಷಗಳಿಂದ ಕೃಷಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ರೈತರ ಜಮೀನುಗಳನ್ನು ಕಿತ್ತುಕೊಳ್ಳಲು ಗಣಕಿಕರಣವಾಗುವಾಗ, ದಳ್ಳಾಳಿಗಳು ರಿಯಲ್ ಎಸ್ಟೇಟ್ ಮಾಫಿಯಾದವರು ಬೆಂಗಳೂರು ಮೈಸೂರ್ ನಗರದಲ್ಲಿರುವ ಹಣ ಕೊಟ್ಟ ಶ್ರೀಮಂತರೇ ಹೆಸರಿಗೆ ದಾಖಲಾತಿಗಳನ್ನು ಸೃಷ್ಟಿ ಮಾಡಿ ರಾಜ್ಯದಲ್ಲಿ ಲಕ್ಷಾಂತರ ರೈತರನ್ನು ಒಕ್ಕಲೆಬ್ಬಿಸಲು ಪ್ರಯತ್ನ ಮಾಡುತ್ತಿದ್ದಾರೆ.

ನಿಜವಾಗಿ ಸಾಗುವಳಿ ಮಾಡುತ್ತಿದ್ದ ರೈತರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಸರ್ಕಾರ ತನಿಖೆ ನಡೆಸಿ ನ್ಯಾಯ ಕೊಡಬೇಕು ಎಂಬುದು ನಮ್ಮ ಹೋರಾಟದ ಗುರಿ. ಆದರೆ ಎಂಎಲ್ಎ, ಮಂತ್ರಿಗಳು, ಜನಸೇವೆಗಾಗಿ ಬಂದು ಜನರನ್ನ ಮರೆತಿದ್ದಾರೆ. ಅದಕ್ಕಾಗಿ ಎಚ್ಚರಿಸಲು ಬಾರ್ ಕೋಲ್ ಚಳವಳಿ ನಡೆಸಲಾಗುತ್ತಿದೆ. ಇನ್ನು ಮುಂದೆಯೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಚುನಾವಣೆಯಲ್ಲಿ ಹಳ್ಳಿಗಳಿಗೆ ಬಂದಾಗ ರೈತರು ಬಾರ್ಕೋಲ್ ಮೂಲಕವೇ ಉತ್ತರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್,ಕೆರೆಹುಂಡಿ ರಾಜಣ್ಣ, ಹಾಡ್ಯ ರವಿ, ಅಂಬಳೆ ಮಂಜುನಾಥ್, ಲಕ್ಷ್ಮೀಪುರ ವೆಂಕಟೇಶ್, ವರಕೂಡು ಜಯರಾಮು, ಟಿ.ರಾಮೇಗೌಡ, ಸೋನಹಳ್ಳಿ ದೊರೆಸ್ವಾಮಿ, ಬಸವಣ್ಣ, ಮಂಜುನಾಥ್, ಕುರುಬೂರು ಮಂಜು, ಮಾರ್ಬಳ್ಳಿ ನೀಲಕಂಠಪ್ಪ, ಚುಂಚರಾಯನಹುಂಡಿ ತಮಯಪ್ಪ,ಮಲ್ಲಪ್ಪ, ಮಾದೇವಸ್ವಾಮಿ,ಮುದ್ದಹಳ್ಳಿ ಶಿವಣ್ಣ, ದಿನೇಶ್ ಮುಂತಾದವರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು